ಬೆಂಗಳೂರು: ವಿಶ್ವ ಹುಲಿ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ನಯನ ಕನ್ನಡ ಭವನದಲ್ಲಿ ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್(ರೀ) ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಅಂಬಿಕಾ ಸಿ. ರವರ ನೇತೃತ್ವದಲ್ಲಿ “ನಶಿಸಿ ಹೋಗುತ್ತಿರುವ ಹುಲಿ ಸಂತತಿ – ಸಂರಕ್ಷಣೆ” ಕುರಿತ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ, ಹುಲಿಯ ವೇಷ ಧರಿಸಿ ನೃತ್ಯ ಪ್ರದರ್ಶನ, ನಾಟಕ, ಚಿತ್ರಕಲೆ, ಮತ್ತು ಛಾಯಾಚಿತ್ರ ಪ್ರದರ್ಶನದಂತಹ ವಿವಿಧ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮವು ಹುಲಿಗಳ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಗುರಿಯನ್ನು ಹೊಂದಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಅರಣ್ಯ ಅಧಿಕಾರಿ ಶ್ರೀ ನಾಗಭೂಷಣ್, ಇಂದು ಸಂಜೆ ಪತ್ರಿಕೆಯ ಸಂಪಾದಕಿ ಶ್ರೀಮತಿ ಪದ್ಮ ನಾಗರಾಜ್, ನಟ-ನಿರ್ಮಾಪಕ ಶ್ರೀ ಗಂಡಸಿ ಸದಾನಂದ ಸ್ವಾಮಿ, ಹಿರಿಯ ಪತ್ರಕರ್ತೆ ಶ್ರೀಮತಿ ಶಾಂತಕುಮಾರಿ, ಆಕಾಶವಾಣಿಯಲ್ಲಿ ಕಾರ್ಯನಿರ್ವಹಿಸಿದ ಶ್ರೀ ನಟರಾಜ್, ವನ್ಯಜೀವಿ ಛಾಯಾಗ್ರಾಹಕ ಶ್ರೀ ಶಿವಕುಮಾರ್ ಸೇರಿದಂತೆ ಹಲವಾರು ಪರಿಸರ ಪ್ರೇಮಿಗಳು, ಸಮಾಜ ಸೇವಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವು ಹುಲಿಗಳ ಸಂರಕ್ಷಣೆಯ ಮಹತ್ವವನ್ನು ಎತ್ತಿ ಹಿಡಿಯುವಲ್ಲಿ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಿದರು.