ಹೊಸಪೇಟೆ: ರಾಜ್ಯ ಸರಕಾರದ ಎರಡು ವರ್ಷಗಳ ಸಾಧನೆಯ ಸಂಭ್ರಮದ ಅಂಗವಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20ರಂದು ನಡೆಯಲಿರುವ ಸಾಧನಾ ಸಮಾವೇಶದ ಸ್ಥಳದ ಪೂರ್ವ ಸಿದ್ಧತೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪರಿಶೀಲಿಸಿದರು.
ಸಿದ್ಧತೆ ಪರಿಶೀಲನೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ, ಸಮಾವೇಶದ ಯಶಸ್ವಿಯತ್ತೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ್, ಶಾಸಕರಾದ ಹಂಪನಗೌಡ ಬಾದರ್ಲಿ, ಬಿ. ನಾಗೇಂದ್ರ, ವಿಧಾನ ಪರಿಷತ್‌ನ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್, ಮುಖಂಡರಾದ ಚಂದ್ರಶೇಖರ್, ಸಿರಾಜ್ ಶೇಕ್, ಆಂಜನೇಯಲು ಸೇರಿದಂತೆ ಇತರರು ಉಪಸ್ಥಿತರಿದ್ದರು.