ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ನಾಳೆ (ಸೆಪ್ಟೆಂಬರ್ 23) ಬಿಹಾರಕ್ಕೆ ತೆರಳುತ್ತಿದ್ದಾರೆ. ಅವರು ಬೆಂಗಳೂರಿನಿಂದ ಸಂಜೆ 5 ಗಂಟೆಗೆ ಪಾಟ್ನಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 24ರಂದು ಪಾಟ್ನಾದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (CWC) ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಪ್ರಮುಖ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ರಾಜಕೀಯ ಚರ್ಚೆಗಳು ನಡೆಯಲಿದ್ದು, ಸಿಎಂ ತಮ್ಮ ನಿಲುವನ್ನು ಮಂಡಿಸುವ ನಿರೀಕ್ಷೆಯಿದೆ.
ಸಭೆ ಮುಗಿದ ಬಳಿಕ ಸಿಎಂ ಕರ್ನಾಟಕಕ್ಕೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ.