ನವದೆಹಲಿ: ಭಾರತದ ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಇಂದು (ನವೆಂಬರ್ 24, 2025) ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾ. ಸೂರ್ಯ ಕಾಂತ್ ಅವರಿಗೆ ಪದ ಮತ್ತು ಗೌಪ್ಯತೆಯ ಶಪಥ ವಚನ ಬೋಧಿಸಿದರು. ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ, ಕೇಂದ್ರ ಸಚಿವರು, ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ನಂತರ 2019ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ಗೆ ನೇಮಕಗೊಂಡಿದ್ದ ನ್ಯಾ. ಸೂರ್ಯ ಕಾಂತ್ ಅವರು ಇದೀಗ ದೇಶದ ಅತ್ಯುನ್ನತ ನ್ಯಾಯಾಲಯದ ಮುಖ್ಯಸ್ಥರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಅವರ ಅಧಿಕಾರಾವಧಿ 2027ರ ಫೆಬ್ರವರಿ 9ರವರೆಗೆ ಇರುತ್ತದೆ.











