ಉಡುಪಿ: ಸುಹಾಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್‌ಗೆ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ರಕ್ಷಣೆ ದೊರೆತಿದೆ. ಶರಣ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ ನಡೆಸಿತು.
ವಿಚಾರಣೆಯ ಸಂದರ್ಭದಲ್ಲಿ, ಶರಣ್ ಪಂಪ್‌ವೆಲ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಮತ್ತು ಅವರನ್ನು ಬಂಧಿಸಬಾರದು ಎಂದು ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಜೊತೆಗೆ, ಹೈಕೋರ್ಟ್‌ನ ಅನುಮತಿಯಿಲ್ಲದೇ ಈ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸದಂತೆಯೂ ಆದೇಶಿಸಲಾಗಿದೆ. ಈ ಆದೇಶದ ಬಗ್ಗೆ ಉಡುಪಿ ಟೌನ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಶರಣ್ ಪಂಪ್‌ವೆಲ್ ವಿರುದ್ಧ ಉಡುಪಿ ಟೌನ್ ಠಾಣೆಯಲ್ಲಿ ಧ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಎಫ್‌ಐಆರ್ ರದ್ದತಿಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ನ ಈ ಆದೇಶದಿಂದ ಶರಣ್‌ಗೆ ತಾತ್ಕಾಲಿಕ ರಕ್ಷಣೆ ಲಭಿಸಿದಂತಾಗಿದೆ.
ಪ್ರಕರಣದ ಮುಂದಿನ ವಿಚಾರಣೆಗಾಗಿ ಎಲ್ಲರ ಗಮನವೀಗ ಹೈಕೋರ್ಟ್ ಕಡೆಗೆ ನೆಟ್ಟಿದೆ.