ನಗರದ ಪೂರ್ವ ವಲಯದ ಮೇಯೋ ಹಾಲ್ ನ ಪಿ.ಯು.ಬಿ. ಕಟ್ಟಡದ 2ನೇ ಮಹಡಿಯಲ್ಲಿರುವ ಕೆನೋಫಿ ಸಭಾಂಗಣದಲ್ಲಿ ಇಂದು ನಡೆದ ಸ್ವಚ್ಚತಾ ಅಭಿನಂದನಾ ಕಾರ್ಯಕ್ರಮದಲ್ಲಿ ವಲಯ ಆಯುಕ್ತರಾದ ಶ್ರೀಮತಿ ಸ್ನೇಹಲ್ ಹಾಗು ಘನತ್ಯಾಜ್ಯ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಡಾ: ಹರೀಶ್ ಕುಮಾರ್ ರವರು
ಹೊಸ ವರ್ಷಾಚರಣೆಯಲ್ಲಿ ಸಂಗ್ರಹವಾಗಿದ್ದ ಘನತ್ಯಾಜ್ಯವನ್ನು ಸ್ವಚ್ಛಗೊಳಿಸಿದ 70 ಪೌರಕಾರ್ಮಿಕರಿಗೆ ಹಾಗು 40 ಚಾಲಕರು ಮತ್ತು ಸಹಾಯಕರಿಗೆ ಅಭಿನಂದನೆಯನ್ನು ಅರ್ಪಿಸಿ, ಪ್ರಶಂಸನ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು.
ಪೂರ್ವ ವಲಯ ಆಯುಕ್ತರಾದ ಶ್ರೀಮತಿ ಸ್ನೇಹಲ್ ರವರ ನೇತೃತ್ವದಲ್ಲಿ ಹೊಸ ವರ್ಷಾಚರಣೆಯ ಹಿನ್ನೆಲೆ ನಗರದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರಿಸಿಡೆನ್ಸಿ ರಸ್ತೆ, ರಿಚ್‌ಮಂಡ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಕಸ್ತೂರ್ ಬಾ ರಸ್ತೆ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ಜನವರಿ 1ರ ಮುಂಜಾನೆ 3.00ರಿಂದ ಸ್ವಚ್ಛತಾ ಕಾರ್ಯ ಆರಂಭಿಸಿ ಬೆಳಗ್ಗೆ 7.00ರ ಒಳಗೆ ಕೇವಲ 4 ಗಂಟೆ ಅವಧಿಯಲ್ಲಿ ತ್ಯಾಜ್ಯವನ್ನು ಬೀದಿಗಳಿಂದ ತೆರವುಗೊಳಿಸಿ ರಸ್ತೆಗಳನ್ನು ಸ್ವಚ್ಛಗೊಳಿಸಿ, ಜನರ ಓಡಾಟಕ್ಕೆ ಅನುವು ಮಾಡಿಕೊಡಲಾಗಿರುತ್ತದೆ.
ಸ್ವಚ್ಛತಾ ಕಾರ್ಯವು ಶಿವಾಜಿನಗರ ಹಾಗೂ ಶಾಂತಿನಗರ ವಿಭಾಗದಿಂದ ಮಾಡಲಾಗಿದ್ದು, 72 ಪೌರಕಾರ್ಮಿಕರು, 40 ಚಾಲಕರು ಹಾಗು ಸಹಾಯಕರನ್ನೊಳಗೊಂಡು ಕಿರಿಯ ಆರೋಗ್ಯ ಪರಿವೀಕ್ಷಕರು ಹಾಗು ಮಾರ್ಷಲ್ ಗಳ ಮೇಲ್ವಿಚಾರಣೆಯಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಾಗಿರುತ್ತದೆ.
ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಎಸೆದಿದ್ದ ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ತ್ಯಾಜ್ಯ, ಚಪ್ಪಲಿಗಳು, ಮಧ್ಯದ ಬಾಟಲಿಗಳು ಸೇರಿದಂತೆ ಇನ್ನಿತರೆ ಅನುಪಯುಕ್ತ ವಸ್ತುಗಳನ್ನು ಬೇರ್ಪಡಿಸಿ ಸಂಗ್ರಸಲಾಗಿದ್ದು, ಪುನರ್ ಬಳಕೆಯ ಸುಮಾರು 3 ಟನ್ ತ್ಯಾಜ್ಯವನ್ನು ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಕಳುಹಿಸಲಾಗಿರುತ್ತದೆ.
ಹೊಸ ವರ್ಷಾಚರಣೆಯ ಅಂಗವಾಗಿ ಎಂಜಿ ರಸ್ತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಮಾಡಿರುವ ಕುರಿತಂತೆ ಸ್ಥಳೀಯರು ಪಾಲಿಕೆಯ ಸ್ವಚ್ಚತಾ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿರುತ್ತಾರೆ
ಕಾರ್ಯಕ್ರಮದಲ್ಲಿ ಉಪ ಪ್ರದಾನ ವ್ಯವಸ್ಥಾಪಕರಾದ ಧಾನ ನಾಯಕ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ರವಿಕುಮಾರ್, ಅಭಿಲಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.