ಬೆಂಗಳೂರು: ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡುವ ನಿರ್ಧಾರವನ್ನು ಶಾಸಕ ಆರ್. ಅಶೋಕ ಅವರು ತೀವ್ರವಾಗಿ ವಿರೋಧಿಸಿ, ಈ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.
ಅವರು ಈ ನಿರ್ಧಾರವನ್ನು “ಅತ್ಯಂತ ಕಠೋರ” ಎಂದು ವಿವರಿಸಿದ್ದು, ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವುದು ಪ್ರಜಾಪ್ರಭುತ್ವದ ಮೇಲೆ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜನಸಾಮಾನ್ಯರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಪುನರ್ ವಿಮರ್ಶೆ ಮಾಡಬೇಕೆಂದು ಮನವಿ ಸಲ್ಲಿಸಿರುವ ಆರ್. ಅಶೋಕ, ಸಭಾಧ್ಯಕ್ಷರು ಸಕಾರಾತ್ಮಕ ಸ್ಪಂದನೆ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳುವುದು ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.