ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಾನೂನು ಹಕ್ಕೊತ್ತಾಯದ ವಿಚಾರಣೆ ಹೊಸ ತಿರುವು ಪಡೆದುಕೊಂಡಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಎರಡು ಅಧಿಕಾರಿೂಂದಿಗೆ “One Minute Apology” ಪುಸ್ತಕವನ್ನು ಓದುವಂತೆ ಸಲಹೆ ನೀಡಿತ್ತು. ಈ ಪ್ರಕರಣದ ಬೆನ್ನಲ್ಲೇ, ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಕೇಸ್‌ಗೆ ಈಗ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಹೊಸ ತೀರ್ಪಿನಿಂದ ಪ್ರಕರಣ ಮತ್ತಷ್ಟು ಗಂಭೀರತೆಯನ್ನು ಪಡೆದುಕೊಂಡಿದ್ದು, ಮುಂದಿನ ಹಂತಗಳಲ್ಲಿ ನ್ಯಾಯಾಲಯದ ನಿರ್ಧಾರವೇ ಮುಖ್ಯ ಭೂಮಿಕೆ ವಹಿಸಲಿದೆ.