ಬೆಂಗಳೂರು: ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 83ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಶುಭಕೋರಿದರು.
ಈ ಸಂದರ್ಭ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸಹ ಉಪಸ್ಥಿತರಿದ್ದು, ಯಡಿಯೂರಪ್ಪ ಅವರಿಗೆ ಹಾರ್ದಿಕ ಶುಭಾಶಯಗಳನ್ನು ಅರ್ಪಿಸಿದರು. ರಾಜ್ಯ ರಾಜಕೀಯದಲ್ಲಿ ಮಹತ್ವದ ಸಾಧನೆ ಮಾಡಿದ ಯಡಿಯೂರಪ್ಪ ಅವರ ಕೊಡುಗೆಗಳನ್ನು ಸ್ಮರಿಸುತ್ತಾ, ಅವರ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ಮುಖಂಡರು ಶುಭ ಹಾರೈಸಿದರು.