ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸಂಸದ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಅವರ ಆರತಕ್ಷತೆ ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸಿದರು.
ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮಾರಂಭದಲ್ಲಿ ಭಾಗವಹಿಸಿ ನೂತನ ದಂಪತಿಗೆ ಶುಭ ಹಾರೈಸಿದರು. ಅಲ್ಲದೇ, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಹಲವು ಪ್ರಮುಖರು ಸಹ ದಂಪತಿಗೆ ಶುಭ ಕೋರಿದರು.
ಆರತಕ್ಷತೆಯಲ್ಲಿ ಹಲವು ಜನಪ್ರತಿನಿಧಿಗಳು, ರಾಜಕೀಯ ನಾಯಕರು, ಕುಟುಂಬಸ್ಥರು, ಸ್ನೇಹಿತರು ಹಾಗೂ ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ಪಾಲ್ಗೊಂಡು ಹೊಸಜೋಡಿಗೆ ಶುಭಾಶಯ ತಿಳಿಸಿದರು.