ಬೆಂಗಳೂರು: ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಮತ್ತು ತುಮಕೂರು ಶಾಖಾ ಕಾಲುವೆ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಸಮಸ್ಯೆ ಪರಿಹಾರ ಕುರಿತು ಮಹತ್ವದ ಸಭೆ ಮಂಗಳವಾರ ವಿಧಾನಸೌಧದಲ್ಲಿ ನಡೆಯಿತು.
ಸಭೆಯಲ್ಲಿ ಸಂಬಂಧಿತ ಶಾಸಕರು, ಅಧಿಕಾರಿಗಳು ಹಾಗೂ ಸಂತ್ರಸ್ತ ರೈತರು ಭಾಗವಹಿಸಿದ್ದರು. ಭೂಸ್ವಾಧೀನ ಪ್ರಕ್ರಿಯೆಯನ್ನು ಸುಗಮಗೊಳಿಸುವ ಕುರಿತು ಸಮಾಲೋಚನೆ ನಡೆಯಿದ್ದು, ಯೋಜನೆಯ ಕಾರ್ಯಾಂಶಗಳನ್ನು ತ್ವರಿತಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ಧಾರ ಮಾಡಲಾಗಿದೆ.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಿ. ಸುಧಾಕರ್, ದೆಹಲಿಯಲ್ಲಿ ರಾಜ್ಯ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.