Tuesday, October 21, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News Government

ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆ ಮಾಡಿ – ಮುಖ್ಯಮಂತ್ರಿ ಸಿದ್ದರಾಮಯ್ಯ

SP by SP
7 months ago
Reading Time: 1 min read
A A
18
SHARES
50
VIEWS

ಬೆಂಗಳೂರು: ನಮ್ಮ ಸರ್ಕಾರ ಮೇ 20ಮ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆಗುತ್ತಿದೆ. ಜನ ಅಧಿಕಾರ ಕೊಟ್ಟ ಮೇಲೆ ಅಧಿಕಾರಕ್ಕೋಸ್ಕರ ಅಧಿಕಾರ ಮಾಡದೇ ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ, ಬಸವಣ್ಣ ಹೇಳಿದಂತೆ “ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು. ಸದನದಲ್ಲಿ ಮಾತನಾಡಿದರೆ ಜನರ ಅಭಿರುಚಿಯನ್ನು ಹೆಚ್ಚಿಸಬೇಕು. ವಿದ್ಯಾವಂತರು ಸದನಕ್ಕೆ ಬರುತ್ತಿರುವುದರಿಂದ ಚರ್ಚೆಗಳು ಅರ್ಥ ಪೂರ್ಣ ಹಾಗೂ ಆರೋಗ್ಯಕರವಾಗಿರಬೇಕು ಎಂದು ತಿಳಿಸಿದರು.

ಇಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಗಳ ಉತ್ತರ ನೀಡುತ್ತಾ ರಾಜ್ಯಪಾಲರು ಎರಡು ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಸಾಂಪ್ರದಾಯಿಕವಾಗಿ ವರ್ಷ ಪ್ರಾರಂಭದ ಮೊದಲ ಅಧಿವೇಶನದ ಪ್ರಾರಂಭದಲ್ಲಿ ರಾಜ್ಯಪಾಲರು ಸರ್ಕಾರದ ಅಭಿವೃದ್ಧಿಗಳು, ಸಾಧನೆಗಳೇನು, ಗುರಿಗಳೇನು ಎಂಬುದನ್ನು ಒಂದು ಗಂಟೆಗೂ ಮೀರಿ ಸುದೀರ್ಘವಾಗಿ ಮಾತನಾಡಿ ಸರ್ಕಾರದ ಸಾಧನೆಗಳನ್ನು ಓದಿ ಹೇಳಿದ್ದಾರೆ ವಿಧಾನಸಭೆಯ ಹಿರಿಯ ಸದಸ್ಯ ಟಿ.ಬಿ. ಜಯಚಂದ್ರ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯವನ್ನು ಸಲ್ಲಿಸಿದ್ದಾರೆ. ವಿಧಾನ ಸಭೆಯ ನೂತನ ಸದಸ್ಯೆ ನಯನ ಮೋಟಮ್ಮ ರಾಜ್ಯಪಾಲರ ಭಾಷಣವನ್ನು ಅನುಮೋದಿಸಿ ಭಾಷಣ ಮಾಡಿದ್ದಾರೆ.

ರಾಜ್ಯಪಾಲರ ಭಾಷಣಕ್ಕೆ ವಿರೋಧ ಪಕ್ಷದ ನಾಯಕರಾದಿಯಾಗಿ 14 ಜನ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರು ಮಾತನಾಡಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯದಲ್ಲಿ ಭಾಗವಹಿಸಿದವರಿಗೆ ಅಭಿನಂದನೆ ಸಲ್ಲಿಸಿ, ರಾಜ್ಯಪಾಲರ ಭಾಷಣವನ್ನು ಕೆಲವರು ಟೀಕಿಸಿದ್ದಾರೆ, ಹಲವರು ವಾಸ್ತವಿಕವಾಗಿ ಮಾತನಾಡಿದ್ದಾರೆ, ಕೆಲವರು ಸಮರ್ಥಿಸಿದ್ದಾರೆ, ಕೆಲವರು ವಿರೋಧಿಸಲೆಂದೇ ವಿರೋಧಿಸಿ ಮಾತನಾಡಿದ್ದಾರೆ. ಅವರೆಲ್ಲರ ಸಲಹೆ ಸೂಚನೆಗಳನ್ನು ಸರ್ಕಾರ ಸ್ವಾಗತಿಸಿ, ಸರ್ಕಾರದ ನಿಲುವನ್ನು ಸದನಕ್ಕೆ ತಿಳಿಸಿ ವಂದನಾ ನಿರ್ಣಯವನ್ನು ಅಂಗೀಕಾರ ಮಾಡಬೇಕೆಂದು ವಿಧಾನಸಭೆಯಲ್ಲಿ ವಿನಂತಿಸಿದರು.

ಗ್ಯಾರಂಟಿ ಯೋಜನೆಗಳು ಮುಂದುವರಿಕೆ-ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ:
ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್ ದೇಶದ ಸುಲೇಮಾನ್ ಹ್ಯಾಂಕ್, ವಿಶ್ವಸಂಸ್ಥೆ ಜನರಲ್ ಬಾಡಿ ಅಧ್ಯಕ್ಷರು ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲೀμï ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದನ್ನು ಸದನದ ಗಮನಕ್ಕೆ ತಂದು ಗ್ಯಾರಂಟಿ ಯೋಜನೆಗಳಿಂದ ಜನರ ಆತ್ಮವಿಶ್ವಾಸ ಹೆಚ್ಚಿದ್ದು ಮಾತ್ರವಲ್ಲದೇ ಸ್ವಾಭಿಮಾನ ಹೆಚ್ಚಿತ್ತಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ ಅವರ ಬದುಕು ಸುಧಾರಣೆಯಾಗಲಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದುಕೊಳ್ಳುತ್ತದೆ ಎಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಉತ್ತರದಲ್ಲಿ ತಿಳಿಸಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಕೇಂದ್ರ ಸರ್ಕಾರದ Indian Institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಪ್ರಶಂಸೆಯ ವರದಿಯನ್ನು ನೀಡಿದ್ದಾರೆ.

ದಿನಾಂಕ 3-1-2025 ರಂದು ಚಂದ್ರ ಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಕುರಿತು ಅಧ್ಯಯನ ಮಾಡಿ ಹೋಗಿದ್ದಾರೆ. 2-2-2025 ರಂದು ಮಹಾರಾಷ್ಟ್ರದ ಸಾರಿಗೆ ಸಚಿವರಾದ ಪ್ರತಾಪ್ ಸರ್‍ನಾಯಕ್ ಶಕ್ತಿ ಯೋಜನೆ ಬಗ್ಗೆ ಚರ್ಚಿಸಿ ತೆರಳಿದ್ದಾರೆ. 5-3-2025 ರಂದು ಕೇರಳದಿಂದ ಸಚಿವರು ಬಂದು ಅಧ್ಯಯನ ಮಾಡಿ ಹೋಗಿದ್ದಾರೆ.

ಕೇಂದ್ರ ಸರ್ಕಾರದ Indian Institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಅವರು ಗೃಹಲಕ್ಷ್ಮಿ ಮತ್ತು ಶಕ್ತಿ ಗ್ಯಾರಂಟಿ ಯೋಜನೆಗಳ ಕುರಿತು ಪ್ರಶಂಸೆ ಮತ್ತು ಸಲಹೆ ಕೊಟ್ಟಿದ್ದಾರೆ. ಈ ವರದಿಗಳಿಂದ ಸರ್ಕಾರಕ್ಕೆ ಉಪಯೋಗವಾಗಿದೆ.

ತಪ್ಪುಗಳಿದ್ದರೆ ಸರ್ಕಾರದ ಖಜಾನೆಗೆ ತೊಂದರೆಯಿದ್ದರೆ ಸರ್ಕಾರದ ಗಮನಕ್ಕೆ ತರುವುದು ವಿರೋಧಪಕ್ಷದ ಕೆಲಸ. ಆದರೆ ವಿರೋಧಪಕ್ಷದವರು ಅಭಿರುಚಿ ಹೀನ ಮಾತುಗಳನ್ನಾಡಬಾರದು. ಯೋಜನೆಗಳ ಬಗ್ಗೆ ಸಕಾರಾತ್ಮಕ ಟೀಕೆಗಳನ್ನು ಮಾಡಬೇಕು ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗೆ ಫೆಬ್ರವರಿ ವರೆಗೆ ನಾವು, ನಮ್ಮ ಸರ್ಕಾರ ಬರೋಬ್ಬರಿ 76,509 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಫಲಾನುಭವಿಗಳಿಗೆ ಇದರಿಂದ ಪ್ರಯೋಜನವಾಗಿದೆ. ಜೂನ್ 11, 2023 ರಿಂದ 410 ಕೋಟಿ ಜನ ಶಕ್ತಿ ಯೋಜನೆಯಡಿ ಓಡಾಡಿದ್ದಾರೆ. 2024-25 ಕ್ಕೆ 52,0009 ಕೋಟಿ ಇಟ್ಟು, 41509 ಕೋಟಿ ರೂಪಾಯಿ ವೆಚ್ಚ ಮಾಡಿದ್ದೇವೆ. ಖಜಾನೆ ಖಾಲಿ ಯಾಗಿದೆ ಎಂಬ ಮಾತು ಸತ್ಯಕ್ಕೆ ದೂರ ಅಂಕಿ ಅಂಶಗಳ ಮೂಲಕ ಸಭೆಗೆ ತಿಳಿಸಿ , 1.26 ಕೋಟಿ ಕುಟುಂಬಗಳಿಗೆ ಯೋಜನೆಗಳು ತಲುಪುತ್ತಿದ್ದು, ಕೊಟ್ಟ ಮಾತಿನಂತೆ ನಡೆದಿದ್ದೇವೆ. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಬಡವರಲ್ಲಿ ಆತ್ಮವಿಶ್ವಾಸ ಹೆಚ್ಚಿದ್ದು ಮಾತ್ರವಲ್ಲ, ಸ್ವಾಭಿಮಾನ ಹೆಚ್ಚುತ್ತಿದೆ. ಜನರು ಸಾಮಾಜಿಕವಾಗಿ ಆರ್ಥಿಕವಾಗಿ ನಿರ್ಭಯವಾಗಿ, ಅವರ ಬದುಕು ಸುಧಾರಣೆಯಾಗಿದೆ. ಸಮಾನತೆಯ ಭಾವ ಉಂಟಾಗುತ್ತಿದೆ ಎಂದರು.

ದೇಶದ 100 ಕೋಟಿ ಜನರಿಗೆ ಕೊಳ್ಳುವ ಆಯ್ಕೆಗಳೇ ಇಲ್ಲ ಎಂದು ವರದಿ ಬಂದಿತ್ತು. 20.5 ಕೋಟಿ ಕುಟುಂಬಗಳು ಅಂದರೆ ನೂರು ಕೋಟಿ ಜನರ ವಾರ್ಷಿಕ ಆದಾಯ 87000 ರೂಪಾಯಿಗಿಂತ ಕಡಿಮೆ ಇದೆ ಎನ್ನುವ ವರದಿ ಬಂದಿದೆ. ಅಸಮಾನತೆ ಅಷ್ಟರ ಮಟ್ಟಿಗೆ ಇದೆ. ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇರುವವರೆಗೆ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುವುದಿಲ್ಲ. ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡುವ ಸಾರ್ವತ್ರಿಕ ಮೂಲ ಆದಾಯ ತತ್ವ ಅಗತ್ಯ. ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಜನರಲ್ಲಿ ತುಂಬಿದರೆ ಜನರ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯ. ನಾವು ಸಮಾಜದ 90% ಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಿದ್ದೇವೆ. 94 ರಲ್ಲಿ 34% ಇದ್ದ ಶ್ರೀಮಂತರ ಸಂಖ್ಯೆ ಈಗ 57% ಗೆ ಹೆಚ್ಚಾಗಿದೆ. 50% ಜನರಿಗೆ ಇರುವ ಆರ್ಥಿಕ ಶಕ್ತಿ 15%ಗೆ ಕುಸಿದಿದೆ. ಇದು ಆತಂಕಕಾರಿ ಸಂಗತಿ. ಅಸಮಾನತೆಯನ್ನು ತೊಡೆದು ಹಾಕಲು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ವಿರೋಧಪಕ್ಷ ಅಧಿಕಾರದಲ್ಲಿದ್ದಾಗ ಕ್ಯಾಪಿಟಲ್ ಹೂಡಿಕೆಗಳಿಗೆ 2,70,695 ಕೋಟಿ ಕಾಮಗಾರಿಗಳನ್ನು ಅನುದಾನ ಒದಗಿಸದೇ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿಗಳ ವಿಶೇಷ ಅನುದಾನದ ಮೂಲಕ 1,66,426 ಕೋಟಿ ನೀಡಲಾಗಿದೆ. 36 ಸಾವಿರ ಕೋಟಿ ಬಾಕಿ ಬಿಲ್ಲುಗಳು ಬಾಕಿ ಉಳಿದಿರುವುದು ವಿರೋಧಪಕ್ಷದಿಂದ ಎಂದು ತಿಳಿಸಿ ಲೆಕ್ಕ ದಾಖಲೆ ಮಂಡಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಲಾವಿದರ ಮಾಶಾಸನ ಹೆಚ್ಚಳ ಮಾಡಿರುವುದಲ್ಲದೇ 275 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು

ಎಸ್.ಸಿ.ಪಿ/ಟಿಎಸ್ ಪಿ- ಕಾಯ್ದೆ ಜಾರಿ ಕರ್ನಾಟಕ ಎರಡನೇ ರಾಜ್ಯ :
ದೇಶದಲ್ಲಿ ಎಲ್ಲಿಯವರೆಗೆ ಅಸಮಾನತೆ ಮುಂದುವರೆಯುತ್ತದೆ ಅಲ್ಲಿಯವರೆಗೆ ಸ್ವಾತಂತ್ರ್ಯ ಬಂದಿದ್ದು ಸಾರ್ಥಕವಾಗುವುದಿಲ್ಲ. ಕಟ್ಟಕಡೆಯ ಮನುಷ್ಯ ವೈರುಧ್ಯತೆ ಇರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದು, ರಾಜಕೀಯ ಸ್ವಾತಂತ್ರ್ಯ ದೊರೆತರೆ ಸಾಲದು, ನಮಗೆ ಆರ್ಥಿಕ ಸಾಮಾಜಿಕ ಸ್ವಾತಂತ್ಯ ಸಿಕ್ಕಿಲ್ಲ. ಅದು ಸಿಗಬೇಕಾದರೆ ಕಟ್ಟ ಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ಕೊಂಡೊಯ್ಯುವ ಕೆಲಸವಾಗಬೇಕು. ಎಂದು ಅಂಬೇಡ್ಕರ್ ಹೇಳಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಎಸ್ ಸಿ ಎಸ್ ಪಿ/ ಟಿ ಎಸ್.ಪಿ ಕಾಯ್ದೆಯನ್ನು ಜಾರಿಗೆ ತಂದಿರುವ ರಾಜ್ಯಗಳಲ್ಲಿ ನಮ್ಮ ರಾಜ್ಯ ಎರಡನೇ ರಾಜ್ಯವಾಗಿದೆ ಎಂದು ತಿಳಿಸಿದರು.

ಸಂವಿಧಾನದ 46 ನೇ ಪರಿಚ್ಚೇಧವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ವಿಶೇಷವಾಗಿ ಶೈಕ್ಷಣಿಕ , ಆರ್ಥಿಕ ಕಾರ್ಯಕ್ರಮಗಳನ್ನು ನೀಡಬೇಕು ಎಂದು ತಿಳಿಸಿದೆ. ಆಂಧ್ರ ಪ್ರದೇಶ ಮೊಟ್ಟ ಮೊದಲ ಬಾರಿಗೆ ಎಸ್ ಸಿ ಎಸ್ ಪಿ/ ಟಿ ಎಸ್.ಪಿ ಕಾಯ್ದೆ ಜಾರಿಗೆ ತಂದಿದ್ದು, ನಂತರ ಅದನ್ನು ಕರ್ನಾಟಕ 2013 ರಲ್ಲಿ ಜಾರಿಗೆ ತಂದಿತು. ಈಗ ತೆಲಂಗಾಣದಲ್ಲಿ ಕೂಡ ಜಾರಿಗೆ ಬಂದಿದ್ದು, ಇಡೀ ದೇಶದಲ್ಲಿ ಬೇರೆಲ್ಲೂ ಈ ಕಾಯ್ದೆ ಇಲ್ಲ. ಕಾಯ್ದೆ ಬಂದ ನಂತರ ರಾಜ್ಯದಲ್ಲಿ 261274 ಕೋಟಿ ವೆಚ್ಚ ಮಾಡಲಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಒಟ್ಟು 5 ವರ್ಷಗಳಲ್ಲಿ ನೀಡಿದ್ದ 35464 ಕೋಟಿ, ಅನುದಾನದಲ್ಲಿ 29452 ಕೋಟಿ ವೆಚ್ಚ ಮಾಡಿದ್ದಾರೆ, ನಾಲ್ಕು ವರ್ಷಗಳಲ್ಲಿ 1,80,000 ಕೋಟಿ ವೆಚ್ಚ ಮಾಡಿದ್ದೇವೆ. ದಲಿತರ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟನೆ ನೀಡಿದರು.

ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ 7.46ರಷ್ಟು ಹಣ ಮೀಸಲಿಟ್ಟು ಖರ್ಚು ಮಾಡಿದೆ. ಈ ಕಾಯ್ದೆ ಬಂದ ನಂತರ ಜನಸಂಖ್ಯೆ ಅನುಸಾರವಾಗಿ 17.15% ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ-6.95% ಎರಡೂ ಸೇರಿ 24.1% ಇದ್ದಾರೆ. ಯೋಜನೆಯ ಹಣದಲ್ಲಿ 24.1% ಕೊಡಲೇಬೇಕು. ಅಷ್ಟು ಅನುದಾನವನ್ನು ಖರ್ಚು ಮಾಡಬೇಕು. ಒಂದು ವೇಳೆ ಹಣವನ್ನು ಖರ್ಚು ಮಾಡದೆ ಹೋದರೆ ಅಧಿಕಾರಿಯ ಮೇಲೆ ಕ್ರಮ ತೆಗೆದುಕೊಳ್ಳಬಹುದು. ಈ ವರ್ಷ ಖರ್ಚು ಮಾಡಲು ಸಾಧ್ಯವಾಗದಿದ್ದರೆ ಮುಂದಿನ ವರ್ಷಕ್ಕೆ ಅದು ಸೇರಿಕೊಳ್ಳುತ್ತದೆ. 39121 ಕೋಟಿ ಕಳೆದ ವರ್ಷ ಮೀಸಲಿಟ್ಟಿದ್ದು, ಈ ಸಾಲಿಗೆ 42018 ಕೋಟಿ ಮೀಸಲಿಡಲಾಗಿದೆ. ಕಾಯ್ದೆಯನ್ನು ಸಂವಿಧಾನದ ಆಶಯಗಳನ್ನು ಈಡೇರಿಸಲೆಂದು ರೂಪಿಸಲಾಗಿದೆ. ಕಾಯ್ದೆ ಬಂದ ನಂತರ ಕರ್ನಾಟಕದಲ್ಲಿ ಈ ವರ್ಷ 371273 ಕೋಟಿ ರೂ.ಗಳ ಬಜೆಟ್ ನಲ್ಲಿ 27674 ಎಸ್.ಸಿ. ಪಿ / ಟಿ.ಎಸ್.ಪಿ ಗಾಗಿ ಶೇ. 7.46% ಮೀಸಲಿಟ್ಟಿದೆ. ಗುಜರಾತ್ ನಲ್ಲಿ 3,70,000 ಹಣ ಬಜೆಟ್ ನಲ್ಲಿ ಮೀಸಲಿಟ್ಟಿದ್ದು, ಎಸ್.ಸಿ. ಪಿ / ಟಿ ಎಸ್ ಪಿ ಗಾಗಿ ಶೇ 2.38% ಮೀಸಲಿಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಬಜೆಟ್ 612293 ಇದ್ದಾರೆ, 187650 3.6% ಇಟ್ಟಿದೆ.

ಇಡೀ ದೇಶದಲ್ಲಿ ಎಸ್ ಸಿ/ ಎಸ್ ಟಿ ಗಳ ಜನಸಂಖ್ಯೆ 2011ರ ಜನಗಣತಿ ಪ್ರಕಾರ ಶೇ16.6% ಎಸ್.ಸಿ ಹಾಗೂ ಶೇ 8.6% ಎಸ್.ಟಿ ಇದ್ದು, ಎರಡೂ ಸೇರಿ ಒಟ್ಟು ಶೇ27.2 % ಇದ್ದಾರೆ. ಇವರ ಜನಸಂಖ್ಯೆಗೆ ಅನುಗುಣವಾಗಿ ಹಿಂದಿನ ಸರ್ಕಾರರು ಖರ್ಚು ಮಾಡಲಿಲ್ಲ. ಕೇವಲ ಶೇ2.87% ಖರ್ಚು ಮಾಡಿದ್ದಾರೆ. ದೇಶದಲ್ಲಿ ಪ.ಜಾ16.6% ಪ.ವರ್ಗ 8.6% ಸೇರಿ ಒಟ್ಟು 25.2% ಇದ್ದು ಕೇವಲ 2.87% ವೆಚ್ಚ ಮಾಡಿದ್ದಾರೆ. ಕರ್ನಾಟಕ ಮಾದರಿಯಲ್ಲೇ ಕೇಂದ್ರ ಸರ್ಕಾರ ಎಸ್.ಸಿ.ಪಿ/ ಟಿ.ಎಸ್.ಪಿ ಕಾಯ್ದೆ ಜಾರಿ ಮಾಡಲಿ ಎಂದು ಸರ್ವಾನುಮತದ ನಿರ್ಣಯ ಮಾಡೋಣ ಎಂದು ಕರೆ ನೀಡಿದರು. ಕೇಂದ್ರ ಸರ್ಕಾರ 4820512 ಕೋಟಿ ಬಜೆಟ್ ಗಾತ್ರದಲ್ಲಿ ಎಸ್.ಸಿ.ಪಿ / ಟಿ.ಎಸ್.ಪಿ ಗಾಗಿ 138368 ಇದ್ದು 2.87% ಮೀಸಲಿಟ್ಟಿದೆ.

ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ :
15 ನೇ ಹಣಕಾಸು ಆಯೋಗದ ಅಧ್ಯಕ್ಷರು 11495 ಕೋಟಿ ಅನುದಾನವನ್ನು ರಾಜ್ಯಕ್ಕೆ ನೀಡಬೇಕೆಂದು ಶಿಫಾರಸ್ಸು ಮಾಡಿದರು. ಆದರೆ ಇದೂವರೆಗೂ ರಾಜ್ಯದ ಪಾಲು ನೀಡದೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರ 72 ಸಾವಿರ ಕೊಟ್ಟರೆ ರಾಜ್ಯ ಸರ್ಕಾರ 42 ಸಾವಿರ ಕೊಡುತ್ತದೆ. ಕರ್ನಾಟಕ 2025-26 ನೇ ಸಾಲಿಗೆ 5 ಲಕ್ಷ ಕೋಟಿ ರೂಪಾಯಿ ತೆರಿಗೆ ಕೊಡುತ್ತಿದ್ದೇವೆ. ನಮಗೆ ಅಂದಾಜು 51 ಸಾವಿರ ಕೋಟಿ ವಾಪಸ್ಸು ಬರಬೇಕಾಗುತ್ತದೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ನಿರ್ಮಲಾ ಸೀತಾರಾಮನ್ ಅವರನ್ನು ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎಂದು, ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಒದಗಿಸಿ ಎಂದು ಮೂರು ಸಾರಿ ಭೇಟಿಯಾಗಿ ಮನವಿ ಮಾಡಿದ್ದರೂ, ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಘೋಷಿಸಿದ್ದರೂ ಒಂದು ರೂಪಾಯಿ ಅನುದಾನ ಬಂದಿಲ್ಲ ಎಂದು ವಿಧಾನಸಭೆಗೆ ತಿಳಿಸಿದರು.
ಭಾರತೀಯ ರೈಲ್ವೆ ಕೇಂದ್ರ ಸರ್ಕಾರದ ಸುಪರ್ದಿಗೆ ಬರುತ್ತದೆ. ಆದ್ರೂ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರ ಉಚಿತ ಸ್ಥಳವನ್ನು ಒದಗಿಸುತ್ತದೆ. 50% ವೆಚ್ಚವನ್ನು ರಾಜ್ಯ ಸರ್ಕಾರ ವಹಿಸಿಕೊಳ್ಳುತ್ತದೆ. ಲಾಭ ಪೂರ್ತಿ ಕೇಂದ್ರ ಸರ್ಕಾರವೇ ಪಡೆಯುತ್ತದೆ ಎಂದು ವಿಧಾನಸಭೆಗೆ ತಿಳಿಸಿದರು.

ಮಾದಕವಸ್ತು ಕಾರ್ಯಪ್ರವೃತ್ತಿಗೆ ವಿಧಾನಸಭೆಯಲ್ಲಿ ಶ್ಲಾಘನೆ-ಗೃಹಮಂತ್ರಿ ಡಾ:ಪರಮೇಶ್ವರ್

ಬೆಂಗಳೂರು, ಮಾರ್ಚ್ 17 (ಕರ್ನಾಟಕ ವಾರ್ತೆ):
ಸುಮಾರು 75 ಕೋಟಿ ಮೊತ್ತದ ಡ್ರಗ್ಸ್ ಮಾಫಿಯಾವನ್ನು ಮಂಗಳೂರಿನ ಪೆÇಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ ಪ್ರಕರಣವನ್ನು ಮಂಗಳೂರಿನ ಪೆÇಲೀಸರು ಬಯಲಿಗೆಳೆದಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲಿಯೇ ಬಯಲಾದ ದೊಡ್ಡ ಡ್ರಗ್ಸ್ ಜಾಲ. ರಾಜ್ಯ ಮತ್ತು ಇತರ ಸ್ಥಳಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಪ್ರಜೆಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ಅವರಿಂದ ಸುಮಾರು 75 ಕೋಟಿ ರೂ ಮೌಲ್ಯದ ಎಂಡಿಎಂಎ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಾ: ಪರಮೇಶ್ವರ್ ತಿಳಿಸಿ ಮಂಗಳೂರಿನ ಪೆÇಲೀಸರಿಗೆ ಅಭಿನಂದನೆ ಸಲ್ಲಿಸಿದರು.

ಸಭಾಪತಿ ಯು.ಟಿ ಖಾದರ್ ಇದೇ ಸಂದರ್ಭದಲ್ಲಿ ಡ್ರಗ್ಸ್ ಮಾಫಿಯಾ ಬೇಧಿಸಿದ ಎಲ್ಲಾ ಅಧಿಕಾರಿಗಳಿಗೂ ಅಭಿನಂದನೆ ಸಲ್ಲಿಸಿ ಇದರ ಮೂಲಕ ಕಂಡು ಹಿಡಿದು ಈ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕ್ರಮ ವಹಿಸುವುದು ಸೂಕ್ತ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ವಿಧಾನ ಸಭೆಯ ಸದಸ್ಯರಾದ ವಿಜಯೇಂದ್ರ ಅವರು ಮಂಗಳೂರಿನ ಪೆÇಲೀಸರು ಜೀವದ ಹಂಗು ತೊರೆದು ಡ್ರಗ್ಸ್ ಮಾಫಿಯಾ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿ ಯುವಜನಾಂಗ ಡ್ರಗ್ಸ್ ಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ರಾಜ್ಯದಲ್ಲಿ ಮಾತ್ರವಲ್ಲದೇ ತಾಲ್ಲೂಕು ಮಟ್ಟಕ್ಕೆ ಸಹ ಈ ಮಾಫಿಯಾ ಹರಡಿದೆ. ಸೀಜ್ ಆಗಿರುವ ಡ್ರಗ್ಸ್ ವಿಲೇವಾರಿ ಬಗ್ಗೆ ಸಹ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ವಿಧಾನ ಸಭೆಯ ಹಲವು ಸದಸ್ಯರು ಡ್ರಗ್ಸ್ ಜಾಲ ಭೇಧಿಸಿದ ಪೆÇಲೀಸರಿಗೆ ಅಭಿನಂದನೆಗಳನ್ನು ತಿಳಿಸಿದರು
ವಿಧಾನಸಭೆಯ ಸದಸ್ಯರ ಸಲಹೆಗಳನ್ನು ಸ್ವೀಕರಿಸಿ ಮುಂದಿನ ದಿನಗಳಲ್ಲಿ ಡ್ರಗ್ಸ್ ಮಾಫಿಯಾವನ್ನು ಸಂಪೂರ್ಣವಾಗಿ ತಡೆಗಟ್ಟಲು ಕ್ರಮ ವಹಿಸಲಾಗುವುದು ಎಂದು ಡಾ: ಪರಮೇಶ್ವರ್ ತಿಳಿಸಿದರು.

Tags: Bureau NewsindiaIndiannewnewsPublicಅಧ್ಯಯನಅಭಿವೃದ್ಧಿಆರೋಗ್ಯಆರ್ಥಿಕಇಲಾಖೆಯಉಚಿತಉತ್ತರಉಪಯೋಗಕನ್ನಡಕರ್ನಾಟಕಕರ್ನಾಟಕದಕರ್ನಾಟಕದಲ್ಲಿಕಾಂಗ್ರೆಸ್ಕಾರ್ಯಕ್ರಮಕೆಲಸಕೇಂದ್ರಕ್ರಮಗೃಹಡಿತಾಲ್ಲೂಕುದಕ್ಷಿಣದಲಿತದಿನದೇಶದೊಡ್ಡಪಕ್ಷಪಂಗಡದಪರಿಶಿಷ್ಟಬಜೆಟ್ಬಿಜೆಪಿಬೆಂಗಳೂರುಭಾರತಭಾರತೀಯಮಂಗಳೂರಮತ್ತುಮಹಾಮಾರ್ಚ್ಮೇಲಿನಮೋದಿಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರಪತಿರಿಯಲ್ರೈಲ್ವೆರೋಗಲಿಂಗವಾರ್ಷಿಕವಿಶೇಷವಿಶ್ವವಿಶ್ವಸಂಸ್ಥೆಸಚಿವಸಭೆಸಮಾನತೆಸಮುದಾಯಸಾಧನೆಸಾಂಪ್ರದಾಯಿಕಸಾಲಸಿದ್ದರಾಮಯ್ಯಸುಧಾರಣೆಸ್ವಾತಂತ್ರ್ಯಹಣಹಣಕಾಸುಹೂಡಿಕೆ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಅಯೋಧ್ಯೆಯ ದೀಪಾವಳಿ ಮತ್ತೆ ಇತಿಹಾಸ ಸೃಷ್ಟಿಸಿದೆ: ದೀಪಗಳ ನದಿ, ಆರತಿಯ ಸಮೂಹ ಗಾಯನದೊಂದಿಗೆ 2 ವಿಶ್ವ ದಾಖಲೆ

October 20, 2025

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

October 19, 2025

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು, ಮೂಲಸೌಕರ್ಯಕ್ಕೆ ₹5,229 ಕೋಟಿ ಕಡಿತ: CAG ವರದಿ

October 19, 2025

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ, ಕಾಂಗ್ರೆಸ್‌ಗೆ ಹೈಕೋರ್ಟ್‌ನಿಂದ ತೀವ್ರ ಮುಖಭಂಗ: ಬಿ.ವೈ ವಿಜಯೇಂದ್ರ

October 19, 2025

Recent News

ಮೇಘಾಲಯ, ತ್ರಿಪುರಾ ಪತ್ರಕರ್ತರ ನಿಯೋಗ ಬಿಎಚ್‌ಇಎಲ್ ಎಲೆಕ್ಟ್ರಾನಿಕ್ಸ್ ವಿಭಾಗಕ್ಕೆ ಭೇಟಿ

October 15, 2025

ರಾಷ್ಟ್ರೀಯ ಸುರಕ್ಷಾ ರಕ್ಷಣಾ ಸೇನೆಯ ೪೧ನೇ ಸ್ಥಾಪನಾ ದಿನಾಚರಣೆ:

October 14, 2025

ಐಐಟಿ ಧಾರವಾಡದಲ್ಲಿ ಧರ್ತಿ ಬಯೋನೆಸ್ಟ್ ಇಂಕ್ಯೂಬೇಶನ್ ಕೇಂದ್ರ ಉದ್ಘಾಟನೆ:

October 14, 2025

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

October 13, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.