ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳೆಯ ಬಳಿಕ ದೇಶದ ಗೃಹಸಚಿವ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಶ್ರೀನಗರದಲ್ಲಿ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆ ನಡೆಸಿದರು.
ಈ ಸಭೆಯಲ್ಲಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು, ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ಭದ್ರತಾ ಪಡೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಪ್ರಸ್ತುತ ಪರಿಸ್ಥಿತಿಯ ಮೇಲೆ ಚರ್ಚೆ ನಡೆಸಿ, ಭವಿಷ್ಯದ ಕ್ರಮಗಳ ಬಗ್ಗೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.
ಪಹಲ್ಗಾಮ್‌ನಲ್ಲಿ ನಡೆದ ದಾಳಿ ನಂತರ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವನ್ನು ಅಮಿತ್ ಶಾ ಅವರು ಒತ್ತಿಹೇಳಿದ್ದು, ನಿರಪಾಯ ವ್ಯಕ್ತಿಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂಬ ಆಶ್ವಾಸನೆ ನೀಡಿದ್ದಾರೆ.