ಬೆಂಗಳೂರು: ಈಕ್ವೆಡಾರ್ ಗಣರಾಜ್ಯದ ರಾಯಭಾರಿ ಫರ್ನಾಂಡೊ ಬುಚೆಲಿ ಅವರು ಇಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ, ರಾಜ್ಯದ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ರಾಜ್ಯದ ಮಾಹಿತಿ ತಂತ್ರಜ್ಞಾನ, ನಗರಾಭಿವೃದ್ಧಿ, ಹಾಗೂ ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಿದರು. ಈ ಯೋಜನೆಗಳು ರಾಜ್ಯದ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ಹೇಗೆ ಕೊಡುಗೆ ನೀಡುತ್ತಿವೆ ಎಂಬುದನ್ನು ಅವರು ಎತ್ತಿ ತೋರಿಸಿದರು.
ಭೇಟಿಯ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಸಲ್ಮಾ ಫಾಹಿಮ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಭೇಟಿಯು ಕರ್ನಾಟಕ ಮತ್ತು ಈಕ್ವೆಡಾರ್ ನಡುವಿನ ಸಹಕಾರವನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.