ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶ್ರೀ ಸಂಪತ್ ಕುಮಾರ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಬೆಂಗಳೂರಿನ ವಸಂತನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಶ್ರೀ ಬಾಬುರಾವ್ ಚವ್ಹಾಣ, ಕಲಬುರಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶ್ರೀ ಅಶೋಕ್ ಬಗಲಿ, ಮುಖಂಡ ಶ್ರೀ ರುದ್ರಯ್ಯ ಆರ್ ಸೇರಿದಂತೆ ಪಕ್ಷದ ಇತರ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಗಾಯಾಳು ಶ್ರೀ ಸಂಪತ್ ಕುಮಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.












