ಬೆಂಗಳೂರು: ಹಿರಿಯ ಸಾಹಿತಿ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ದೊಡ್ಡ ರಂಗೇಗೌಡರು ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯ ಗ್ಲೆನಿಗಲ್ಸ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಅವರು ಆಸ್ಪತ್ರೆಗೆ ಭೇಟಿ ನೀಡಿ, ರಂಗೇಗೌಡರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಸಂಪೂರ್ಣ ಮಾಹಿತಿ ಪಡೆದರು.ಸಚಿವ ಶಿವರಾಜ ತಂಗಡಗಿ ಅವರು ಪ್ರೊ. ದೊಡ್ಡ ರಂಗೇಗೌಡರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿದರು. ಅವರಿಗೆ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಿದರು. ಜೊತೆಗೆ, ರಂಗೇಗೌಡರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಚಿವರು, “ಪ್ರೊ. ದೊಡ್ಡ ರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಅಮೂಲ್ಯ ಆಸ್ತಿ. ಅವರ ಆರೋಗ್ಯದ ಬಗ್ಗೆ ಸರ್ಕಾರಕ್ಕೆ ಗಾಢ ಕಾಳಜಿ ಇದ್ದು, ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು












