ರಾಮನಗರ: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹಂಚಿಕುಪ್ಪೆ ಗ್ರಾಮ ಪಂಚಾಯತಿಯ ನಾಯಕನಪಾಳ್ಯ ಗ್ರಾಮ ಮತ್ತು ಕನಕಪುರ ತಾಲ್ಲೂಕಿನ ಉಯ್ಯಂಬಳ್ಳಿ ಗ್ರಾಮ ಪಂಚಾಯತಿಯ ಹೂಳ್ಯ ಗ್ರಾಮಗಳನ್ನು ಗುರುತಿಸಲಾಗಿದೆ. ಈ ಗ್ರಾಮಗಳ ಬುಡಕಟ್ಟು ಜನಾಂಗದವರು ‘ಡೆವಲಪ್‌ಮೆಂಟ್ ಆಫ್ ಹೋಂಸ್ಟೇಸ್ ಇನ್ ಟ್ರೈಬಲ್ ಏರಿಯಾಸ್’ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಈ ಯೋಜನೆಯ ಉದ್ದೇಶವು ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಪ್ರವಾಸಿಗರಿಗೆ ಪರಿಚಯಿಸುವುದಾಗಿದೆ. ಇದರಡಿ ಗ್ರಾಮಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸಿಗರಿಗೆ ಸೌಕರ್ಯವಾಗುವಂತೆ ಹೋಂಸ್ಟೇ ನಿರ್ಮಾಣಕ್ಕೆ 5 ಲಕ್ಷ ರೂ.ಗಳು ಮತ್ತು ಈಗಿರುವ ಮನೆಗಳ ನವೀಕರಣಕ್ಕೆ 3 ಲಕ್ಷ ರೂ.ಗಳ ಸಹಾಯಧನವನ್ನು ಕೇಂದ್ರ ಸರ್ಕಾರ ಒದಗಿಸಲಿದೆ.
ಆಸಕ್ತ ಬುಡಕಟ್ಟು ಜನಾಂಗದ ವ್ಯಕ್ತಿಗಳು ಅಥವಾ ಕುಟುಂಬಗಳು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಕಚೇರಿಯಿಂದ ಪಡೆದು, ಅಗತ್ಯ ದಾಖಲೆಗಳೊಂದಿಗೆ 2025ರ ಆಗಸ್ಟ್ 11ರೊಳಗೆ ಸಲ್ಲಿಸಬೇಕು.
ಅಗತ್ಯ ದಾಖಲೆಗಳು:
- ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ವರ್ಗ)
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್‌ಬುಕ್
- ಮನೆಯ ದಾಖಲೆ
- ಮನೆಯ ಫೋಟೋ
- ಡಿಕ್ಲರೇಷನ್ ಫಾರಂ
- ಗ್ರಾಮ ಪಂಚಾಯತಿಯ ಎನ್‌ಒಸಿ
ಈ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪ್ರವಾಸೋದ್ಯಮ ಕಚೇರಿಯನ್ನು ಸಂಪರ್ಕಿಸಬಹುದು.
ಈ ಯೋಜನೆಯು ಬುಡಕಟ್ಟು ಗ್ರಾಮಗಳ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಮತ್ತು ಸ್ಥಳೀಯ ಸಂಸ್ಕೃತಿಯ ಪ್ರಚಾರಕ್ಕೆ ಮಹತ್ವದ ಕೊಡುಗೆ ನೀಡಲಿದೆ.