ನವದೆಹಲಿ: ಎಂಜಿನಿಯರ್‌ಗಳ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಹೃದಯಪೂರ್ವಕ ಗೌರವ ಸಲ್ಲಿಸಿದ್ದಾರೆ. ಸರ್ ಎಂ. ವಿಶ್ವೇಶ್ವರಯ್ಯ ಅವರ ಅವಿರತ ಕೊಡುಗೆಗಳು ಭಾರತದ ಆಧುನಿಕ ಎಂಜಿನಿಯರಿಂಗ್ ಕ್ಷೇತ್ರಕ್ಕೆ ಬುನಾದಿಯನ್ನು ಹಾಕಿವೆ.
ಇಂದು ತಮ್ಮ ಎಕ್ಸ್ ಸಂದೇಶದಲ್ಲಿ ಪ್ರಧಾನಮಂತ್ರಿ ಮೋದಿ ಅವರು ಹೇಳಿದ್ದಾರೆ:
“ಎಂಜಿನಿಯರ್‌ಗಳ ದಿನದಂದು, ಭಾರತದ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ತಮ್ಮ ಅಪೂರ್ವ ಪ್ರತಿಭೆಯಿಂದ ಅಮಿಟ ಛಾಪು ಮೂಡಿಸಿದ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ನಾನು ನಮನ ಸಲ್ಲಿಸುತ್ತೇನೆ. ತಮ್ಮ ಸೃಜನಶೀಲತೆ ಮತ್ತು ದೃಢತೆಯ ಮೂಲಕ ನಾವೀನ್ಯತೆಯನ್ನು ಮುನ್ನಡೆಸುತ್ತಿರುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸವಾಲುಗಳನ್ನು ಎದುರಿಸುತ್ತಿರುವ ಎಲ್ಲ ಎಂಜಿನಿಯರ್‌ಗಳಿಗೆ ನನ್ನ ಶುಭಾಶಯಗಳು. ವಿಕಸಿತ ಭಾರತದ ನಿರ್ಮಾಣದಲ್ಲಿ ನಮ್ಮ ಎಂಜಿನಿಯರ್‌ಗಳು ನಿರ್ಣಾಯಕ ಪಾತ್ರವನ್ನು ಮುಂದುವರೆಸಲಿದ್ದಾರೆ.”
ಈ ಸಂದೇಶವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪ್ರಧಾನಮಂತ್ರಿಗಳು, ಎಂಜಿನಿಯರ್‌ಗಳ ಕೊಡುಗೆಯನ್ನು ಶ್ಲಾಘಿಸಿದ್ದಾರೆ.