ಬೆಂಗಳೂರು: ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಕಾಂಗ್ರೆಸ್ ಪಕ್ಷದ ಮೇಲೆ ವೋಟ್ ಚೋರಿ ಆರೋಪವನ್ನು ಮಾಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಈ ಅಕ್ರಮದ ಬಗ್ಗೆ ಸುದ್ದಿಗೋಷ್ಠಿ ನಡೆಸಿ “ಬಾಂಬ್” ಸಿಡಿಸುತ್ತಾರಾ ಎಂದು ಪ್ರಶ್ನಿಸಿದ್ದಾರೆ.
ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಆರ್.ಅಶೋಕ ಅವರು, “ಕಾಂಗ್ರೆಸ್ ಶಾಸಕರ ವೋಟ್ ಚೋರಿ ವಿರುದ್ಧ ಅಭಿಯಾನ ಮಾಡಲು ರಾಹುಲ್ ಗಾಂಧಿ ಅವರು ಈಗ ಮಾಲೂರಿಗೆ ಬರುತ್ತಾರಾ? ಮಹದೇವಪುರದ ಮತದಾರರ ಪಟ್ಟಿಗೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ‘ಆಟಂ ಬಾಂಬ್’ ಸಿಡಿಸಿದ ರೀತಿ, ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ನಡೆಸಿರುವ ಅಕ್ರಮದ ಬಗ್ಗೆಯೂ ರಾಹುಲ್ ಗಾಂಧಿ ಅವರು ಸುದ್ದಿಗೋಷ್ಠಿ ನಡೆಸಿ ‘ಬಾಂಬ್’ ಸಿಡಿಸುತ್ತಾರಾ?” ಎಂದು ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ಟೀಕಿಸಿದ್ದಾರೆ.
“ವೋಟ್ ಚೋರ್ ಕಹಾ ಹೈ? ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ ಹೈ!” ಎಂದು ಆರ್.ಅಶೋಕ ತಮ್ಮ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕರು ಮತದಾರರ ಪಟ್ಟಿಯಲ್ಲಿ ಅಕ್ರಮವೆಸಗಿದ್ದಾರೆ ಎಂಬ ಗಂಭೀರ ಆರೋಪವನ್ನು ಮಾಡಿರುವ ಅವರು, ಈ ಬಗ್ಗೆ ರಾಹುಲ್ ಗಾಂಧಿ ಅವರು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆದಿರುವ ಈ ಆರೋಪಿತ ಅಕ್ರಮಗಳ ಬಗ್ಗೆ ತನಿಖೆ ನಡೆಸಿ, ಸತ್ಯಾಸತ್ಯತೆಯನ್ನು ಬಹಿರಂಗಪಡಿಸುವಂತೆ ಆರ್.ಅಶೋಕ ಒತ್ತಾಯಿಸಿದ್ದಾರೆ.