ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಮೇರು ಕಾದಂಬರಿಕಾರರು, ಸರಸ್ವತಿ ಸಮ್ಮಾನ್ ಪುರಸ್ಕೃತರು ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆಳವಾದ ದುಃಖ ವ್ಯಕ್ತಪಡಿಸಿದ್ದಾರೆ.
“ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಉತ್ಕೃಷ್ಟ ಕಾದಂಬರಿಗಳನ್ನು ನೀಡಿ ಲಕ್ಷಾಂತರ ಓದುಗರ ಮನಗೆದ್ದಿದ್ದ ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ” ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.