ಬೆಂಗಳೂರು: ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತಂತೆ ವಿಶೇಷ ಸಭೆ ನಡೆಯಿತು. ಈ ಸಭೆಯಲ್ಲಿ ಕೇಂದ್ರ ಸರ್ಕಾರದ ಸಚಿವರು, ಲೋಕಸಭಾ ಮತ್ತು ರಾಜ್ಯಸಭಾ ಸಂಸದರು ಹಾಗೂ ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಭಾಗವಹಿಸಿದ್ದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಕೆ. ಪಾಟೀಲ, ಶಿವಾನಂದ ಪಾಟೀಲ, ಎಂ.ಬಿ. ಪಾಟೀಲ, ಸತೀಶ್ ಜಾರಕಿಹೊಳಿ, ಆರ್.ಬಿ. ತಿಮ್ಮಾಪುರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಸಂಸದರು, ಶಾಸಕರು, ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಮತ್ತು ಇತರರು ಉಪಸ್ಥಿತರಿದ್ದರು.
ಕಬ್ಬು ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರಕ್ಕೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಸಭೆಯನ್ನು ಆಯೋಜಿಸಲಾಗಿತ್ತು.












