Tuesday, July 28, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

೩.೫ ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳು ಸಕ್ರಮಗೊಂಡಿವೆ: ಇಂಧನ ಸಚಿವ ಕೆ.ಜೆ. ಜಾರ್ಜ್

SP by SP
8 months ago
Reading Time: 1 min read
A A
18
SHARES
50
VIEWS

ವಿಜಯನಗರ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ೩.೫ ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದ ಸುಮಾರು ೧ ಲಕ್ಷ ಪಂಪ್‌ಸೆಟ್‌ಗಳನ್ನು ಶೀಘ್ರದಲ್ಲೇ ಸಕ್ರಮ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ೪.೫ ಲಕ್ಷ ಅಕ್ರಮ-ಸಕ್ರಮ ಅರ್ಜಿಗಳು ಬಾಕಿ ಇದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಈಗಾಗಲೇ ೩.೫ ಲಕ್ಷ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದವುಗಳ ಕಾರ್ಯವೂ ವೇಗವಾಗಿ ನಡೆಯುತ್ತಿದೆ” ಎಂದರು.

ನವೀಕೃತ ಶೀಘ್ರ ಸಂಪರ್ಕ ಯೋಜನೆಯಡಿ ರೈತರು ಸ್ವತಃ ಮೂಲಸೌಕರ್ಯ ಕಲ್ಪಿಸಿಕೊಂಡರೆ ತಕ್ಷಣ ಸಂಪರ್ಕ ನೀಡಲಾಗುವುದು ಎಂದು ಸಚಿವರು ಸಲಹೆ ನೀಡಿದರು.

ಅಕ್ರಮ ಹುಕ್‌ಲೈನ್‌ಗಳಿಂದ ವಿದ್ಯುತ್ ಲೋಡ್ ಹೆಚ್ಚಾಗಿ ಪರಿವರ್ತಕಗಳು ಹಾಳಾಗುತ್ತಿವೆ ಎಂದು ಕಿಡಿಕಾರಿದ ಸಚಿವರು, ಇಂತಹ ಪ್ರಕರಣಗಳಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ದಿನಗಟ್ಟಲೆ ವಿದ್ಯುತ್ ಸರಬರಾಜು ಒದಗಿಸುವ ನಿಟ್ಟಿನಲ್ಲಿ ಕುಸುಮ್-ಬಿ ಮತ್ತು ಕುಸುಮ್-ಸಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ. ಕುಸುಮ್-ಬಿ ಯೋಜನೆಗೆ ರಾಜ್ಯ ಸರ್ಕಾರ ಶೇ.೫೦ ಸಬ್ಸಿಡಿ ನೀಡುತ್ತಿದೆ. ೧೦ ಎಚ್‌ಪಿ ವರೆಗೆ ಸೋಲಾರ್ ಪಂಪ್‌ಸೆಟ್‌ಗಳು ಸಮರ್ಪಕವಾಗಿ ಕೆಲಸ ಮಾಡುತ್ತವೆ ಎಂದು ಸಚಿವರು ಖಚಿತಪಡಿಸಿದರು.

ತಾಂಡಾ ಮತ್ತು ದೊಡ್ಡಿಗಳಲ್ಲಿ ಅಕ್ರಮ ಸಂಪರ್ಕಗಳು ಹೆಚ್ಚಿರುವುದನ್ನು ಸೂಚಿಸಿದ ಅವರು, ಏಕಾಏಕಿ ಸಂಪರ್ಕ ಕಡಿತಗೊಳಿಸದೆ ಅಧಿಕೃತ ಸಂಪರ್ಕಕ್ಕೆ ಒತ್ತಾಯಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಸಕ್ತ ಸಾಲಿನಲ್ಲಿ ೧೦೦ ಹೊಸ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಹಾಳಾದ ಪರಿವರ್ತಕಗಳನ್ನು ಬದಲಾಯಿಸುವಾಗ ಇಲಾಖೆಯ ವಾಹನದಲ್ಲಿಯೇ ಸಾಗಿಸಿ ಅಳವಡಿಸಬೇಕು, ರೈತರು ತಮ್ಮ ವಾಹನದಲ್ಲಿ ತರಬೇಕಾದ ಪರಿಸ್ಥಿತಿ ಬರಬಾರದು ಎಂದು ಸೂಚಿಸಿದರು.

ಸಭೆಯಲ್ಲಿ ಸಂಸದ ಇ. ತುಕಾರಾಮ್, ಶಾಸಕರಾದ ಎಚ್.ಆರ್. ಗವಿಯಪ್ಪ, ಕೆ. ನೇಮಿರಾಜ ನಾಯ್ಕ, ಡಾ. ಎನ್.ಟಿ. ಶ್ರೀನಿವಾಸ್, ಎಲ್. ಕೃಷ್ಣ ನಾಯ್ಕ, ಲತಾ ಮಲ್ಲಿಕಾರ್ಜುನ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ ಪಾಂಡೆ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜೆಸ್ಕಾಂ ಎಂಡಿ ಕೃಷ್ಣ ಬಾಜಪೈ ಮುಂತಾದವರು ಭಾಗವಹಿಸಿದ್ದರು.

ವಿಜಯನಗರ ಜಿಲ್ಲೆಯಲ್ಲಿ ಮೂರು ಹೊಸ ವಿದ್ಯುತ್ ಉಪಕೇಂದ್ರಗಳ ಲೋಕಾರ್ಪಣೆ-ಭೂಮಿಪೂಜೆ

ಹೊಸಪೇಟೆ: ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಮಂಗಳವಾರ ವಿಜಯನಗರ ಜಿಲ್ಲೆಯಲ್ಲಿ ಒಂದು ಹೊಸ ವಿದ್ಯುತ್ ಉಪಕೇಂದ್ರವನ್ನು ಲೋಕಾರ್ಪಣೆಗೊಳಿಸಿ, ಎರಡು ೧೧೦/೧೧ ಕೆವಿ ಉಪಕೇಂದ್ರಗಳಿಗೆ ಭೂಮಿಪೂಜೆ ನೆರವೇರಿಸಿದರು.

ಹೊಸಪೇಟೆ ತಾಲೂಕಿನ ಬೈಲೊದ್ದಿಗೆರೆ ಗ್ರಾಮದಲ್ಲಿ ನವೀಕೃತವಾಗಿ ನಿರ್ಮಿಸಿದ ವಿದ್ಯುತ್ ಉಪಕೇಂದ್ರವನ್ನು ಉದ್ಘಾಟಿಸಿದ ಸಚಿವರು, ನಾಗೇನಹಳ್ಳಿ ಬಳಿ ₹೨೨.೮೬ ಕೋಟಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಬಳಿ ₹೨೭.೬೫ ಕೋಟಿ ವೆಚ್ಚದ ಎರಡು ೧೧೦/೧೧ ಕೆವಿ ಉಪಕೇಂದ್ರಗಳ ಭೂಮಿಪೂಜೆ ನೆರವೇರಿಸಿದರು. ಇದೇ ರೀತಿ ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಬೆಳಗಟ್ಟ ಬಳಿ ₹೨೨.೪೭ ಕೋಟಿ ವೆಚ್ಚದ ೬೬/೧೧ ಕೆವಿ ಉಪಕೇಂದ್ರಕ್ಕೂ ಚಾಲನೆ ನೀಡಿದರು.

ಈ ಕಾಮಗಾರಿಗಳಿಂದ ಜಿಲ್ಲೆಯಲ್ಲಿ ವಿದ್ಯುತ್ ಸರಬರಾಜು ಸುಗಮಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.

Tags: KarnatakaKarnataka Newsnews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಕಾವೇರಿ ನೀರು: ನಿಯಮಕ್ಕಿಂತ ಹೆಚ್ಚು ಹರಿಸಿದೆ ಎಂದು ಬಿಜೆಪಿ ಆರೋಪ; ಸಂಸತ್ತಿನ ದಾಖಲೆಗಳನ್ನು ಉಲ್ಲೇಖಿಸಿ ಆರ್. ಅಶೋಕ್ ಟೀಕೆ

July 28, 2026

ಆಪ್ ಸಿಂದೂರ್ ಪಾಕಿಸ್ತಾನದ ಪ್ರತಿ ದುರಾಕ್ರಮಣಕ್ಕೆ ಭಾರತದ ನಿರ್ಣಾಯಕ ಪ್ರತಿಕ್ರಿಯೆಯ ಪುರಾವೆ: ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್

July 26, 2026

ಕಾರ್ಗಿಲ್ ವಿಜಯ ದಿವಸ 2026: ವೀರ ಯೋಧರ ಶೌರ್ಯ, ತ್ಯಾಗ ಮತ್ತು ತಂತ್ರಜ್ಞಾನದ ವಿಜಯಕ್ಕೆ ರಾಷ್ಟ್ರವ್ಯಾಪಿ ಗೌರವ

July 26, 2026

ಆಂಥ್ರೋಪಿಕ್ ಏಐ ಬೆಂಗಳೂರು ಕಚೇರಿ ಭೇಟಿ: ಆಡಳಿತ, ಶಿಕ್ಷಣ ಮತ್ತು ನಾವೀನ್ಯತೆಯಲ್ಲಿ ಏಐ ಅನ್ವಯಕ್ಕೆ ಪ್ರಿಯಾಂಕ್ ಖರ್ಗೆ ಚರ್ಚೆ

July 25, 2026

Recent News

ಕಾಂಗ್ರೆಸ್ ಗೂಂಡಾ ಸಂಸ್ಕೃತಿ ಬಯಲು: ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ ಹಲ್ಲೆ ಪ್ರಕರಣದಲ್ಲಿ KPCC ಕಚೇರಿ ಸಂಬಂಧ?

July 24, 2026

ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಲು ಕ್ರಮ: ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

July 25, 2026

ರಾಜ್ಯದ ಎಲ್ಲಾ ಎಸ್‌ಟಿಪಿ ಘಟಕಗಳ ಸಮೀಕ್ಷೆ ನಡೆಸಲು ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

July 25, 2026

ಖಾಸಗಿ ಹೂಡಿಕೆ, ಕರಾವಳಿ ಪ್ರವಾಸೋದ್ಯಮ ಮತ್ತು ಜಾಗತಿಕ ಬ್ರ್ಯಾಂಡಿಂಗ್ ಮೂಲಕ ಪ್ರವಾಸೋದ್ಯಮಕ್ಕೆ ಹೊಸ ವೇಗ

July 23, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.