ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧ್ಯಕ್ಷರೂ ಆದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಮಂಡಳಿಯ 46ನೇ ಸಭೆಯ ಅಧ್ಯಕ್ಷತೆ ವಹಿಸಿದರು.
ಸಭೆಯಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದಿತ್ಯ ಬಿಸ್ವಾಸ್, ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲಕೃಷ್ಣ, ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಡಿ. ಭಾರತಿ, ಜಂಟಿ ಕಾರ್ಯದರ್ಶಿ ಹಾಗೂ ಜಂಟಿ ಕಾರ್ಮಿಕ ಆಯುಕ್ತ ಉಮೇಶ್, ಮಂಡಳಿ ಸದಸ್ಯರು ವಿಜಯಕುಮಾರ್ ಪಾಟೀಲ್, ಜಾನಿ, ಎಚ್.ಜೆ. ರಮೇಶ್, ವಿಜಯಲಕ್ಷ್ಮಿ, ಶ್ರೇಯಾನ್ಸ್ ಜೈನ್, ಬಸಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದ ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಈ ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿದುಬಂದಿದೆ.












