ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ “ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ”ಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಸಚಿವರಾದ ಎಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ, ಪ್ರಿಯಾಂಕ ಖರ್ಗೆ, ರಹೀಂ ಖಾನ್ ಉಪಸ್ಥಿತರಿದ್ದರು. ಅಪರ ಮುಖ್ಯ ಕಾರ್ಯದರ್ಶಿ ಅಂಜೂಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಇದಲ್ಲದೆ, ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಯೋಜನೆಗಳ ಪ್ರಗತಿಯನ್ನು ವಿವಿಧ ಇಲಾಖೆಗಳೊಂದಿಗೆ ಚರ್ಚಿಸಿ, ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿರ್ದೇಶನಗಳನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಈ ಸಭೆ ಮಹತ್ವದ್ದಾಗಿದೆ.












