Sunday, September 6, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಕಾಂಗ್ರೆಸ್‌ನ ನುಂಗಣ್ಣಗಳ ಭ್ರಷ್ಟಾಚಾರ ಬಯಲು, ಇನ್ನಷ್ಟು ಹೋರಾಟ ಮುಂದುವರೆಯಲಿದೆ:ಪ್ರತಿಪಕ್ಷ ನಾಯಕ ಆರ್. ಅಶೋಕ್

PREM SHEKHAR PV by PREM SHEKHAR PV
7 months ago
Reading Time: 1 min read
A A
18
SHARES
50
VIEWS

ಬೆಂಗಳೂರು: ವಿಧಾನಸಭೆಯ ಇತ್ತೀಚಿನ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಹಗರಣಗಳನ್ನು ಬಹಿರಂಗಪಡಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ಸುಮಾರು 6,000 ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ಆರೋಪಿಸಿ, ಇದಕ್ಕೆ ಸಂಬಂಧಿಸಿದ ಐದು ದಾಖಲೆಗಳು ಹಾಗೂ ಆಡಿಯೋ ಸಾಕ್ಷ್ಯಗಳನ್ನು ಸರ್ಕಾರಕ್ಕೆ ನೀಡಿದ್ದಾಗಿ ತಿಳಿಸಿದರು.

ಆದರೂ ಸರ್ಕಾರ ಸಾಕ್ಷಿ ಕೇಳುತ್ತಿದೆ ಎಂದು ವ್ಯಂಗ್ಯವಾಡಿದ ಅಶೋಕ್, ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಗುತ್ತಿಗೆದಾರರು 40% ಕಮಿಷನ್ ಆರೋಪ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕರು ದೊಡ್ಡದಾಗಿ ಆರೋಪ ಮಾಡಿದ್ದರು ಎಂದು ನೆನಪಿಸಿದರು. ಇದೀಗ ಮದ್ಯ ಮಾರಾಟಗಾರರ ಸಂಘದವರು 80% ಭ್ರಷ್ಟಾಚಾರ ಎಂದು ಹೇಳಿದ್ದು, ರಾಹುಲ್ ಗಾಂಧಿಗೂ ದೂರು ನೀಡುವುದಾಗಿ ತಿಳಿಸಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆ ಪಡೆಯದೆ ಸರ್ಕಾರ ಜನರಿಗೆ ದ್ರೋಹ ಮಾಡುತ್ತಿದೆ ಎಂದು ಆರೋಪಿಸಿದರು.

ಸಿಎಂ ಸಿದ್ದರಾಮಯ್ಯನವರೇ ಈ ಹಗರಣದಲ್ಲಿ ಭಾಗಿಯಾಗಿರುವುದರಿಂದ ರಾಜೀನಾಮೆ ಪಡೆಯದಿರುವುದಾಗಿ ಜನರು ಹೇಳುತ್ತಿದ್ದಾರೆ ಎಂದ ಅಶೋಕ್, ಇದರ ವಿರುದ್ಧ ಇನ್ನಷ್ಟು ಹೋರಾಟ ನಡೆಸಿ 6,000 ಕೋಟಿ ರೂಪಾಯಿಗಳನ್ನು ವಸೂಲಿ ಮಾಡಿ ಜನರ ಹಣ ಉಳಿಸುವುದಾಗಿ ಭರವಸೆ ನೀಡಿದರು.

ಗಾಂಧೀಜಿ ಹೆಸರಿನ ದುರುಪಯೋಗ ಆರೋಪ

ವಿಬಿ ಜಿ ರಾಮ್ ಜಿ ಯೋಜನೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ವತಿಯಿಂದ ಜಾಹೀರಾತು ನೀಡಿದ್ದೇವೆ ಎಂದ ಅವರು, ಕಾಂಗ್ರೆಸ್ ಸರ್ಕಾರದ ಹಣದಲ್ಲಿ ಜಾಹೀರಾತು ನೀಡಿಲ್ಲ ಎಂದರು. ಮಹಾತ್ಮ ಗಾಂಧೀಜಿ ಆಶಯಕ್ಕೆ ವಿರುದ್ಧವಾಗಿ ಮದ್ಯದಂಗಡಿಗಳನ್ನು ನಿರ್ಮಿಸಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಗೋಹತ್ಯೆ ವಿರುದ್ಧ ಗಾಂಧೀಜಿ ಹೇಳಿದ್ದರೂ ಕಾಂಗ್ರೆಸ್ ಸಂಬಂಧಿತ ಮಸೂದೆಯನ್ನು ವಿರೋಧಿಸಿತು ಎಂದರು.

ರಘುಪತಿ ರಾಘವ ರಾಜಾರಂ ಎಂದಿದ್ದ ಗಾಂಧೀಜಿಯ ಹೆಸರನ್ನು ಯೋಜನೆಗಳಿಗೆ ಇಡದೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೆಸರನ್ನು ಇಟ್ಟಿದ್ದಾರೆ ಎಂದು ಟೀಕಿಸಿದರು. 470 ಯೋಜನೆಗಳಲ್ಲಿ ಗಾಂಧೀಜಿ ಅಥವಾ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಿಲ್ಲ ಎಂದು ಹೇಳಿ, ಕಾಂಗ್ರೆಸ್ ನಾಯಕರು ನಕಲಿ ಗಾಂಧಿಗಳು ಎಂದರು.

ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ ಎಂದು ವಾಗ್ದಾಳಿ ನಡೆಸಿದ ಅಶೋಕ್, ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದರು, ಬೋಫೋರ್ಸ್ ಹಗರಣದ ಹೆಸರಿಟ್ಟರು ಎಂದು ಉಲ್ಲೇಖಿಸಿದರು.

ಡಿ.ಕೆ.ಶಿವಕುಮಾರ್-ಸಿದ್ದರಾಮಯ್ಯ ವಾರ್ ಮತ್ತೆ ಆರಂಭ

ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ವಾರ್ ಮತ್ತೆ ಶುರುವಾಗಿದೆ ಎಂದ ಅಶೋಕ್, ಮುಂದೆ ಅಭಿವೃದ್ಧಿಗಿಂತ ಕುರ್ಚಿ ಕಾಳಗವೇ ಹೆಚ್ಚಾಗಲಿದೆ ಎಂದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯ ಬದಲು ಯತೀಂದ್ರ ಸಿದ್ದರಾಮಯ್ಯನವರೇ ನಾಯಕ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಳ್ಳಬೇಕು ಎಂದು ವ್ಯಂಗ್ಯವಾಡಿದರು. ಹೈಕಮಾಂಡ್ ಪವರ್‌ಲೆಸ್ ಆಗಿದೆ ಎಂದರು.

ಜಿಬಿಎ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ

ಬಿಬಿಎಂಪಿ (ಜಿಬಿಎ) ಚುನಾವಣೆಗೆ ಸಂಬಂಧಿಸಿ ನಾಳೆ ಸಭೆ ನಡೆಯಲಿದೆ ಎಂದ ಅಶೋಕ್, ಎಲ್ಲ ಶಾಸಕರು ಹಾಗೂ ಜಿಲ್ಲಾ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಬಿಜೆಪಿ ಬಿಬಿಎಂಪಿಯಲ್ಲಿ ಗೆದ್ದಿತ್ತು ಎಂದು ನೆನಪಿಸಿ, ಈಗ ತೆರಿಗೆಗಳ ಹೆಚ್ಚಳದಿಂದ ಕಾಂಗ್ರೆಸ್‌ಗೆ ಜನರು ಕಪಾಳ ಮೋಕ್ಷ ಮಾಡಲಿದ್ದಾರೆ ಎಂದರು. ಐದು ಪಾಲಿಕೆಗಳನ್ನು ಗೆಲ್ಲುವ ತಂತ್ರ ಮಾಡಲಾಗುತ್ತಿದೆ ಎಂದರು.

ಕಾಂಗ್ರೆಸ್ ನಾಯಕರು ತುಘಲಕ್‌ನಂತೆ ಎಡಬಿಡಂಗಿಗಳು ಎಂದು ಟೀಕಿಸಿದ ಅಶೋಕ್, ಮತಯಂತ್ರವನ್ನು ರಾಜೀವ್ ಗಾಂಧಿ ತಂದಿದ್ದು ಈಗ ಅದರ ಮೇಲೇ ನಂಬಿಕೆ ಇಲ್ಲ ಎಂದರು. ಕೋರ್ಟ್ ಮತಯಂತ್ರವನ್ನು ಮಾನ್ಯ ಮಾಡಿದೆ ಎಂದು ಹೇಳಿ, ನಾಯಕತ್ವ ಇಲ್ಲದ ಸೋಲಿನಿಂದ ಪಾಠ ಕಲಿಯದೆ ಮತಯಂತ್ರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

ರಾಜ್ಯದ ಅಭಿವೃದ್ಧಿಗೆ ಹಣವಿಲ್ಲ, ನೌಕರರ ಸಂಬಳ ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿ, ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯ ಬಗ್ಗೆ ಚರ್ಚೆ ಬಿಟ್ಟು ಕಾಂಗ್ರೆಸ್ ವಿರುದ್ಧ ಮಾತನಾಡುವವರನ್ನು ಪತ್ತೆ ಮಾಡಲು 67 ಕೋಟಿ ರೂ. ವೆಚ್ಚ ಮಾಡುತ್ತಿದ್ದಾರೆ ಎಂದರು.

ತಿರುಪತಿಯಲ್ಲಿ ಕಳಪೆ ತುಪ್ಪ ಬಳಕೆಯ ತನಿಖೆ ನಡೆದಿದ್ದು, ಧರ್ಮಸ್ಥಳದ ಪಾವಿತ್ರ್ಯತೆ ಹಾಳು ಮಾಡಲು ಸಿಎಂ ಸಿದ್ದರಾಮಯ್ಯ ತಂತ್ರ ಮಾಡಿದ್ದಾರೆ ಎಂದು ಆರೋಪಿಸಿದರು. ತಿಮ್ಮಾಪುರ ಗ್ಯಾಂಗ್ ಶ್ರದ್ಧಾಕೇಂದ್ರ ಹಾಳು ಮಾಡುವ ಪ್ರಯತ್ನ ಮಾಡಿದೆ ಎಂದು ಹೇಳಿ, ವಿದೇಶಿ ಶಕ್ತಿಗಳ ಕೈವಾಡ ಇದೆ ಎಂದರು.

ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಈ ಆರೋಪಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ. ಸರ್ಕಾರದಿಂದ ಇನ್ನೂ ಅಧಿಕೃತ ಪ್ರತಿಕ್ರಿಯೆ ಬರಬೇಕಿದೆ.

Tags: KarnatakaKarnataka Newsnews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ತುಂಗಭದ್ರ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯಕ್ಕೆ ತಕ್ಷಣ ನಿರ್ಧಾರ: ಬಿ.ವೈ. ವಿಜಯೇಂದ್ರ

September 5, 2026

ಶಿಕ್ಷಕರ ದಿನಾಚರಣೆ: ಸರ್ಕಾರಿ ಶಾಲೆಯಲ್ಲೇ ಆಚರಿಸಿದ ಸಚಿವ ಮಧು ಬಂಗಾರಪ್ಪ

September 5, 2026

ಹೈಕೋರ್ಟ್ ನೋಟಿಸ್ ನಡುವೆಯೂ ಗೃಹಲಕ್ಷ್ಮಿ ಹಣ ಬಾಕಿ; ಸರ್ಕಾರ ಪ್ರಚಾರಕ್ಕೆ ಮಾತ್ರ ಗಮನ: ನಿಖಿಲ್ ಕುಮಾರ್ ಆರೋಪ

September 5, 2026

ವಿದ್ಯಾರ್ಥಿಗಳನ್ನು ಉದ್ಯಮಿಗಳನ್ನಾಗಿ ಸಬಲೀಕರಿಸಿ; ವ್ಯವಹಾರ ಯೋಜನಾ ಸ್ಪರ್ಧೆಗಳಲ್ಲಿ ಹೆಚ್ಚು ಪಾಲ್ಗೊಳ್ಳಲು ಪ್ರೋತ್ಸಾಹಿಸಿ: ಸಚಿವ ಬಸವರಾಜ ರಾಯರೆಡ್ಡಿ

September 5, 2026

Recent News

ಕೊನೆಗೂ ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಮಂಜೂರು: 2 ಕೋಟಿ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026

ಲಾಲ್‌ಬಾಗ್ ಸೇರಿದಂತೆ ಉದ್ಯಾನವನ ಭೂಮಿ ಮಾರಾಟ ವಿಧೇಯಕ: ಡಿಕೆ ಶಿವಕುಮಾರ್ ಸರ್ಕಾರಕ್ಕೆ ಬಿಜೆಪಿ ನಾಯಕ ಅಶೋಕರಿಂದ ತೀವ್ರ ಟೀಕೆ

September 3, 2026

ಕೆಆರ್‌ಐಡಿಎಲ್‌ನಲ್ಲಿ 7% ಲಂಚ: ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐಗೆ ತನಿಖೆ ವಹಿಸಿ – ಪ್ರತಿಪಕ್ಷ ನಾಯಕ ಆರ್. ಅಶೋಕ

September 3, 2026

ಹಬ್ಬದ ಸೀಸನ್‌ನಲ್ಲಿ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಮುಂದುವರಿಕೆ

September 2, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.