Sunday, September 6, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home News Finance Business Industries

ಮಂಡ್ಯದಲ್ಲಿ ARAI ಟೆಸ್ಟಿಂಗ್ ಕೇಂದ್ರಕ್ಕೆ ಹೆಚ್ಚು ಜಾಗ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮನವಿ

PREM SHEKHAR PV by PREM SHEKHAR PV
5 months ago
Reading Time: 2 mins read
A A
18
SHARES
50
VIEWS

ಎರಡು ವರ್ಷಗಳ ನಂತರ ವಿಧಾನಸೌಧಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ; ಎಂಬಿ ಪಾಟೀಲ್ ಜೊತೆ ಸಕಾರಾತ್ಮಕ ಚರ್ಚೆ

ಬೆಂಗಳೂರು: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ವಿಧಾನಸೌಧಕ್ಕೆ ಭೇಟಿ ನೀಡಿದ ಹೆಚ್‌ಡಿ ಕುಮಾರಸ್ವಾಮಿ ಅವರು, ರಾಜ್ಯ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೆ ಮಂಡ್ಯದಲ್ಲಿ ARAI ಆಟೋಮೋಟಿವ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಟೆಸ್ಟಿಂಗ್ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಜಾಗದ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಿದರು.

ವಿಧಾನಸೌಧದಲ್ಲಿ ಎಂ.ಬಿ. ಪಾಟೀಲ್ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು, ಮಂಡ್ಯ ಲೋಕಸಭಾ ಕ್ಷೇತ್ರದ ಜನಪ್ರತಿನಿಧಿಗಳು, ಮಾಜಿ ಮಂತ್ರಿಗಳು ಹಾಗೂ ಮಾಜಿ ಶಾಸಕರು ಭಾಗವಹಿಸಿದ್ದರು. ಸಭೆಯಲ್ಲಿ ಮಂಡ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ, ಉದ್ಯಮಗಳ ಉತ್ತೇಜನ ಮತ್ತು ಉದ್ಯೋಗ ಸೃಷ್ಟಿಯ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.

ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, “ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ ಸ್ಥಾಪಿಸುವ ಬಗ್ಗೆ ಈಗಾಗಲೇ ಹಲವು ಚರ್ಚೆಗಳು ನಡೆದಿವೆ. ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಎಂ.ಬಿ. ಪಾಟೀಲ್ ಅವರನ್ನು ಸಭೆ ಕರೆಯುವಂತೆ ಕೇಳಿದ್ದೆ. ಅವರು ಸಭೆ ಕರೆದಿದ್ದಾರೆ. ಚರ್ಚೆ ಬಹಳ ಉತ್ತಮವಾಗಿ ನಡೆದಿದೆ. ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ,” ಎಂದು ಹೇಳಿದರು.

ARAI ಕೇಂದ್ರಕ್ಕೆ 500-600 ಎಕರೆ ಭೂಮಿ ಅಗತ್ಯ

ಕೇಂದ್ರದ ಅಧೀನದಲ್ಲಿರುವ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರವನ್ನು ಮಂಡ್ಯದಲ್ಲಿ ಸ್ಥಾಪಿಸುವ ಯೋಜನೆ ಬಗ್ಗೆ ವಿವರವಾಗಿ ಚರ್ಚಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು. ದೇಶದಲ್ಲಿ ಪ್ರಸ್ತುತ ನಾಲ್ಕು ಕಡೆ ಮಾತ್ರ ಇರುವ ಈ ಕೇಂದ್ರಗಳಲ್ಲಿ ಐದನೇ ಕೇಂದ್ರವನ್ನು ಕರ್ನಾಟಕಕ್ಕೆ, ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ತರುವುದು ತನ್ನ ಉದ್ದೇಶವಾಗಿದೆ ಎಂದು ಅವರು ವಿವರಿಸಿದರು.

“ಈ ಕೇಂದ್ರವು ಅಂತಾರಾಷ್ಟ್ರೀಯ ಮಟ್ಟದ ಟೆಸ್ಟಿಂಗ್ ಸೌಲಭ್ಯವಾಗಬೇಕು. ವಿಶೇಷವಾಗಿ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಇದು ದೊಡ್ಡ ಉತ್ತೇಜನ ನೀಡಲಿದೆ,” ಎಂದು ಕುಮಾರಸ್ವಾಮಿ ಹೇಳಿದರು.

ARAI ಕೇಂದ್ರ ಸೇರಿದಂತೆ ಪೂರಕ ವ್ಯವಸ್ಥೆಗಳಿಗೆ ಸುಮಾರು 500-600 ಎಕರೆ ಭೂಮಿ ಅಗತ್ಯವಿದೆ. ಇದು ಮಂಡ್ಯದಲ್ಲೇ ಲಭ್ಯವಾಗಬೇಕು ಎಂದು ಅವರು ಒತ್ತಾಯಿಸಿದರು. “ಮಂಡ್ಯದ ಜನರ ಖುಣ ತೀರಿಸುವುದು ನನ್ನ ಜವಾಬ್ದಾರಿ. ಎಂ.ಬಿ. ಪಾಟೀಲ್ ಅವರು ಉತ್ತಮ ಸಹಕಾರ ನೀಡುತ್ತಿದ್ದಾರೆ,” ಎಂದು ಅವರು ಹೇಳಿದರು.

ಜಾಗದ ಕೊರತೆ; ಏಪ್ರಿಲ್ 30ರೊಳಗೆ ಪರಿಹಾರ ಕೋರಿದ್ದಾರೆ

“ಈಗಾಗಲೇ ಎರಡು-ಮೂರು ಸ್ಥಳಗಳನ್ನು ನೋಡಲಾಗಿದೆ. ಆದರೆ ಅಲ್ಲಿ ಲಭ್ಯವಿರುವ ಜಾಗ ಬಹಳ ಸೀಮಿತವಾಗಿದೆ. ಇದನ್ನು ಚರ್ಚಿಸಿದ್ದೇವೆ. ಏಪ್ರಿಲ್ 30ರೊಳಗೆ ಜಾಗದ ಸಮಸ್ಯೆ ಬಗೆಹರಿಸುವಂತೆ ರಾಜ್ಯ ಸಚಿವರನ್ನು ಕೋರಿದ್ದೇನೆ. ಮೇ ತಿಂಗಳಲ್ಲಿ ಭೂಮಿ ಪೂಜೆ ನೆರವೇರಿಸುವ ಉದ್ದೇಶ ನಮ್ಮದು,” ಎಂದು ಕುಮಾರಸ್ವಾಮಿ ಹೇಳಿದರು.

ಒಂದು ಕಡೆ 500 ಎಕರೆ ಸರ್ಕಾರಿ ಭೂಮಿ ಲಭ್ಯವಿದೆ ಎಂದು ಅವರು ಸೂಚಿಸಿದರು. ರೈತರು ಅನುಭೋಗದಲ್ಲಿದ್ದರೆ ಸೂಕ್ತ ಪರಿಹಾರ ನೀಡಿ ಭೂಮಿ ತೆಗೆದುಕೊಳ್ಳಬಹುದು ಎಂದು ಅವರು ಸಲಹೆ ನೀಡಿದ್ದಾರೆ. ರೈತರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ ಎಂದೂ ತಿಳಿಸಿದರು. ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಿಸಿದಂತೆ 100 ಎಕರೆ ಭೂಮಿ ಲಭ್ಯವಿದೆ ಎಂದು ಎಂ.ಬಿ. ಪಾಟೀಲ್ ಅವರು ಭರವಸೆ ನೀಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

“ಮಂಡ್ಯ ಕೃಷಿ ಆಧಾರಿತ ಜಿಲ್ಲೆ. ಸರ್ಕಾರಿ ಹಾಗೂ ಒಣ ಭೂಮಿ ಕಡಿಮೆ. ಆದರೆ ಹೆಚ್ಚು ಜಾಗ ನೀಡಿದರೆ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಬಹುದು. ಎಂ.ಬಿ. ಪಾಟೀಲ್ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ,” ಎಂದು ಅವರು ಸಂತಸ ವ್ಯಕ್ತಪಡಿಸಿದರು.

ದಾವಣಗೆರೆ ದಕ್ಷಿಣ ಕಾಂಗ್ರೆಸ್ ಗಲಾಟೆ: “ಅದು ಅವರ ಪಕ್ಷದ ಆಂತರಿಕ ವಿಚಾರ”

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಗೊಂದಲಗಳ ಬಗ್ಗೆ ಪ್ರಶ್ನಿಸಿದಾಗ ಕುಮಾರಸ್ವಾಮಿ, “ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ನಾನು ಏಕೆ ಉತ್ತರಿಸಬೇಕು? ಮಾಧ್ಯಮಗಳಲ್ಲಿ ನೋಡಿದ್ದೇನೆ. ಅವರಿಗೆ ಸರಿ ಮಾಡಿಕೊಳ್ಳುವುದು ಅಥವಾ ಬಿಡುವುದು ಅವರ ವಿಷಯ,” ಎಂದು ಹೇಳಿದರು.

“ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರೂ ಇದುವರೆಗೆ ನನ್ನ ಸಂಪರ್ಕದಲ್ಲಿಲ್ಲ. ಸಂಪರ್ಕಕ್ಕೆ ಬಂದರೆ ನಮ್ಮ ಹಿರಿಯ ನಾಯಕರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ,” ಎಂದು ಅವರು ಸ್ಪಷ್ಟಪಡಿಸಿದರು.

Tags: Industries

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ತುಂಗಭದ್ರ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯಕ್ಕೆ ತಕ್ಷಣ ನಿರ್ಧಾರ: ಬಿ.ವೈ. ವಿಜಯೇಂದ್ರ

September 5, 2026

ಶಿಕ್ಷಕರ ದಿನಾಚರಣೆ: ಸರ್ಕಾರಿ ಶಾಲೆಯಲ್ಲೇ ಆಚರಿಸಿದ ಸಚಿವ ಮಧು ಬಂಗಾರಪ್ಪ

September 5, 2026

ಹೈಕೋರ್ಟ್ ನೋಟಿಸ್ ನಡುವೆಯೂ ಗೃಹಲಕ್ಷ್ಮಿ ಹಣ ಬಾಕಿ; ಸರ್ಕಾರ ಪ್ರಚಾರಕ್ಕೆ ಮಾತ್ರ ಗಮನ: ನಿಖಿಲ್ ಕುಮಾರ್ ಆರೋಪ

September 5, 2026

ವಿದ್ಯಾರ್ಥಿಗಳನ್ನು ಉದ್ಯಮಿಗಳನ್ನಾಗಿ ಸಬಲೀಕರಿಸಿ; ವ್ಯವಹಾರ ಯೋಜನಾ ಸ್ಪರ್ಧೆಗಳಲ್ಲಿ ಹೆಚ್ಚು ಪಾಲ್ಗೊಳ್ಳಲು ಪ್ರೋತ್ಸಾಹಿಸಿ: ಸಚಿವ ಬಸವರಾಜ ರಾಯರೆಡ್ಡಿ

September 5, 2026

Recent News

ಕೊನೆಗೂ ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಮಂಜೂರು: 2 ಕೋಟಿ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026

ಲಾಲ್‌ಬಾಗ್ ಸೇರಿದಂತೆ ಉದ್ಯಾನವನ ಭೂಮಿ ಮಾರಾಟ ವಿಧೇಯಕ: ಡಿಕೆ ಶಿವಕುಮಾರ್ ಸರ್ಕಾರಕ್ಕೆ ಬಿಜೆಪಿ ನಾಯಕ ಅಶೋಕರಿಂದ ತೀವ್ರ ಟೀಕೆ

September 3, 2026

ಕೆಆರ್‌ಐಡಿಎಲ್‌ನಲ್ಲಿ 7% ಲಂಚ: ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐಗೆ ತನಿಖೆ ವಹಿಸಿ – ಪ್ರತಿಪಕ್ಷ ನಾಯಕ ಆರ್. ಅಶೋಕ

September 3, 2026

ಹಬ್ಬದ ಸೀಸನ್‌ನಲ್ಲಿ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಮುಂದುವರಿಕೆ

September 2, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.