ಬೆಂಗಳೂರು:
ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಬೆಂಗಳೂರಿಗೆ ಆಗಮಿಸಿದರು.
ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ ಆಗಮಿಸಿದ ಉಪರಾಷ್ಟ್ರಪತಿಯವರನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಶಾಸಕ ರಾಮಲಿಂಗ ರೆಡ್ಡಿ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ದಿ ಆರ್ಟ್ ಆಫ್ ಲಿವಿಂಗ್‌ನಲ್ಲಿ ನಡೆಯುವ ಕಾರ್ಯಕ್ರಮಗಳು ಸೇರಿದಂತೆ ಬೆಂಗಳೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.












