ಬೆಂಗಳೂರು: ಬಿಡದಿ ಟೌನ್‌ಶಿಪ್‌ನ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಪತ್ರ ಬರೆದು ಆಹ್ವಾನ ನೀಡಿದ್ದಾರೆ.
ಜೂನ್ 27ರಂದು ಬೆಳಿಗ್ಗೆ 11 ಗಂಟೆಗೆ ಬಿಡದಿಗೆ ಭೇಟಿ ನೀಡುವುದಾಗಿ ಘೋಷಿಸಿರುವ ಕುಮಾರಸ್ವಾಮಿ, ಭೈರಮಂಗಲ ಗ್ರಾಮಕ್ಕೂ ಭೇಟಿ ನೀಡಲಿದ್ದಾರೆ. “ಅಲ್ಲಿಗೆ ಬನ್ನಿ” ಎಂದು ಸಿಎಂ ಡಿಕೆಶಿಗೆ ಆಹ್ವಾನ ನೀಡಿದ್ದಾರೆ.
ಪ್ರವಾಸದ ವಿವರಗಳನ್ನು ಒಳಗೊಂಡ ಪತ್ರವನ್ನು ಸಿಎಂ ಅವರಿಗೆ ಕಳುಹಿಸಿರುವ ಕುಮಾರಸ್ವಾಮಿ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಯುಕ್ತ ಭೇಟಿ ನೀಡುವಂತೆಯೂ ಆಹ್ವಾನಿಸಿದ್ದಾರೆ.
“ನಾವಿಬ್ಬರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿದರೆ ಸ್ಥಳೀಯ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಬಹುದು. ಪರ್ಯಾಯ ಮಾರ್ಗಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಬಿಡದಿ ಟೌನ್‌ಶಿಪ್‌ನ ಅಭಿವೃದ್ಧಿ ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ಎಚ್‌ಡಿ ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಪತ್ರ ವ್ಯವಹಾರ ನಡೆಯುತ್ತಿದೆ.











