Tuesday, September 1, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home Lifestyle Education

ಶೀಘ್ರದಲ್ಲೇ ಮುಖ್ಯ ಗ್ರಂಥಪಾಲಕರ ಹುದ್ದೆ ಭರ್ತಿ: ಮಧು ಬಂಗಾರಪ್ಪ

Ranjitha by Ranjitha
16 hours ago
Reading Time: 2 mins read
A A
18
SHARES
50
VIEWS

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ 24 ಗಂಟೆ ಕಾರ್ಯನಿರ್ವಹಿಸುವ ಗ್ರಂಥಾಲಯಗಳ ಸ್ಥಾಪನೆಗೆ ಚಿಂತನೆ | ಮುದ್ರಣ ದರ ಪ್ರತಿ ಪುಟಕ್ಕೆ 50 ಪೈಸೆ ಹೆಚ್ಚಳ

ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಖಾಲಿ ಇರುವ ಮುಖ್ಯ ಗ್ರಂಥಪಾಲಕರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದರು.

ಬೆಂಗಳೂರಿನ ಹಂಪಿನಗರದ ನಗರ ಕೇಂದ್ರ ಗ್ರಂಥಾಲಯದಲ್ಲಿ ಸೋಮವಾರ ನಡೆದ ಗ್ರಂಥಪಾಲಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಗ್ರಂಥಾಲಯ ಇಲಾಖೆಯನ್ನು ಬಲಪಡಿಸುವುದು ಹಾಗೂ ಓದುವ ಸಂಸ್ಕೃತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.

24 ಗಂಟೆ ಕಾರ್ಯನಿರ್ವಹಿಸುವ ಗ್ರಂಥಾಲಯಗಳು

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಬೆಂಗಳೂರು, ಧಾರವಾಡ ಹಾಗೂ ಮೈಸೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷಾ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಗ್ರಂಥಾಲಯಗಳನ್ನು ಆರಂಭಿಸಲು ಇಲಾಖೆ ಚಿಂತನೆ ನಡೆಸಿದೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

24 ಗಂಟೆ ಗ್ರಂಥಾಲಯ ಆರಂಭಿಸಲು ಸೂಕ್ತ ಸ್ಥಳಗಳನ್ನು ಗುರುತಿಸಿ, ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರು.

ಶಿಕ್ಷಣ ಇಲಾಖೆಯಲ್ಲಿ 18–19 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯ ಸರ್ಕಾರವು ಒಟ್ಟು 72 ಸಾವಿರಕ್ಕೂ ಹೆಚ್ಚು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಂಡಿದೆ. ಶಿಕ್ಷಣ ಇಲಾಖೆಯಲ್ಲಿ ಈಗಾಗಲೇ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

ಇದರ ಜೊತೆಗೆ ಮತ್ತಷ್ಟು 2,500 ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದ್ದು, ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತಲ್ಲಿ ಶಿಕ್ಷಣ ಇಲಾಖೆಯಲ್ಲೇ ಸುಮಾರು 18ರಿಂದ 19 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶವಾಗಲಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಮುದ್ರಣ ಇಲಾಖೆಗೆ ಸಿಹಿ ಸುದ್ದಿ

ಮುದ್ರಣ ಇಲಾಖೆಯ ಬೇಡಿಕೆಗಳಿಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಚಿವರು ಹೇಳಿದರು. ಕಳೆದ 10 ವರ್ಷಗಳಿಂದ ಪುಸ್ತಕಗಳ ಪುಟ ಮುದ್ರಣ ದರದಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ.

ಹೀಗಾಗಿ ಇನ್ನು ಮುಂದೆ ಪ್ರತಿ ಪುಟದ ಮುದ್ರಣ ದರವನ್ನು 50 ಪೈಸೆಯಷ್ಟು ಹೆಚ್ಚಿಸಲಾಗುವುದು ಎಂದು ಅವರು ಘೋಷಿಸಿದರು. ಇದರಿಂದ ಮುದ್ರಣ ಇಲಾಖೆಯ ಕಾರ್ಯನಿರ್ವಹಣೆ ಹಾಗೂ ಸಿಬ್ಬಂದಿಯ ಬೇಡಿಕೆಗಳಿಗೆ ಹೆಚ್ಚಿನ ಬೆಂಬಲ ದೊರೆಯಲಿದೆ ಎಂದು ಅವರು ಹೇಳಿದರು.

ಗ್ರಂಥಾಲಯ ಇಲಾಖೆಗೆ ಹೊಸ ರೂಪ ನೀಡಲು ಸಮಿತಿ

ಶಾಲಾ ಶಿಕ್ಷಣ ಇಲಾಖೆಯ ಭಾಗವಾಗಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಆದ್ದರಿಂದ ಇಲಾಖೆಯನ್ನು ಎಲ್ಲ ರೀತಿಯಿಂದಲೂ ಬಲಪಡಿಸಿ ಮುನ್ನೆಲೆಗೆ ತರಲು ವಿಶೇಷ ಸಮಿತಿ ರಚಿಸಿ ಅಭಿವೃದ್ಧಿ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.

ಗ್ರಂಥಾಲಯಗಳ ಮೂಲಸೌಕರ್ಯ ಸುಧಾರಣೆ, ಓದುಗರಿಗೆ ಅಗತ್ಯ ಸೌಲಭ್ಯಗಳ ವಿಸ್ತರಣೆ ಹಾಗೂ ಪುಸ್ತಕ ಸಂಸ್ಕೃತಿಯನ್ನು ಮತ್ತಷ್ಟು ಬೆಳೆಸುವ ಕುರಿತು ಸಮಿತಿ ಸಲಹೆ ನೀಡಲಿದೆ. ಈ ನಿಟ್ಟಿನಲ್ಲಿ ಎಲ್ಲರ ಸಲಹೆಗಳನ್ನು ಮುಕ್ತವಾಗಿ ಸ್ವೀಕರಿಸಲಾಗುವುದು ಎಂದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಪ್ರೊ. ರಾಜಪ್ಪ ದಳವಾಯಿ ಅವರು ಇಲಾಖೆಯ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಸಚಿವರು ಮನವಿ ಮಾಡಿದರು.

ಕೆಪಿಎಸ್ ಮೂಲಕ ಪೂರ್ವ ಪ್ರಾಥಮಿಕದಿಂದ ಪಿಯುಸಿವರೆಗೆ ಶಿಕ್ಷಣ

ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ (ಕೆಪಿಎಸ್) ಮೂಲಕ ಪೂರ್ವ ಪ್ರಾಥಮಿಕದಿಂದ ಪಿಯುಸಿ ವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಸಾಲ ನೀಡಲು ಮುಂದೆ ಬಂದಿದೆ. ಇದಲ್ಲದೆ, ಎಜಾಕ್ ಸಂಸ್ಥೆಯು ಪ್ರತಿ ಜಿಲ್ಲೆಯಲ್ಲಿ ಸುಮಾರು ₹14 ಕೋಟಿ ವೆಚ್ಚದಲ್ಲಿ ತಲಾ ಒಂದು ಕೆಪಿಎಸ್ ಶಾಲೆ ನಿರ್ಮಿಸಲು ಮುಂದೆ ಬಂದಿದೆ. ಈಗಾಗಲೇ ಶಿವಮೊಗ್ಗ ನಗರದಲ್ಲಿ ಕೆಪಿಎಸ್ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

ಸಾಧಕರಿಗೆ ಸನ್ಮಾನ

ಕಾರ್ಯಕ್ರಮದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಗ್ರಂಥಪಾಲಕರನ್ನು ಸಚಿವರು ಸನ್ಮಾನಿಸಿದರು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಗ್ರಂಥಾಲಯ ಇಲಾಖೆಯ ಸಿಬ್ಬಂದಿಯ ಮಕ್ಕಳಿಗೂ ಗೌರವ ಸಲ್ಲಿಸಲಾಯಿತು.

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಪ್ರೊ. ರಾಜಪ್ಪ ದಳವಾಯಿ ಅವರು ‘ಪುಸ್ತಕ ಸಂಸ್ಕೃತಿ’ ಕುರಿತು ಉಪನ್ಯಾಸ ನೀಡಿದರು. ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಗ್ರಂಥಪಾಲಕ ಡಾ. ಸಿ.ಪಿ. ರಾಮಶೇಷ ಅವರು ‘ಗ್ರಂಥಪಾಲಕರ ದಿನಾಚರಣೆ’ ಕುರಿತು ಮಾತನಾಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತೆ ವಿದ್ಯಾಕುಮಾರಿ ಕೆ., ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಕುಮಾರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags: 15amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಮೇಜರ್ ಜನರಲ್ ಭರತ್ ಮೆಹ್ತಾನಿ

August 31, 2026

ಶೀಘ್ರದಲ್ಲೇ ಮುಖ್ಯ ಗ್ರಂಥಪಾಲಕರ ಹುದ್ದೆ ಭರ್ತಿ: ಮಧು ಬಂಗಾರಪ್ಪ

August 31, 2026

ಸೆಪ್ಟೆಂಬರ್ 4ರಿಂದ ಬೆಂಗಳೂರಿನ ನಾಲ್ಕು ಫ್ಲೈಓವರ್‌ಗಳಲ್ಲಿ ದ್ವಿಚಕ್ರ ವಾಹನಗಳಿಗೆ ನಿಷೇಧ

August 31, 2026

ಹಾಸನ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ; ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ಕೆ.ಎಂ. ಶಿವಲಿಂಗೇಗೌಡ

August 31, 2026

Recent News

ಬೆಂಗಳೂರು ಪೂರ್ವ ನಗರ ಪಾಲಿಕೆಯಲ್ಲಿ ಪಿಓಪಿ ಗಣೇಶ ಮೂರ್ತಿಗಳಿಗೆ ಸಂಪೂರ್ಣ ನಿಷೇಧ : ಆಯುಕ್ತ ಡಿ.ಎಸ್. ರಮೇಶ್

August 29, 2026

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆ; ಬಿಜೆಪಿ ಹೋರಾಟಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ ಎಂದು ಆರ್. ಅಶೋಕ್ ಆರೋಪ

August 29, 2026

ಟೊರೊಂಟೋದಲ್ಲಿ ಕೆನಡಿಯನ್ ಕಂಪನಿ ಮುಖಂಡರೊಂದಿಗೆ ಉನ್ನತ ಮಟ್ಟದ ಸಭೆ:

August 27, 2026

ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ಸಂವಾದ ಉದ್ಘಾಟನೆ:

August 27, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.