Saturday, September 12, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ ಡಿಕೆಶಿ, ಯೂಟರ್ನ್ ಸರ್ಕಾರ: ಆರ್. ಅಶೋಕ್

PREM SHEKHAR PV by PREM SHEKHAR PV
17 hours ago
Reading Time: 1 min read
A A
18
SHARES
50
VIEWS

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ‘ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ’ ಎಂದು ವ್ಯಂಗ್ಯವಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸರ್ಕಾರದ ನೂರು ದಿನಗಳನ್ನು ‘ಕರಾಳ ದಿನ’ ಎಂದು ಕರೆದಿದ್ದಾರೆ. “ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ ಮುಗಿದಿದೆ. ಜನರಿಗೆ ಸಿಕ್ಕಿದ್ದು ಕೇವಲ ಮೂರು ದಿನ. ಇದೊಂದು ಯೂಟರ್ನ್ ಸರ್ಕಾರ,” ಎಂದು ಅವರು ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, ಸರ್ಕಾರದ ನೂರು ದಿನಗಳ ಸಾಧನೆಯನ್ನು ಕಟುವಾಗಿ ಟೀಕಿಸಿದರು. “ಇಡೀ ಸರ್ಕಾರದ ನೂರು ದಿನದ ಗೊಂದಲ ಗೂಡು ನಿವಾರಣೆಗೆ ಡಿಕೆಶಿ ಸತತ ದೆಹಲಿ ಯಾತ್ರೆ ಮಾಡಿದರು. ಜಾಹೀರಾತು ಮತ್ತು ಮಾಧ್ಯಮ ಗೋಷ್ಠಿಗಳಲ್ಲೇ ತೊಡಗಿದ್ದರು,” ಎಂದು ಅವರು ಆರೋಪಿಸಿದರು.

ರಿಯಲ್ ಎಸ್ಟೇಟ್ ದಂಧೆಯ ಆರೋಪ ಮಾಡುತ್ತಾ, ಲಾಲ್‌ಬಾಗ್, ಸ್ಯಾಂಕಿ ಟ್ಯಾಂಕ್, ಹೆಬ್ಬಾಳ ಕೆರೆ ಜಾಗ ನುಂಗುವ ಪ್ರಯತ್ನ, ಬಿಡದಿ ಟೌನ್‌ಶಿಪ್‌ನಲ್ಲಿ ಒಂಬತ್ತು ಸಾವಿರ ಎಕರೆ ಹಾಗೂ ಆನೇಕಲ್‌ನಲ್ಲಿ ಕೆಐಎಡಿಬಿ ಹೆಸರಲ್ಲಿ ಮೂರು ಸಾವಿರ ಎಕರೆ ನುಂಗುವ ಯೋಜನೆಗಳನ್ನು ಸರ್ಕಾರದ ‘ಸಾಧನೆ’ಗಳೆಂದು ಅವರು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಭೀಕರ ಬರವಿದ್ದರೂ ನಾಲ್ಕು ತಿಂಗಳಲ್ಲಿ ಯಾರಿಗೂ ಬರ ಪರಿಹಾರ ನೀಡದಿರುವುದು, ಬರಕ್ಕೆ ಹಣ ಬಿಡುಗಡೆ ಮಾಡದಿರುವುದು ಮತ್ತು ಕಾಂಗ್ರೆಸ್ ಸರ್ಕಾರ ಬಂದ ನಂತರ 2500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಮೌನ ವಹಿಸಿದ್ದನ್ನು ಅವರು ತೀವ್ರವಾಗಿ ಖಂಡಿಸಿದರು. ಗುಂಡಿಗೆ ಬಿದ್ದು ಸತ್ತವರ ವಿಚಾರದಲ್ಲಿ ಒಂದು ಲಕ್ಷ ರೂಪಾಯಿ ತೆಗೆದುಕೊಂಡಿದ್ದಾರೆ ಎಂದೂ ಆರೋಪಿಸಿದರು.

ಉದ್ಯಾನ ಜಾಗದಲ್ಲಿ ಶೇಕಡಾ ಐದರಷ್ಟು ಜಾಗವನ್ನು ರಿಯಲ್ ಎಸ್ಟೇಟ್‌ಗೆ ನೀಡಲು ಮುಂದಾಗಿದ್ದ ಸರ್ಕಾರ ಜನರ ವಿರೋಧದ ನಂತರ ಹಿಂದೆ ಸರಿದಿದೆ ಎಂದು ಹೇಳಿದ ಅಶೋಕ್, ಲಾಲ್‌ಬಾಗ್‌ನಲ್ಲಿ 15 ಎಕರೆ ಅದಾನಿಗೆ ಕೊಡುತ್ತೇವೆ ಎಂದು ಹೇಳಿ ನಂತರ ಯೂಟರ್ನ್ ಹೊಡೆದಿರುವುದನ್ನು ಉದಾಹರಿಸಿದರು. ಕಾವೇರಿ ವಿಚಾರದಲ್ಲಿ ನಾಲ್ಕು ಬಾರಿ ಹಿನ್ನಡೆಯಾಗಿರುವುದು, ಪಿಡಿ ಖಾತೆಯ ಹಣವನ್ನು ಬರಕ್ಕೆ ಬಳಸಲಾಗದಿರುವುದು ಮತ್ತು ಸರ್ಕಾರ ದಿವಾಳಿಯಾಗಿರುವುದನ್ನು ಅವರು ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯಲ್ಲಿ ಐದು ಸಾವಿರ ಕೋಟಿ ರೂಪಾಯಿ ‘ತಿಂದಿರುವ’ ಆರೋಪ ಮಾಡಿದ ಅಶೋಕ್, “ಕದ್ದಿರುವುದೇ ಇವರ ಸಾಧನೆ. ಡಿಕೆಶಿ ಅವರು ಮುಖ್ಯಮಂತ್ರಿಯಾದ ಮೇಲೆ ಕೇವಲ ಘೋಷಣೆಗಳನ್ನೇ ಭರಪೂರ ಮಾಡುತ್ತಾರೆ. ಬ್ರ್ಯಾಂಡ್ ಬೆಂಗಳೂರು ಕಸದ ಬುಟ್ಟಿಗೆ ಬಿದ್ದಿದೆ,” ಎಂದರು. ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರನ್ನು ‘ರೀಲ್ ಮಾಸ್ಟರ್’ ಎಂದು ಕರೆದ ಅವರು, ಕಸದಿಂದ ಸ್ವಾತಂತ್ರ್ಯದ ಘೋಷಣೆ ಮಾಡಿದ್ದರೂ ಡಿಕೆಶಿ ಅವರ ಮನೆ ಮುಂದೆಯೇ ಕಸದ ರಾಶಿ ಇದೆ ಎಂದು ಹೇಳಿದರು.

ತೆರಿಗೆಗಳನ್ನು ಹೆಚ್ಚಿಸಿರುವುದು, ಕಸ ಶುಲ್ಕವನ್ನು 40 ರೂಪಾಯಿಯಿಂದ 400 ರೂಪಾಯಿಗೆ ಏರಿಸಿರುವುದು, ಮುದ್ರಾಂಕ ಸುಂಕ ದುಪ್ಪಟ್ಟಾಗಿರುವುದು ಮತ್ತು ಬೆಂಗಳೂರನ್ನು ‘ಗುಂಡಿಗಳ ನಗರ’ವನ್ನಾಗಿ ಮಾಡಿರುವುದನ್ನು ಅವರು ಟೀಕಿಸಿದರು. ಜಿಬಿಎ ಚುನಾವಣೆಯನ್ನು ಮುಂದೂಡುತ್ತಿರುವುದು ಇದಕ್ಕೆ ಸಂಬಂಧಿಸಿದೆ ಎಂದು ಅವರು ಆರೋಪಿಸಿದರು.

ಮೋದಿ ಅವರ ಕಿಸಾನ್ ಸಮ್ಮಾನ್ ಯೋಜನೆಗೆ ಬಿಜೆಪಿ ಸರ್ಕಾರ ಸೇರಿಸಿದ್ದ ಹೆಚ್ಚುವರಿ ನಾಲ್ಕು ಸಾವಿರ ರೂಪಾಯಿಯನ್ನು ಕಾಂಗ್ರೆಸ್ ಸರ್ಕಾರ ತಡೆಹಿಡಿದಿರುವುದು ಮತ್ತು ವಿದ್ಯಾನಿಧಿ ಯೋಜನೆಗೆ ಕಲ್ಲು ಹಾಕಿರುವುದನ್ನು ಉಲ್ಲೇಖಿಸಿ, “ಇದು ರೈತ ಪರ ಸರ್ಕಾರವಲ್ಲ. ಜನರ ನಂಬಿಕೆಗೆ ದ್ರೋಹ ಬಗೆದ ವಿಶ್ವಾಸದ್ರೋಹಿ ಸರ್ಕಾರ. ಸಾಧನೆ ಶೂನ್ಯ,” ಎಂದು ಅಶೋಕ್ ಹೇಳಿದರು.

ಕೆಪಿಎಸ್‌ಸಿ ಹಗರಣ ಮತ್ತು ಎಂಜಿನಿಯರ್ ನೇಮಕಾತಿಯಲ್ಲಿ ಬೋಗಸ್ ಮಾಡಿರುವುದಕ್ಕೆ ಸಾಕ್ಷಿ ಇದೆ ಎಂದು ಆರೋಪಿಸಿದ ಅವರು, ಬಿಜೆಪಿ ಸರ್ಕಾರದ ಹಳೆ ಯೋಜನೆಗಳಿಗೆ ಹೊಸ ಹೆಸರು ಕೊಟ್ಟು ಜಾರಿ ಮಾಡುತ್ತಿರುವುದನ್ನು ಟೀಕಿಸಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥನಾರಾಯಣ್, ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Tags: 15amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ ಡಿಕೆಶಿ, ಯೂಟರ್ನ್ ಸರ್ಕಾರ: ಆರ್. ಅಶೋಕ್

September 11, 2026

ಅಲೆಮಾರಿ, ಅರೆ ಅಲೆಮಾರಿ ಬುಡಕಟ್ಟು ಸಮುದಾಯಗಳೇ ದೇಶದ ಮೂಲ ನಿವಾಸಿಗಳು: ಬಿ.ಕೆ. ಹರಿಪ್ರಸಾದ್

September 11, 2026
29/01/2026. Beijing, China. Prime Minister Keir Starmer meets China???s President Xi Jinping for a bilateral meeting at the Great Hall of the People. Picture by Simon Dawson / No 10 Downing Street

ಸೆ.12ರಂದು ಭಾರತಕ್ಕೆ ಕ್ಸಿ ಜಿನ್‌ಪಿಂಗ್‌; 7 ವರ್ಷಗಳ ಬಳಿಕ ಐತಿಹಾಸಿಕ ಭೇಟಿ

September 11, 2026

ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರಾಗಿ ಡಿಕೆಶಿ ಆಪ್ತ ಎಸ್‌.ರವಿ ಅವಿರೋಧ ಆಯ್ಕೆ; ಸಿದ್ದು ಬಣಕ್ಕೆ ಹಿನ್ನಡೆ

September 11, 2026

Recent News

ದೇವನಹಳ್ಳಿ ಎಂಎಸ್‌ಎಂಇ ತಂತ್ರಜ್ಞಾನ ಕೇಂದ್ರ ವರ್ಷಕ್ಕೆ 10,000 ಮಂದಿಗೆ ವೃತ್ತಿಪರ ಕೌಶಲ್ಯ ತರಬೇತಿ ನೀಡಲಿದೆ: ರೋಹಿಣಿ ಸಿಂಧೂರಿ

September 10, 2026

ಸಿಎಂ ಡಿಕೆ ಶಿವಕುಮಾರ್‌ಗೆ 100 ದಿನಗಳು: ಹೊಸ ಯೋಜನೆಗಳ ಬಂಪರ್, ಬಲಿಷ್ಠ ಕರ್ನಾಟಕಕ್ಕೆ ಸಂಕಲ್ಪ

September 10, 2026

ಆಲ್ಪೈನ್ ಎಪಿಎಲ್ ಪೈಪರ್ಸ್ ಚೆಕ್ ಮುಂಬಾ ಮಾಸ್ಟರ್ಸ್‌ನ್ನು ಸೋಲಿಸಿ ಅತ್ಯುನ್ನತ ಸ್ಥಾನಕ್ಕೆ

September 10, 2026

ಸತೀಶ್ ಜಾರಕಿಹೊಳಿ ವಿರುದ್ಧ ಇಡಿ ದಾಳಿ ರಾಜಕೀಯ ಪ್ರೇರಿತ: ಸಿಎಂ ಡಿ.ಕೆ. ಶಿವಕುಮಾರ್

September 10, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.