Tuesday, September 22, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಯುಕೆಪಿ ನಿವೇಶನ ಅಕ್ರಮ: ತಪ್ಪಿತಸ್ಥರನ್ನು ಮುಲಾಜಿಲ್ಲದೆ ಜೈಲಿಗಟ್ಟಿ – ಸಚಿವ ಚಲುವರಾಯಸ್ವಾಮಿ ಖಡಕ್ ಎಚ್ಚರಿಕೆ

Ranjitha by Ranjitha
4 hours ago
Reading Time: 1 min read
A A
18
SHARES
50
VIEWS

ಕೋಲ್ಹಾರ ಪುನರ್ವಸತಿ ಕೇಂದ್ರದ 1,117 ಅಕ್ರಮ ನಿವೇಶನಗಳು – ಅಕ್ಟೋಬರ್ ಅಂತ್ಯದೊಳಗೆ ಇತ್ಯರ್ಥಕ್ಕೆ ಗಡುವು; ಸಿಐಡಿ ತನಿಖೆಗೆ ಚುರುಕು

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಂತ-1 ಮತ್ತು 2ರಲ್ಲಿ ಮುಳುಗಡೆ ಸಂತ್ರಸ್ತರಿಗೆ ಹಂಚಿಕೆಯಾದ ನಿವೇಶನಗಳಲ್ಲಿ ನಡೆದಿರುವ ಅಕ್ರಮಗಳಲ್ಲಿ ಭಾಗಿಯಾದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಖಡಕ್ ನಿರ್ದೇಶನ ನೀಡಿದ್ದಾರೆ. ಸಿಐಡಿ (ಹಿಂದಿನ ಸಿಒಡಿ) ತನಿಖೆಯನ್ನು ವೇಗಗೊಳಿಸಿ, ಅಕ್ರಮಕ್ಕೆ ಸಹಕರಿಸಿದವರನ್ನು ಜೈಲಿಗಟ್ಟುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸಚಿವರು, ಕೋಲ್ಹಾರ ಪುನರ್ವಸತಿ ಕೇಂದ್ರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಹಲವು ಕಠಿಣ ನಿರ್ದೇಶನಗಳನ್ನು ನೀಡಿದರು. “ಒಬ್ಬರಿಗೆ ಎರಡು-ಮೂರು ನಿವೇಶನ ಹಂಚಿಕೆ, ನಕಲಿ ದಾಖಲೆ ಸೃಷ್ಟಿಸಿ ಅನರ್ಹರಿಗೆ ನಿವೇಶನ ನೀಡಿರುವ ಪ್ರಕರಣಗಳನ್ನು ಕಾನೂನು ಮೂಲಕವೇ ಎದುರಿಸಬೇಕು. ತಪ್ಪು ಮಾಡಿದವರ ಮೇಲೆ ಎಫ್‌ಐಆರ್ ದಾಖಲಿಸಿ. ಸ್ಪಷ್ಟ ಪರಿಹಾರ ಬೇಕು” ಎಂದು ಅವರು ತರಾಟೆಗೆ ತೆಗೆದುಕೊಂಡರು.

ಅಕ್ಟೋಬರ್ ಅಂತ್ಯದೊಳಗೆ ತಾಂತ್ರಿಕ ಸಮಸ್ಯೆಗಳು ಇತ್ಯರ್ಥವಾಗಬೇಕು ಎಂದು ಗಡುವು ನಿಗದಿಪಡಿಸಿದ ಸಚಿವರು, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ (ಆರ್.ಸಿ.) ನೀಡುವಾಗ ಅಭಿವೃದ್ಧಿಪಡಿಸಿದ ಲೇಔಟ್ ನಕ್ಷೆ ಮತ್ತು ಸೌಲಭ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಆದೇಶಿಸಿದರು. ಇ-ಆಸ್ತಿ ಸೃಷ್ಟಿಗೆ ಅಡ್ಡಿಯಾಗಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಲಿಖಿತ ಮಾಹಿತಿ ನೀಡಬೇಕು ಎಂದೂ ಹೇಳಿದರು. 15 ದಿನಗಳಲ್ಲಿ ಬೋರ್ಡ್ ರಚನೆಯಾಗಲಿದ್ದು, ಅದರ ಮುಂದೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ತಾಲೂಕು ಪಂಚಾಯಿತಿ ಇಒ ಅವರನ್ನು ಪ್ರತ್ಯೇಕವಾಗಿ ತರಾಟೆಗೆ ತೆಗೆದುಕೊಂಡ ಸಚಿವರು, “ಇಂತಹ ಸಮಸ್ಯೆಗಳನ್ನು ಪರಿಹರಿಸಲು ಇಷ್ಟು ವರ್ಷ ಬೇಕಿತ್ತಾ? ಪ್ರಾದೇಶಿಕ ಆಯುಕ್ತರೊಂದಿಗೆ ಸಮನ್ವಯ ಸಾಧಿಸಿ ಕೂಡಲೇ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ. ತಿಂಗಳೊಳಗೆ ಇತ್ಯರ್ಥವಾಗದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಸಭೆಯ ಮಧ್ಯೆ ವಿಡಿಯೋ ಕರೆ ಮೂಲಕ ಪ್ರಾದೇಶಿಕ ಆಯುಕ್ತೆ ಜಾನಕಿ ಅವರೊಂದಿಗೆ ಮಾತನಾಡಿದ ಸಚಿವರು, ಸಿಐಡಿ ಜೊತೆ ಮಾತನಾಡಿ ಲಿಖಿತ ಪತ್ರ ಬರೆಯುವಂತೆ ಮತ್ತು ಅಕ್ರಮ ಎಸಗಿದವರು ಹಾಗೂ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ನಿರ್ದೇಶಿಸಿದರು. ಅನಧಿಕೃತವಾಗಿ ನಿವೇಶನ ಪಡೆದವರಿಂದ ಆದಷ್ಟು ಬೇಗ ಜಾಗ ತೆರವುಗೊಳಿಸುವಂತೆ ಸೂಚಿಸಿದರು.

“ಕಳೆದ 15 ವರ್ಷಗಳಿಂದ ಇಂತಹ ಸಮಸ್ಯೆಗಳನ್ನು ಜೀವಂತವಾಗಿಟ್ಟಿದ್ದೀರಿ. ಅಕ್ಟೋಬರ್ ಅಂತ್ಯದೊಳಗೆ ಯಾವುದೇ ದೂರನ್ನು ಹೊತ್ತು ಶಾಸಕ ಶಿವಾನಂದ ಪಾಟೀಲ್ ಅವರು ನನ್ನ ಬಳಿ ಬರುವಂತಾಗಬಾರದು. ಅಪ್ಪಿತಪ್ಪಿ ಶಾಸಕರು ಇದೇ ಸಮಸ್ಯೆಗಳನ್ನು ಹಿಡಿದುಕೊಂಡು ಬಂದರೆ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ” ಎಂದು ಅವರು ಕಠಿಣವಾಗಿ ಎಚ್ಚರಿಸಿದರು.

ಮುಂದಿನ ಒಂದು ತಿಂಗಳೊಳಗೆ ಇಲಾಖೆ ವ್ಯಾಪ್ತಿಯ ನಾಲ್ಕು ನಿಗಮಗಳ ಮಂಡಳಿ ಅಸ್ತಿತ್ವಕ್ಕೆ ಬರಲಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಬೋರ್ಡ್ ಸಭೆ ನಡೆಸಬೇಕು ಎಂದು ಸಚಿವರು ಸೂಚಿಸಿದರು. ಸಭೆಯಲ್ಲಿ ಶಾಸಕ ಶಿವಾನಂದ ಪಾಟೀಲ್, ನೀರಾವರಿ ಇಲಾಖೆ ಕಾರ್ಯದರ್ಶಿ ಕುಲಕರ್ಣಿ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿವಾದದ ಹಿನ್ನೆಲೆ

ಯುಕೆಪಿ ಯೋಜನೆಯಡಿ ಒಟ್ಟು 176 ಗ್ರಾಮಗಳು ಮುಳುಗಡೆಯಾಗಿದ್ದವು. ನಾರಾಯಣಪುರ ಜಲಾಶಯದ ಹಿನ್ನೀರಿನಲ್ಲಿ 40 ಮತ್ತು ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ 136 ಗ್ರಾಮಗಳು ಮುಳುಗಿದ್ದವು. 3,435 ಸಂತ್ರಸ್ತ ಕುಟುಂಬಗಳಿಗಾಗಿ 1995ರಲ್ಲಿ 5,664 ನಿವೇಶನಗಳ ಪುನರ್ವಸತಿ ಕೇಂದ್ರ ರಚಿಸಲಾಗಿತ್ತು.

ಆದರೆ ಇದರಲ್ಲಿ 1,117 ನಿವೇಶನಗಳು ಕಾನೂನುಬಾಹಿರವಾಗಿ ಹಂಚಿಕೆಯಾಗಿದ್ದವು. ಮಧ್ಯವರ್ತಿಗಳು ನಕಲಿ ದಾಖಲೆ ಸೃಷ್ಟಿಸಿ ಅನರ್ಹರಿಗೆ ನಿವೇಶನ ನೀಡಿದ್ದರು. 123 ನಿವೇಶನಗಳು ಇಬ್ಬರಿಗೆ (ಡಬಲ್) ಹಂಚಿಕೆಯಾಗಿದ್ದವು. 2016ರಲ್ಲಿ ಸಿಒಡಿ ತನಿಖೆ ನಡೆದು ಎಂಟು ಅಧಿಕಾರಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು. ಎಸ್‌ಎಲ್‌ಒ ಮತ್ತು ಆರ್‌ಒ ಹಂತದ ಅಧಿಕಾರಿಗಳೂ ಅಕ್ರಮದಲ್ಲಿ ಭಾಗಿಯಾಗಿದ್ದರು. ಆದರೆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ.

Tags: 15amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಯುಕೆಪಿ ನಿವೇಶನ ಅಕ್ರಮ: ತಪ್ಪಿತಸ್ಥರನ್ನು ಮುಲಾಜಿಲ್ಲದೆ ಜೈಲಿಗಟ್ಟಿ – ಸಚಿವ ಚಲುವರಾಯಸ್ವಾಮಿ ಖಡಕ್ ಎಚ್ಚರಿಕೆ

September 22, 2026

ಹಿರಣ್ಯಾಕ್ಷನ ಪಾಪದ ಕೊಡ ತುಂಬುತ್ತಿದೆ: ಬಿಡದಿ ರೈತರ ಮೇಲಿನ ಪೊಲೀಸ್ ದಬ್ಬಾಳಿಕೆಗೆ ಕುಮಾರಸ್ವಾಮಿ ಖಂಡನೆ

September 22, 2026

ಏಷ್ಯನ್ ಗೇಮ್ಸ್‌ ಕಬಡ್ಡಿ: ಕೊರಿಯಾ ವಿರುದ್ಧ ಭಾರತಕ್ಕೆ ಭರ್ಜರಿ 63–31 ಗೆಲುವು

September 22, 2026

ರಕ್ಷಣಾ ಚಾಂಪಿಯನ್ ಭಾರತ ಬಾಂಗ್ಲಾದೇಶವನ್ನು 42–21ರಿಂದ ಸೋಲಿಸಿ ಏಷ್ಯನ್ ಗೇಮ್ಸ್‌ನಲ್ಲಿ ಗೆಲುವಿನ ಆರಂಭ

September 22, 2026

Recent News

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಗೆ ಭೇಟಿ

September 19, 2026

ಕಸ್ತೂರಿರಂಗನ್ ವರದಿ: ರೈತರ ಬದುಕು ಉಳಿಸಲು ಕೆಲಸ ಮಾಡುತ್ತೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

September 19, 2026

ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

September 19, 2026

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಕೇಂದ್ರ ಸಚಿವ ಸೋಮಣ್ಣರಿಂದ ಅಭಿನಂದನೆ

September 19, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.