ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಉಷಾರಾಣಿ, ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಕುರುಬ ಶಾಂತಪ್ಪ ಭರತ್ ಕುಮಾರ್ ಮತ್ತು ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ನೇರಳೆ ವೀರಭದ್ರಯ್ಯ ಭವಾನಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

ಲೋಕಭವನದ ಗಾಜಿನ ಮನೆಯಲ್ಲಿ ಆಯೋಜಿಸಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪದವಿಯ ಅಧಿಕಾರ ಪ್ರಮಾಣವಚನ ಬೋಧಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹಮ್ಮದ್, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಗಣ್ಯರು, ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು, ರಿಜಿಸ್ಟ್ರಾರ್ ಜನರಲ್, ವಕೀಲರು, ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿಗಳ ಕುಟುಂಬ ವರ್ಗದವರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.











