Wednesday, September 30, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಬರ ಪರಿಹಾರ ನೀಡದೆ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ವಿಜಯೇಂದ್ರ

PREM SHEKHAR PV by PREM SHEKHAR PV
11 hours ago
Reading Time: 2 mins read
A A
100
VIEWS

ಬರ ಪರಿಹಾರ ನೀಡದೆ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ್ಲ

ಬೆಂಗಳೂರು: ರಾಜ್ಯದಲ್ಲಿ ಬರದ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲೂ ಕಾಂಗ್ರೆಸ್ ಸರ್ಕಾರ ರೈತರ ನೆರವಿಗೆ ಧಾವಿಸದೆ ಉಡಾಫೆಯಾಗಿ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ವಿಶೇಷ ಅಧಿವೇಶನ ಕರೆದು ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ರೈತರಿಗೆ ನೇರ ಪರಿಹಾರ ನೀಡುವ ವಿಚಾರದಲ್ಲಿ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಗೂ ಇತರ ರಾಜ್ಯಗಳು ಬರ ಮತ್ತು ಸಂಕಷ್ಟದ ವೇಳೆ ರೈತರಿಗೆ ನೀಡಿದ ನೆರವಿನ ಬಗ್ಗೆ ವಿಧಾನಮಂಡಲದಲ್ಲಿ ಚರ್ಚೆಯಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿಯೂ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ಕರ್ನಾಟಕ ಸರ್ಕಾರ ಮಾತ್ರ ರೈತರಿಗೆ ಸಮರ್ಪಕ ಪರಿಹಾರ ನೀಡದೆ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಎಕರೆಗೆ ₹50 ಸಾವಿರ ಪರಿಹಾರ ಆಗ್ರಹ

ಎರಡೂ ಸದನಗಳಲ್ಲಿ ಬಿಜೆಪಿ ರೈತರಿಗೆ ಎಕರೆಗೆ ಕನಿಷ್ಠ ₹50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆ. ಆದರೆ ರಾಜ್ಯ ಸರ್ಕಾರ ಕೇವಲ ₹2,500 ಪರಿಹಾರ ನೀಡಿ ಕೈತೊಳೆದುಕೊಂಡಿದೆ. ಇದು ರೈತರ ಸಂಕಷ್ಟಕ್ಕೆ ತಕ್ಕ ಪರಿಹಾರವಲ್ಲ. ಬರಗಾಲದಲ್ಲಿ ರೈತರ ಬೆನ್ನಿಗೆ ನಿಲ್ಲಬೇಕಿದ್ದ ಸರ್ಕಾರ ಅವರ ನೋವನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ವಿಜಯೇಂದ್ರ ಹೇಳಿದರು.

ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಸರ್ಕಾರ ಸೂಕ್ತ ಪರಿಹಾರ, ಸಾಲದ ಒತ್ತಡದಿಂದ ಮುಕ್ತಿ ಹಾಗೂ ಸಮರ್ಪಕ ವಿದ್ಯುತ್ ಸೇರಿದಂತೆ ಅಗತ್ಯ ನೆರವು ಒದಗಿಸಬೇಕಿತ್ತು. ಆದರೆ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಬೇಕು

ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ನಾಯಕರು ಗ್ಯಾರಂಟಿಗಳ ಮೂಲಕ ಜನರಿಗೆ ಹಲವು ಭರವಸೆಗಳನ್ನು ನೀಡಿದ್ದರು. ಆದರೆ ಈಗ ಅದೇ ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಸರ್ಕಾರಕ್ಕೆ ಕಷ್ಟವಾಗುತ್ತಿದೆ ಎಂದು ವಿಜಯೇಂದ್ರ ಹೇಳಿದರು.

ಆರ್ಥಿಕ ಇಲಾಖೆ ನೀಡಿರುವ ಪತ್ರ ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಆದ್ದರಿಂದ ಹಣಕಾಸು ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೈಜ ಹಣಕಾಸು ಪರಿಸ್ಥಿತಿ ಕುರಿತು ತಕ್ಷಣ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ವಿಕಲಚೇತನರ ಪಿಂಚಣಿ, ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಹಣ ತಲುಪುತ್ತಿಲ್ಲ. ಬಡವರಿಗೆ ಮನೆ ನಿರ್ಮಾಣದಂತಹ ಮೂಲಭೂತ ಕಾರ್ಯಕ್ರಮಗಳಿಗೂ ತೊಂದರೆಯಾಗಿದೆ. ಆದರೆ ಸರ್ಕಾರ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಹೆಸರಿನಲ್ಲಿ ರಾಜಕೀಯ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

“ಜನರ ತೆರಿಗೆ ಹಣವನ್ನು ರಾಜಕೀಯ ಕಾರ್ಯಕರ್ತರಿಗಾಗಿ ಬಳಸುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು. ತೆರಿಗೆದಾರರ ಹಣಕ್ಕೆ ಸರ್ಕಾರ ಉತ್ತರದಾಯಿತ್ವ ಹೊಂದಿದೆ” ಎಂದು ವಿಜಯೇಂದ್ರ ಹೇಳಿದರು.

ಗ್ಯಾರಂಟಿ ಸಮಿತಿಗಳ ಮೂಲಕ ಪಕ್ಷದ ಕಾರ್ಯಕರ್ತರಿಗೆ ಮಣೆ: ಆರೋಪ

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ನಡೆಸಿದ್ದಾರೆ ಎನ್ನಲಾದ ವೀಡಿಯೋ ಕಾನ್ಫರೆನ್ಸ್ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ ಎಂಬ ಆರೋಪಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದರು.

ಜನರ ಅಗತ್ಯ ಆಧರಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕೇ ಹೊರತು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನೀಡುವ ಪಟ್ಟಿಯ ಆಧಾರದ ಮೇಲೆ ಸರ್ಕಾರದ ಸೌಲಭ್ಯಗಳನ್ನು ನೀಡಬಾರದು ಎಂದು ಹೇಳಿದರು.

ಬರ ಪರಿಸ್ಥಿತಿಯಲ್ಲಿ ರೈತರಿಗೆ ಸಮರ್ಪಕ ತ್ರೀ-ಫೇಸ್ ವಿದ್ಯುತ್ ನೀಡಲು ಸಾಧ್ಯವಾಗದಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ. ಅಗತ್ಯವಿದ್ದರೆ ಹೊರರಾಜ್ಯಗಳಿಂದ ವಿದ್ಯುತ್ ಖರೀದಿಸಿಯಾದರೂ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿದರು.

ಚುನಾವಣಾ ಆಯೋಗದ ವಿರುದ್ಧ ಅಪಪ್ರಚಾರ ಸಲ್ಲದು

ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆಯೂ ವಿಜಯೇಂದ್ರ ಪ್ರಶ್ನಿಸಿದರು.

ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಸಾರ್ವಜನಿಕರಲ್ಲಿ ಅಪನಂಬಿಕೆ ಮೂಡಿಸುವ ರೀತಿಯಲ್ಲಿ ಹೇಳಿಕೆ ನೀಡುವುದು ಸರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರದಲ್ಲಿರುವಾಗಲೇ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ಚುನಾವಣೆ ಗೆದ್ದು ಅಧಿಕಾರಕ್ಕೆ ಬಂದಿವೆ. ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಆದರೆ ಸೋಲಿನ ನಂತರ ಸಾಂವಿಧಾನಿಕ ಸಂಸ್ಥೆಗಳ ಮೇಲೆಯೇ ಆರೋಪ ಮಾಡುವುದು ಪ್ರಜಾಪ್ರಭುತ್ವಕ್ಕೆ ಸೂಕ್ತವಲ್ಲ ಎಂದು ಹೇಳಿದರು.

ಕುಮಾರಸ್ವಾಮಿ ಅವರ ಪುತ್ರ ಹಾಗೂ ಬಸವರಾಜ ಬೊಮ್ಮಾಯಿ ಅವರ ಪುತ್ರ ಚುನಾವಣೆಯಲ್ಲಿ ಸೋತಾಗ ಇದೇ ರೀತಿಯ ಪ್ರಶ್ನೆಗಳನ್ನು ಏಕೆ ಎತ್ತಲಿಲ್ಲ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ನಾಯಕರು ಚುನಾವಣಾ ವ್ಯವಸ್ಥೆಯ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಪ್ರಯತ್ನ ಮಾಡಬಾರದು ಎಂದರು.

“ಕಾಂಗ್ರೆಸ್ ನಾಯಕರು ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಸಾಂವಿಧಾನಿಕ ಸಂಸ್ಥೆಗಳಿಗೆ ಕಪ್ಪುಚುಕ್ಕೆ ತರುವಂತಹ ಹೇಳಿಕೆಗಳನ್ನು ನೀಡಬಾರದು. ಅಪಪ್ರಚಾರದ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂಬ ಭಾವನೆ ಇದ್ದರೆ ಅದು ವಾಸ್ತವಕ್ಕೆ ದೂರವಾದದ್ದು” ಎಂದು ವಿಜಯೇಂದ್ರ ಹೇಳಿದರು.

ಅಕ್ಟೋಬರ್ 1ರಿಂದ ‘ಸೇವಾ ಸಂಕಲ್ಪ’ ಕಾರ್ಯಕ್ರಮ

ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ‘ಸೇವಾ ಸಂಕಲ್ಪ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅಕ್ಟೋಬರ್ 1ರಿಂದ ತಾವು ಕೂಡ ರಾಜ್ಯದ ವಿವಿಧ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾಗಿ ವಿಜಯೇಂದ್ರ ತಿಳಿಸಿದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸುವುದು ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕೆಲಸ ಮಾಡಲಾಗುವುದು ಎಂದರು.

ಶಿಕಾರಿಪುರಕ್ಕೆ ಬಿ.ಕೆ. ಹರಿಪ್ರಸಾದ್ ಬರಲಿ: ಸ್ವಾಗತ

ಶಿಕಾರಿಪುರದಿಂದ ಕಾಂಗ್ರೆಸ್ ಪಾದಯಾತ್ರೆ ನಡೆಸುವುದಾಗಿ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, “ಅವರು ನಮ್ಮ ಬಳ್ಳಾರಿ ಚಲೋ ಪಾದಯಾತ್ರೆಯಿಂದ ಪ್ರೇರಣೆ ಪಡೆದಿರಬಹುದು. ನಮ್ಮ ಪಾದಯಾತ್ರೆ ರಾಜ್ಯ ಸರ್ಕಾರದ ಸೊಕ್ಕನ್ನು ಅಡಗಿಸುವಲ್ಲಿ ಕಾರಣವಾಗಿದೆ. ಅವರು ಪಾದಯಾತ್ರೆ ಮಾಡುವುದಾದರೆ ಸ್ವಾಗತ” ಎಂದರು.

“ಶಿಕಾರಿಪುರ ನನ್ನ ರಾಜಕೀಯ ಬದುಕಿಗೆ ಜನ್ಮ ನೀಡಿದ ನೆಲ. ಯಡಿಯೂರಪ್ಪ ಅವರ ಹೋರಾಟದ ಪರಂಪರೆಯನ್ನು ಹೊಂದಿರುವ ಈ ನೆಲಕ್ಕೆ ಬಂದು ಪಾದಯಾತ್ರೆ ಮಾಡುವುದಾದರೆ ಬರಲಿ. ಶಿಕಾರಿಪುರದ ಅಭಿವೃದ್ಧಿಯನ್ನು ನೋಡಿ ಹೋಗಲಿ. ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ನಾಯಕರ ಸ್ವಕ್ಷೇತ್ರಗಳ ಅಭಿವೃದ್ಧಿಯನ್ನೂ ಶಿಕಾರಿಪುರದ ಅಭಿವೃದ್ಧಿಯೊಂದಿಗೆ ಹೋಲಿಕೆ ಮಾಡಿಕೊಳ್ಳಲಿ” ಎಂದು ಹೇಳಿದರು.

ಶಿಕಾರಿಪುರವನ್ನು ಗೆಲ್ಲಬೇಕು ಎಂಬ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಯನ್ನು ತಾವು ಸವಾಲಾಗಿ ಸ್ವೀಕರಿಸುವುದಾಗಿ ತಿಳಿಸಿದ ವಿಜಯೇಂದ್ರ, “ಅವರು ಶಿಕಾರಿಪುರಕ್ಕೆ ಬರಲಿ, ಪಾದಯಾತ್ರೆ ಮಾಡಲಿ. ಸರ್ಕಾರಕ್ಕೆ ಬರುವ ಮೊದಲು ಕಾಂಗ್ರೆಸ್ ನೀಡಿದ್ದ ಭರವಸೆಗಳನ್ನು ಜನರಿಗೆ ನೆನಪಿಸಿ, ಜನರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಿ ಹೋಗಲಿ” ಎಂದರು.

ಸರ್ವಪಕ್ಷ ನಿಯೋಗಕ್ಕೂ ಮುನ್ನ ರೈತರ ಬೇಡಿಕೆ ಈಡೇರಿಸಿ

ಕೇಂದ್ರ ಸರ್ಕಾರದ ಬಳಿ ನಿಯೋಗ ಕರೆದೊಯ್ಯುವ ಮೊದಲು ರಾಜ್ಯ ಸರ್ಕಾರ ರೈತರ ಪರವಾಗಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ವಿಜಯೇಂದ್ರ ಹೇಳಿದರು.

“ವಿಪಕ್ಷಗಳು ಒಕ್ಕೊರಲಿನಿಂದ ಆಗ್ರಹಿಸಿರುವಂತೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ. ರೈತರ ಸಾಲ ಮನ್ನಾ ಮಾಡಿ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಪರಿಹಾರ ನೀಡಲು ಸಾಧ್ಯವಿಲ್ಲ ಎಂದಾದರೂ ಅದನ್ನು ಬಹಿರಂಗವಾಗಿ ಒಪ್ಪಿಕೊಳ್ಳಿ. ವಿಶೇಷ ಅಧಿವೇಶನ ಕರೆದು ಕೇವಲ ಕೇಂದ್ರದ ಮೇಲೆ ಆರೋಪ ಮಾಡುವುದರಿಂದ ರೈತರ ಸಮಸ್ಯೆ ಪರಿಹಾರವಾಗುವುದಿಲ್ಲ” ಎಂದು ಹೇಳಿದರು.

ರೈತರಿಗೆ ಪ್ರತಿದಿನ ಕನಿಷ್ಠ ಐದು ಗಂಟೆ ತ್ರೀ-ಫೇಸ್ ವಿದ್ಯುತ್ ಒದಗಿಸಬೇಕು. ಅಗತ್ಯವಿದ್ದರೆ ಹೊರರಾಜ್ಯಗಳಿಂದ ವಿದ್ಯುತ್ ಖರೀದಿಸಬೇಕು. ಕೇಂದ್ರ ಸಚಿವರೂ ಬರ ಪರಿಸ್ಥಿತಿಯ ಅಧ್ಯಯನಕ್ಕೆ ಬರುವುದಾಗಿ ಹೇಳಿದ್ದಾರೆ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳದೆ ಮೊದಲು ರೈತರ ನೆರವಿಗೆ ನಿಲ್ಲಬೇಕು ಎಂದರು.

ಆರ್‌ಎಸ್‌ಎಸ್‌, ಬಿಜೆಪಿಯನ್ನು ಓಡಿಸುವ ಹೇಳಿಕೆಗೆ ತಿರುಗೇಟು

ಬೆಂಗಳೂರಿನಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅನ್ನು ಓಡಿಸಬೇಕು ಎಂಬ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, “ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅನ್ನು ಓಡಿಸುವ ಬಗ್ಗೆ ಮಾತನಾಡುವ ಮೊದಲು ಕಾಂಗ್ರೆಸ್ ನಾಯಕರನ್ನು ಜನರು ಎಷ್ಟು ಬಾರಿ ಚುನಾವಣೆಯಲ್ಲಿ ತಿರಸ್ಕರಿಸಿದ್ದಾರೆ ಎಂಬುದನ್ನು ಅವರು ನೆನಪಿಸಿಕೊಳ್ಳಲಿ” ಎಂದರು.

ಕಾಂಟ್ರಾಕ್ಟರ್‌ಗಳ ಪತ್ರದ ವಿಚಾರದಲ್ಲಿ ಸರ್ಕಾರ ಸ್ಪಷ್ಟನೆ ನೀಡಲಿ

ಕಾಂಟ್ರಾಕ್ಟರ್‌ಗಳು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ವಿಚಾರದಲ್ಲಿ ಮಾತನಾಡಿದ ವಿಜಯೇಂದ್ರ, ಸರ್ಕಾರ ಬಿಜೆಪಿ ಮೇಲೆ ಆರೋಪ ಮಾಡುವ ಬದಲು ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಮೇಲೆ ಎಷ್ಟು ಸಾಲದ ಹೊರೆ ಹೆಚ್ಚಾಗಿದೆ ಎಂಬುದನ್ನು ಜನರ ಮುಂದೆ ಇಡಬೇಕು ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಾಲದ ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರದ ಹಣಕಾಸು ನಿರ್ವಹಣೆ ಹಾಗೂ ವಿವಿಧ ಯೋಜನೆಗಳಿಗೆ ಹಣ ಹಂಚಿಕೆ ಕುರಿತು ಸಮಗ್ರ ಶ್ವೇತಪತ್ರ ಹೊರಡಿಸುವ ಅಗತ್ಯವಿದೆ ಎಂದರು.

“ರಾಜ್ಯದ ಹಣಕಾಸು ಪರಿಸ್ಥಿತಿ, ಸಾಲದ ಪ್ರಮಾಣ, ಗ್ಯಾರಂಟಿಗಳಿಗೆ ಮಾಡಿರುವ ವೆಚ್ಚ ಹಾಗೂ ಇತರ ಕಾರ್ಯಕ್ರಮಗಳಿಗೆ ಮಾಡಿರುವ ವೆಚ್ಚದ ಸಂಪೂರ್ಣ ಲೆಕ್ಕವನ್ನು ಜನರ ಮುಂದಿಡಿ. ಜನರ ತೆರಿಗೆ ಹಣವನ್ನು ರಾಜಕೀಯ ಉದ್ದೇಶಗಳಿಗೆ ಬಳಸುವುದನ್ನು ನಿಲ್ಲಿಸಿ” ಎಂದು ವಿಜಯೇಂದ್ರ ಆಗ್ರಹಿಸಿದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ತಪ್ಪು ಮಾಹಿತಿ ನೀಡಿದರೆ FIR: SIR ಪ್ರಕ್ರಿಯೆ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ ಕುರಿತು ಆಯುಕ್ತ ಜಗದೀಶ್.ಜಿ ಎಚ್ಚರಿಕೆ

September 29, 2026

ಅಭಿಜಿತ್ ದೀಪ್ಕೆಯ ಹಿಂಬಾಲಕರಾಗಿದ್ದಾರೆ ರಾಹುಲ್ ಗಾಂಧಿ: ಛಲವಾದಿ ನಾರಾಯಣಸ್ವಾಮಿ ಆರೋಪ

September 29, 2026

ಬರ ಪರಿಹಾರ ನೀಡದೆ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ವಿಜಯೇಂದ್ರ

September 29, 2026

ವಿಶ್ವ ಹೃದಯ ದಿನ 2026: ಹೃದಯದ ಆರೋಗ್ಯ ಕಾಪಾಡಲು ದಿನನಿತ್ಯದ ಸಣ್ಣ ಬದಲಾವಣೆಗಳು ಮುಖ್ಯ

September 29, 2026

Recent News

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ವಿವಿಧ ಬೇಡಿಕೆಗಳ ಕುರಿತು ಮನವಿ

September 28, 2026

ಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ: ಬರ ಪರಿಹಾರ, ಕಸ್ತೂರಿರಂಗನ್ ವರದಿ ಸೇರಿ 4 ಪ್ರಮುಖ ವಿಚಾರಗಳ ಚರ್ಚೆ

September 28, 2026

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಆಹ್ವಾನ

September 28, 2026

ಎಫ್‌ಕೆಸಿಸಿಐ 2026-27ರ ಅಧಿಕಾರಿಗಳ ಆಯ್ಕೆ: ಟಿ. ಸಾಯಿರಾಮ್ ಪ್ರಸಾದ್ ಅಧ್ಯಕ್ಷರು

September 28, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.