Wednesday, September 30, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ತಪ್ಪು ಮಾಹಿತಿ ನೀಡಿದರೆ FIR: SIR ಪ್ರಕ್ರಿಯೆ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ ಕುರಿತು ಆಯುಕ್ತ ಜಗದೀಶ್.ಜಿ ಎಚ್ಚರಿಕೆ

PREM SHEKHAR PV by PREM SHEKHAR PV
5 hours ago
Reading Time: 1 min read
A A
100
VIEWS


ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರು ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ (ಕೇಂದ್ರ) ಶ್ರೀ ಜಗದೀಶ್.ಜಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರ (BTC) ಚುನಾವಣಾ ಸಿದ್ಧತೆ ಕುರಿತು ಇಂದು ಚುನಾವಣಾ ಅಧಿಕಾರಿಗಳು ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಶ್ರೀ ಜಗದೀಶ್.ಜಿ, SIR ಪ್ರಕ್ರಿಯೆಯಲ್ಲಿ ಬ್ಲಾಕ್ ಲೆವೆಲ್ ಆಫೀಸರ್ (BLO) ಅಥವಾ ಯಾವುದೇ ಸಂಬಂಧಪಟ್ಟ ಸಿಬ್ಬಂದಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸಿದರೆ ಅಥವಾ ತಪ್ಪು ಮಾರ್ಗದರ್ಶನ ನೀಡಿದರೆ, ನಿಯಮ ಉಲ್ಲಂಘನೆಗೆ ಅನುಗುಣವಾಗಿ ಶಿಸ್ತು ಕ್ರಮ ಕೈಗೊಳ್ಳುವುದರ ಜೊತೆಗೆ ಅಗತ್ಯ ಪ್ರಕರಣಗಳಲ್ಲಿ FIR ದಾಖಲಿಸುವಂತಹ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

“ಸಾರ್ವಜನಿಕರಿಗೆ ಯಾವುದೇ ಗೊಂದಲ ಉಂಟಾಗದಂತೆ ಅಧಿಕೃತ ಹಾಗೂ ಪರಿಶೀಲಿತ ಮಾಹಿತಿಯನ್ನು ಮಾತ್ರ ನೀಡಬೇಕು. 18 ವರ್ಷ ಅಥವಾ ಮೇಲ್ಪಟ್ಟ ಭಾರತೀಯ ನಾಗರಿಕರಾಗಿದ್ದು, ಚುನಾವಣಾ ಆಯೋಗ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳನ್ನು ಪೂರೈಸುವವರಿಗೆ ನೋಂದಣಿ ಪ್ರಕ್ರಿಯೆಯಲ್ಲಿ ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ಒದಗಿಸಬೇಕು” ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚು ಅಗತ್ಯವಿರುವ ಪ್ರದೇಶಗಳನ್ನು ಗುರುತಿಸಿ ಅಲ್ಲಿ ವಿಶೇಷ ಜಾಗೃತಿ ಅಭಿಯಾನ ನಡೆಸುವಂತೆಯೂ ನಿರ್ದೇಶನ ನೀಡಲಾಯಿತು. ಸ್ಥಳೀಯ ಮಟ್ಟದಲ್ಲಿ SIR ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಮತ್ತು ಮತದಾರರ ಪಟ್ಟಿ ಕುರಿತು ಸರಿಯಾದ ಮಾಹಿತಿ ತಲುಪಿಸಿ ಅರ್ಹ ನಾಗರಿಕರಿಗೆ ಸಹಕಾರ ನೀಡಬೇಕು ಎಂದು ತಿಳಿಸಲಾಯಿತು.

ಮತದಾರರ ಪಟ್ಟಿ ನಿಖರವಾಗಿರಬೇಕು, ಅರ್ಹರ ಹೆಸರುಗಳು ಸೇರ್ಪಡೆಯಾಗಬೇಕು ಮತ್ತು ಯಾವುದೇ ಅರ್ಹ ಮತದಾರರು ಹೊರಗುಳಿಯಬಾರದು ಎಂಬುದು ಈ ಪ್ರಕ್ರಿಯೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ ಆಯುಕ್ತರು, ಸಾರ್ವಜನಿಕರು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂದು ಪರಿಶೀಲಿಸಿ, ಅಗತ್ಯವಿದ್ದಲ್ಲಿ ನಮೂನೆ-6 ಸೇರಿದಂತೆ ಅರ್ಜಿಗಳನ್ನು ಸಲ್ಲಿಸಿ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣಾ ವೇಳಾಪಟ್ಟಿ

ಸಭೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿವರ ನೀಡಲಾಯಿತು. ವೇಳಾಪಟ್ಟಿ ಹೀಗಿದೆ:

  • ಅಧಿಸೂಚನೆ: ಸೆಪ್ಟೆಂಬರ್ 29, 2026 (ಮಂಗಳವಾರ)
  • ನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕ: ಅಕ್ಟೋಬರ್ 6, 2026 (ಮಂಗಳವಾರ)
  • ನಾಮಪತ್ರಗಳ ಪರಿಶೀಲನೆ: ಅಕ್ಟೋಬರ್ 7, 2026 (ಬುಧವಾರ)
  • ಹಿಂಪಡೆಯುವಿಕೆ ಕೊನೆಯ ದಿನಾಂಕ: ಅಕ್ಟೋಬರ್ 9, 2026 (ಶುಕ್ರವಾರ)
  • ಮತದಾನ: ಅಕ್ಟೋಬರ್ 23, 2026 (ಶುಕ್ರವಾರ) – ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ
  • ಮತ ಎಣಿಕೆ: ಅಕ್ಟೋಬರ್ 27, 2026 (ಮಂಗಳವಾರ)
  • ಪ್ರಕ್ರಿಯೆ ಪೂರ್ಣಗೊಳ್ಳುವ ದಿನಾಂಕ: ಅಕ್ಟೋಬರ್ 31, 2026 (ಶನಿವಾರ)

ಬೆಂಗಳೂರು ಕೇಂದ್ರ ವ್ಯಾಪ್ತಿಯ ಮತಗಟ್ಟೆಗಳ ಪಟ್ಟಿಯನ್ನು ಪಕ್ಷಗಳ ಪ್ರತಿನಿಧಿಗಳಿಗೆ ಒದಗಿಸಲಾಗಿದೆ. ಅಲ್ಲದೆ, ಅರ್ಹ ಶಿಕ್ಷಕರಿಂದ ನಮೂನೆ-19 ಅರ್ಜಿಗಳನ್ನು ಸ್ವೀಕರಿಸಲು ಕೇಂದ್ರ ವ್ಯಾಪ್ತಿಯ 7 ವಿಧಾನಸಭಾ ಕ್ಷೇತ್ರಗಳ ಎಲ್ಲಾ ERO ಕಛೇರಿಗಳಲ್ಲಿ ವಿಶೇಷ ಕೌಂಟರ್‌ಗಳನ್ನು ತೆರೆಯಲು ಸೂಚಿಸಲಾಗಿದೆ. ಪ್ರತಿ ಕೌಂಟರ್‌ನಲ್ಲಿ ಜವಾಬ್ದಾರಿ ಅಧಿಕಾರಿ/ಸಿಬ್ಬಂದಿಯ ಹೆಸರು ಮತ್ತು ಹುದ್ದೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರದರ್ಶಿಸಬೇಕು ಮತ್ತು ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಅರ್ಜಿಗಳನ್ನು ಪ್ರಕ್ರಿಯೆಗೊಳಿಸಬೇಕು ಎಂದು ತಿಳಿಸಲಾಯಿತು.

ಸಭೆಯಲ್ಲಿ ಜಂಟಿ ಆಯುಕ್ತರು ಶ್ರೀ ರಂಗನಾಥ್.ಕೆ ಮತ್ತು ಶ್ರೀ ಹೇಮಂತ್ ಶರಣ್, ಚುನಾವಣಾ ವಿಭಾಗದ ತಹಶೀಲ್ದಾರ್, 7 ವಿಧಾನಸಭಾ ಕ್ಷೇತ್ರಗಳ ERO ಹಾಗೂ AEROಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Tags: Aeroamironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ತಪ್ಪು ಮಾಹಿತಿ ನೀಡಿದರೆ FIR: SIR ಪ್ರಕ್ರಿಯೆ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ ಕುರಿತು ಆಯುಕ್ತ ಜಗದೀಶ್.ಜಿ ಎಚ್ಚರಿಕೆ

September 29, 2026

ಅಭಿಜಿತ್ ದೀಪ್ಕೆಯ ಹಿಂಬಾಲಕರಾಗಿದ್ದಾರೆ ರಾಹುಲ್ ಗಾಂಧಿ: ಛಲವಾದಿ ನಾರಾಯಣಸ್ವಾಮಿ ಆರೋಪ

September 29, 2026

ಬರ ಪರಿಹಾರ ನೀಡದೆ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ವಿಜಯೇಂದ್ರ

September 29, 2026

ವಿಶ್ವ ಹೃದಯ ದಿನ 2026: ಹೃದಯದ ಆರೋಗ್ಯ ಕಾಪಾಡಲು ದಿನನಿತ್ಯದ ಸಣ್ಣ ಬದಲಾವಣೆಗಳು ಮುಖ್ಯ

September 29, 2026

Recent News

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ವಿವಿಧ ಬೇಡಿಕೆಗಳ ಕುರಿತು ಮನವಿ

September 28, 2026

ಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ: ಬರ ಪರಿಹಾರ, ಕಸ್ತೂರಿರಂಗನ್ ವರದಿ ಸೇರಿ 4 ಪ್ರಮುಖ ವಿಚಾರಗಳ ಚರ್ಚೆ

September 28, 2026

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಆಹ್ವಾನ

September 28, 2026

ಎಫ್‌ಕೆಸಿಸಿಐ 2026-27ರ ಅಧಿಕಾರಿಗಳ ಆಯ್ಕೆ: ಟಿ. ಸಾಯಿರಾಮ್ ಪ್ರಸಾದ್ ಅಧ್ಯಕ್ಷರು

September 28, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.