Monday, November 23, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

PREM SHEKHAR PV by PREM SHEKHAR PV
2 months ago
Reading Time: 1 min read
A A
100
VIEWS

ಶಿಕಾರಿಪುರ: ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿಕಾರಿ ಆಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ ತೆಗೆದುಕೊಳ್ಳಲಿದ್ದಾರೆ. ಮುಂದೆ ಕಾಂಗ್ರೆಸ್ ಪಕ್ಷದಿಂದ ಇಲ್ಲಿ ಯಾರು ಜನಪ್ರತಿನಿಧಿಯಾಗುತ್ತಾರೋ ಅವರು ಕೇವಲ ನಾಯಕರಾಗಿರದೆ, ಜನರ ಸೇವಕರಾಗಿ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.

ಕೆಪಿಸಿಸಿ ಆಯೋಜಿಸಿದ್ದ ‘ಭಾರತ್ ಜೋಡೋ ಯಾತ್ರೆ-2.0’ ಸಮಾವೇಶದಲ್ಲಿ ಮಾತನಾಡಿದ ಸಚಿವರು, ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಪಾದಯಾತ್ರೆ ಕರ್ನಾಟಕಕ್ಕೆ ಕಾಲಿಟ್ಟು ನಾಲ್ಕು ವರ್ಷಗಳಾದ ನೆನಪಿನಲ್ಲಿ ಈ ಕಾರ್ಯಕ್ರಮ ನಡೆದಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವೇ ಬಂದೂಕಿನಂತೆ ಕೆಲಸ ಮಾಡಿದರೆ, ಜನರು ಗುಂಡಿನಂತೆ ಮತದಾನ ಮಾಡಿ ಶಿಕಾರಿಪುರದಲ್ಲಿ ಬದಲಾವಣೆ ತರಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕೇವಲ ಐದು ದಿನಗಳಲ್ಲಿ ಭಾರತ್ ಜೋಡೋ 2.0 ಪಾದಯಾತ್ರೆಯನ್ನು ಆಯೋಜಿಸಲಾಗಿದ್ದು, ನಿರೀಕ್ಷೆಗೂ ಮೀರಿ ಜನರು ಭಾಗವಹಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಸಂಘಟನಾ ಶಕ್ತಿ ಹಾಗೂ ಜನರ ಬೆಂಬಲವನ್ನು ತೋರಿಸುತ್ತದೆ. ರಾಹುಲ್ ಗಾಂಧಿ ಅವರು ಹಾಕಿಕೊಟ್ಟ ಮಾರ್ಗದರ್ಶನವನ್ನು ಇಂದು ನಾವೆಲ್ಲರೂ ಎತ್ತಿಹಿಡಿದಿದ್ದೇವೆ ಎಂದರು.

ರಾಹುಲ್ ಗಾಂಧಿ ಅವರ ತ್ಯಾಗ ಸ್ಮರಣೀಯ

ದೇಶವನ್ನು ಒಗ್ಗೂಡಿಸಿ, ಜನರನ್ನು ಒಂದುಗೂಡಿಸಿಕೊಂಡು ಸಾಗಬೇಕು ಎಂಬ ಉದ್ದೇಶದಿಂದ ರಾಹುಲ್ ಗಾಂಧಿ ಅವರು 2022ರಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಪಾದಯಾತ್ರೆ ನಡೆಸಿದ್ದರು. ಆ ಯಾತ್ರೆ ಕರ್ನಾಟಕಕ್ಕೆ ಆಗಮಿಸಿ ನಾಲ್ಕು ವರ್ಷಗಳು ಕಳೆದಿವೆ. ದೇಶಕ್ಕಾಗಿ ತಮ್ಮ ಕುಟುಂಬದ ಸದಸ್ಯರನ್ನು ಕಳೆದುಕೊಂಡಿದ್ದರೂ ರಾಹುಲ್ ಗಾಂಧಿ ಅವರು ಜನರೊಂದಿಗೆ ಬೆರೆಯುವ ಉದ್ದೇಶದಿಂದ ಐತಿಹಾಸಿಕ ಪಾದಯಾತ್ರೆ ನಡೆಸಿದರು ಎಂದು ಮಧು ಬಂಗಾರಪ್ಪ ಸ್ಮರಿಸಿದರು.

ಒಡೆದು ಆಳುವ ರಾಜಕಾರಣಕ್ಕೆ ಉತ್ತರ

ಶಿಕಾರಿಪುರದಲ್ಲಿ ಕೆಲವರು ಒಡೆದು ಆಳುವ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಉತ್ತರವಾಗಿ ಕಾಂಗ್ರೆಸ್ ಪಕ್ಷ ಒಂದಾಗಿ ನಿಲ್ಲುತ್ತದೆ ಎಂಬ ಸಂದೇಶವನ್ನು ಭಾರತ್ ಜೋಡೋ 2.0 ಪಾದಯಾತ್ರೆ ನೀಡಿದೆ. ಇದು ಕೇವಲ ಪಾದಯಾತ್ರೆಯಲ್ಲ; ಇದರ ಸಂದೇಶ ಪ್ರತಿಯೊಂದು ಮನೆಗೂ ತಲುಪಬೇಕು ಎಂದರು.

ಭೂಮಿ ಹಕ್ಕು, ಉಚಿತ ಪಂಪ್‌ಸೆಟ್ ನೆನಪಿಸಿದ ಮಧು

ಶಿಕಾರಿಪುರದ ಜನರಿಗೆ ಭೂಮಿ ಹಕ್ಕು ನೀಡಿದವರು ಯಾರು ಎಂಬುದನ್ನು ಜನರು ನೆನಪಿಸಿಕೊಳ್ಳಬೇಕು. ದೇವರಾಜ ಅರಸು ಅವರು ಭೂಮಿ ಹಕ್ಕು ನೀಡಿದರು. ತಮ್ಮ ತಂದೆ ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರಿಗೆ ಉಚಿತ ಪಂಪ್‌ಸೆಟ್ ನೀಡುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದರು. 1990ರಲ್ಲಿ ದೇಶದ ಬೇರೆಡೆ ಉಚಿತ ಪಂಪ್‌ಸೆಟ್ ನೀಡದ ಸಂದರ್ಭದಲ್ಲಿ ಕರ್ನಾಟಕದ ರೈತರಿಗೆ ಈ ಸೌಲಭ್ಯ ಕಲ್ಪಿಸಲಾಗಿತ್ತು ಎಂದು ಅವರು ನೆನಪಿಸಿದರು.

ಶಿಕಾರಿಪುರದ ಜನರಿಗೆ ಸಂಪೂರ್ಣವಾಗಿ ಭೂಮಿ ಹಕ್ಕು ದೊರೆತಿಲ್ಲ. ಈ ವಿಚಾರದಲ್ಲಿ ಜನರಿಗೆ ಅನ್ಯಾಯವಾಗಿದೆ. ಭೂಮಿ ಹಕ್ಕಿನ ಸಮಸ್ಯೆಗೆ ಪರಿಹಾರ ಕಲ್ಪಿಸುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.

‘ಸೊರಬಕ್ಕೆ ಬಂದು ತೋರಿಸುತ್ತೇವೆ ಎಂದು ನೀವು ಹೇಳಿದ್ರೆ, ನಾವು ಶಿಕಾರಿಪುರಕ್ಕೆ ಬಂದು ತೋರಿಸುತ್ತೇವೆ’

ಪಕ್ಷದ ಸಂಘಟನೆಯನ್ನು ಒಡೆಯಬೇಡಿ. ಯಾರೋ ಸೊರಬಕ್ಕೆ ಬಂದು ತೋರಿಸುತ್ತೇವೆ ಎಂದಿದ್ದಾರೆ. ನಾವು ಕೂಡ ಶಿಕಾರಿಪುರಕ್ಕೆ ಬಂದು ತೋರಿಸುತ್ತೇವೆ. ಆದರೆ ಬೇರೆಯವರ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡುವುದು ನಮ್ಮ ಉದ್ದೇಶವಲ್ಲ ಎಂದು ಅವರು ಹೇಳಿದರು.

ವಿಜಯೇಂದ್ರ ಅವರು ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ನಡೆಸಿದ್ದರು. ಅವರ ತಂದೆ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ನಡೆದ ಬೆಳವಣಿಗೆಗಳನ್ನು ಜನರು ಮರೆತಿಲ್ಲ. ಈ ಹಿನ್ನೆಲೆಯಲ್ಲಿ ಜನರು ತಮ್ಮ ಪ್ರತಿನಿಧಿಗಳ ಬಗ್ಗೆ ತೀರ್ಮಾನಿಸುವ ಸಮಯ ಬಂದಿದೆ ಎಂದು ಅವರು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ಜನರಿಗೆ ನೆರವು

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವವರು ತಮ್ಮ ಮನೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನೇ ಕೇಳಿ ನೋಡಲಿ. ಗ್ಯಾರಂಟಿ ಯೋಜನೆಗಳು ಅವರ ಬದುಕಿಗೆ ಎಷ್ಟು ಸಹಕಾರಿಯಾಗಿವೆ ಎಂಬುದು ತಿಳಿಯುತ್ತದೆ. ಇದು ಕಾಂಗ್ರೆಸ್ ಪಕ್ಷದ ಶಕ್ತಿ ಎಂದು ಮಧು ಬಂಗಾರಪ್ಪ ಹೇಳಿದರು.

ಈ ಸಮಾವೇಶಕ್ಕೂ ಮೊದಲು ನಡೆದ ಪಾದಯಾತ್ರೆಯಲ್ಲಿಯೂ ಸಚಿವ ಮಧು ಬಂಗಾರಪ್ಪ ಭಾಗವಹಿಸಿದ್ದರು. ವೇದಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಕರ್ನಾಟಕ ರಾಜ್ಯ ಉಸ್ತುವಾರಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಬಸವಂತಪ್ಪ, ರುದ್ರಪ್ಪ ಲಮಾಣಿ, ಹಿರಿಯ ನಾಯಕ ವಿ.ಎಸ್. ಉಗ್ರಪ್ಪ, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಸಿ. ಯೋಗೇಶ್, ಮಾಜಿ ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ರಾಜ್ಯದಲ್ಲಿ ಉದ್ಯೋಗಾವಕಾಶಗಳ ಕೊರತೆಯಿಲ್ಲ, ನುರಿತ ಸಿಬ್ಬಂದಿಯ ಅಭಾವವಿದೆ: ದಿನೇಶ್ ಗುಂಡೂರಾವ್

November 22, 2026

ರೈತರ ಬರ ಪರಿಹಾರವನ್ನು ₹5 ಸಾವಿರದಿಂದ ₹10 ಸಾವಿರಕ್ಕೆ ಹೆಚ್ಚಿಸಿ: ಆರ್. ಅಶೋಕ್ ಆಗ್ರಹ

November 22, 2026

ಭಾರತ್‌ ಜೋಡೋ ಯೋಜನೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮಾತ್ರ; ಬೇರೆ ಪಕ್ಷಗಳ ಸದಸ್ಯರನ್ನು ಸೇರಿಸದಂತೆ ಸೂಚನೆ: ಪ್ರತಿಪಕ್ಷ ನಾಯಕ ಆರ್‌. ಅಶೋಕ

November 21, 2026

ವಿದ್ಯಾರ್ಥಿಗಳಲ್ಲಿ ಕನ್ನಡದ ಮನಸು ಕಟ್ಟಬೇಕು: ಮೋಹನ್ ಆಳ್ವ

November 21, 2026

Recent News

ಸರ್ಕಾರಿ ಯೋಜನೆಗಳಲ್ಲಿ ವಿಳಂಬ ಸಹಿಸುವುದಿಲ್ಲ: ಡಿಸಿಎಂ ಡಾ. ಜಿ.ಪರಮೇಶ್ವರ

November 20, 2026

ಗ್ರಾಮೀಣ ರಸ್ತೆಗಳಿಗೆ ₹16,000 ಕೋಟಿ ಬಂಪರ್‌: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ನಿಂದ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಚಾಲನೆ

November 20, 2026

ಇಂದಿರಾಗಾಂಧಿ ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ: ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಡಾ. ಜಿ. ಪರಮೇಶ್ವರ

November 19, 2026

ಕುಮಾರಕೃಪಾ ಬಂಗಲೆ ನವೀಕರಣಕ್ಕೆ ಆಸಕ್ತಿ, ಜನರಿಗೆ ಮಾತ್ರ ಕೊಳಚೆ ರಸ್ತೆಗಳು: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

November 19, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.