Thursday, October 8, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಭೀಕರ ಬರ; ರೈತರಿಗೆ ಅಗತ್ಯ ನೆರವು ಕಲ್ಪಿಸುವುದೇ ಸರ್ಕಾರದ ಮೊದಲ ಆದ್ಯತೆ: ಡಿಸಿಎಂ ಜಿ. ಪರಮೇಶ್ವರ

Ranjitha by Ranjitha
12 hours ago
Reading Time: 2 mins read
A A
100
VIEWS

ಬಳ್ಳಾರಿ: ಲಭ್ಯವಿರುವ ಅಂಕಿಅಂಶಗಳ ಪ್ರಕಾರ ಸುಮಾರು 75 ವರ್ಷಗಳ ಬಳಿಕ ಕರ್ನಾಟಕ ಇಂತಹ ಭೀಕರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯದಲ್ಲಿ ಶೇ.90ರಷ್ಟು ಬೆಳೆ ಹಾನಿಯಾಗಿದೆ. ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರನ್ನು ಉಳಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಅವರ ನೆರವಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಹೇಳಿದರು.

ಬಳ್ಳಾರಿ ತಾಲೂಕಿನ ಬರಪೀಡಿತ ಹಲಕುಂದಿ ಮತ್ತು ಬಿ.ಬೆಳಗಲ್ ಗ್ರಾಮಗಳಲ್ಲಿ ತೊಗರಿ, ಜೋಳ ಬಿತ್ತನೆ ಮಾಡಿರುವ ಜಮೀನಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಜ್ಯದ ಸುಮಾರು 240 ತಾಲೂಕುಗಳ ಪೈಕಿ ಕರಾವಳಿ ಭಾಗದ ಕೆಲವೇ ತಾಲೂಕುಗಳನ್ನು ಹೊರತುಪಡಿಸಿ ಬಹುತೇಕ ಎಲ್ಲ ತಾಲೂಕುಗಳಲ್ಲಿಯೂ ಬರದ ಪರಿಣಾಮ ಗೋಚರಿಸುತ್ತಿದೆ. ಈಗಾಗಲೇ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇನ್ನೂ 23 ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ನಡೆಯುತ್ತಿದೆ. ಅವುಗಳಲ್ಲಿ ಸುಮಾರು 10ರಿಂದ 15 ತಾಲೂಕುಗಳು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ರಾಜ್ಯದ ರೈತರು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಹಲವೆಡೆ ರೈತರು ಮೊದಲು ತೊಗರಿ ಬಿತ್ತಿದ್ದು, ಅದು ಮಳೆಯ ಕೊರತೆಯಿಂದ ಹಾನಿಗೊಳಗಾದ ಬಳಿಕ ಸ್ವಲ್ಪ ಮಳೆ ಬಂದಾಗ ಮತ್ತೆ ಜೋಳ ಸೇರಿದಂತೆ ಪರ್ಯಾಯ ಬೆಳೆ ಬಿತ್ತಿದ್ದಾರೆ. ಆದರೆ ಆ ಬೆಳೆಯೂ ಉಳಿದಿಲ್ಲ. ಪರಿಣಾಮ ರೈತನ ಕೈಗೆ ಯಾವುದೇ ಬೆಳೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಡಿಸಿಎಂ ವಿವರಿಸಿದರು.

ಮಳೆಯಾಶ್ರಿತ ಪ್ರದೇಶಗಳಷ್ಟೇ ಅಲ್ಲದೆ ನೀರಾವರಿ ಪ್ರದೇಶಗಳಲ್ಲಿಯೂ ಸಂಕಷ್ಟವಿದೆ. ಮಹಾರಾಷ್ಟ್ರ ಭಾಗದಲ್ಲಿ ಮಳೆಯಾದ ಪರಿಣಾಮ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಗೆ ಸ್ವಲ್ಪ ನೀರು ಬಂದಿದೆ. ಅದೇ ರೀತಿ ಕೆಆರ್‌ಎಸ್, ಹಾರಂಗಿ ಹಾಗೂ ಕಬಿನಿ ಭಾಗಗಳಲ್ಲಿಯೂ ಒಂದಿಷ್ಟು ಮಳೆಯಾಗಿದೆ. ಲಭ್ಯವಿದ್ದ ನೀರಿನ ಒಂದು ಭಾಗವನ್ನು ತಮಿಳುನಾಡಿಗೆ ಬಿಡಬೇಕಾದ ಪರಿಸ್ಥಿತಿಯೂ ಎದುರಾಗಿದೆ ಎಂದು ಅವರು ಹೇಳಿದರು.

ಬಳ್ಳಾರಿ, ವಿಜಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬರದ ಪರಿಣಾಮ ಹೆಚ್ಚು ತೀವ್ರವಾಗಿದೆ. ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಭೇಟಿ ನೀಡಿದಾಗಲೂ ಈ ಭಾಗದ ಗಂಭೀರ ಪರಿಸ್ಥಿತಿಯನ್ನು ಪರಿಶೀಲಿಸಿದೆ ಎಂದು ಅವರು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಗಂಭೀರ
ಬರದಿಂದ ಬೆಳೆ ಮಾತ್ರವಲ್ಲದೆ ಕುಡಿಯುವ ನೀರಿನ ಸಮಸ್ಯೆಯೂ ತೀವ್ರವಾಗುತ್ತಿದೆ. ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಕುಡಿಯುವ ನೀರು ಸೇರಿದಂತೆ ತುರ್ತು ಬರ ಪರಿಹಾರ ಕಾಮಗಾರಿಗಳಿಗಾಗಿ ಹಣ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಲಭ್ಯವಿರುವ ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಬಳಸಿಕೊಂಡು ರೈತರು ಮತ್ತು ಸಾರ್ವಜನಿಕರ ನೆರವಿಗೆ ಬರಬೇಕೆಂದು ಸೂಚಿಸಲಾಗಿದೆ ಎಂದು ಅವರು ಹೇಳಿದರು.

“ಸರ್ಕಾರ ರೈತರ ಹಾಗೂ ಜನರ ನೆರವಿಗೆ ಬರಬೇಕು. ನಮಗೆ ಎಷ್ಟು ಸಾಧ್ಯವೋ ಅಷ್ಟು ನೆರವು ನೀಡಲು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ” ಎಂದು ಡಿಸಿಎಂ ಹೇಳಿದರು.

ಕೇಂದ್ರದ ಪಾಲು ಇನ್ನೂ ಬಂದಿಲ್ಲ; ಮೊದಲ ಕಂತಿನ ಪರಿಹಾರ ಬಿಡುಗಡೆ
ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಒಂದು ಹೆಕ್ಟೇರ್‌ಗೆ ₹8,500 ಪರಿಹಾರ ನೀಡುವ ವ್ಯವಸ್ಥೆ ಇದೆ. ಆದರೆ ಕೇಂದ್ರದಿಂದ ಇದುವರೆಗೆ ಯಾವುದೇ ಹಣ ಬಿಡುಗಡೆಯಾಗಿಲ್ಲ. ಆದರೂ ಕೇಂದ್ರದ ಹಣಕ್ಕಾಗಿ ಕಾಯದೆ ರಾಜ್ಯ ಸರ್ಕಾರ ತನ್ನ ಪಾಲಿನಿಂದ ರೈತರಿಗೆ ಮೊದಲ ಕಂತಾಗಿ ₹2,500 ನೀಡಲು ಕ್ರಮ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದರು.

ಈ ಕುರಿತು ಸರ್ಕಾರದ ಆದೇಶ ಈಗಾಗಲೇ ಹೊರಬಂದಿದ್ದು, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ತಕ್ಷಣ ಹಣ ಬಿಡುಗಡೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ರೈತರಿಗೆ ಇನ್ನಷ್ಟು ನೆರವು ನೀಡಲಾಗುವುದು ಎಂದರು.

ಕೇಂದ್ರದಿಂದ ಒಂದು ಪೈಸೆಯೂ ಬಂದಿಲ್ಲ ಎಂದು ಅವರನ್ನು ದೂಷಿಸುತ್ತಾ ಕುಳಿತುಕೊಳ್ಳುವುದಿಲ್ಲ. ನಮ್ಮಿಂದ ಸಾಧ್ಯವಾದ ನೆರವನ್ನು ನಾವು ನೀಡುತ್ತೇವೆ. ರೈತನನ್ನು ಸಂಕಷ್ಟದಲ್ಲಿ ಕೈಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ವಿದ್ಯುತ್ ಸಬ್ಸಿಡಿ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನವೂ ರೈತ ಕುಟುಂಬಗಳಿಗೆ ದೊರೆಯುತ್ತಿದೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳಿಂದ ಒಂದು ಕುಟುಂಬಕ್ಕೆ ಕನಿಷ್ಠ ₹60,000ರಿಂದ ₹70,000ವರೆಗೆ ಪ್ರಯೋಜನ ದೊರೆಯುವ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಅದಕ್ಕಿಂತಲೂ ಮುಖ್ಯವಾಗಿ ರೈತನ ಬದುಕು ಉಳಿಯಬೇಕು; ಅದಕ್ಕೆ ಅಗತ್ಯವಿರುವ ನೆರವು ನೀಡಲಾಗುವುದು ಎಂದು ಅವರು ಹೇಳಿದರು.

₹46,000 ಕೋಟಿ ನಷ್ಟ; ಕೇಂದ್ರಕ್ಕೆ ₹11,000–₹11,500 ಕೋಟಿ ನೆರವಿಗೆ ಮನವಿ
ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಎರಡು ಮೆಮೊರಾಂಡಮ್‌ಗಳನ್ನು ಸಲ್ಲಿಸಿದೆ. ಅವುಗಳಲ್ಲಿ 177 ತಾಲೂಕುಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು ₹46,000 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಆದರೆ ನಷ್ಟದ ಸಂಪೂರ್ಣ ಮೊತ್ತವನ್ನು ಕೇಂದ್ರ ಸರ್ಕಾರದಿಂದ ಪರಿಹಾರವಾಗಿ ಪಡೆಯಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎನ್‌ಡಿಆರ್‌ಎಫ್ (NDRF) ಮಾರ್ಗಸೂಚಿಗಳ ಪ್ರಕಾರ ಲೆಕ್ಕಾಚಾರ ಮಾಡಿ ಸುಮಾರು ₹11,000ರಿಂದ ₹11,500 ಕೋಟಿ ನೆರವು ಕೋರಲಾಗಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸರ್ಕಾರ ಈಗಾಗಲೇ ತಂಡಗಳನ್ನು ರಾಜ್ಯಕ್ಕೆ ಕಳುಹಿಸಿದ್ದು, ಅವು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ತಂಡಗಳು ಕೇಂದ್ರಕ್ಕೆ ವರದಿ ಸಲ್ಲಿಸಿದ ಬಳಿಕ ಎಷ್ಟು ಅನುದಾನ ನೀಡಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಅವರು ಹೇಳಿದರು.

ಕೇಂದ್ರ ತಂಡಗಳು ಎಲ್ಲ ತಾಲೂಕು ಹಾಗೂ ಪ್ರತಿಯೊಂದು ಗ್ರಾಮಕ್ಕೂ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿಯೊಂದು ಸ್ಥಳಕ್ಕೂ ತಂಡ ತೆರಳಬೇಕೆಂಬ ನಿಯಮವಿಲ್ಲ. ತಂಡಗಳು ಆಯ್ದ ಪ್ರದೇಶಗಳಲ್ಲಿ ಮಾದರಿ ಪರಿಶೀಲನೆ ನಡೆಸುತ್ತವೆ ಎಂದರು. ಕೇಂದ್ರ ಸರ್ಕಾರದ ಬಳಿಯೂ ಉಪಗ್ರಹ ಆಧಾರಿತ ದತ್ತಾಂಶವಿದ್ದು, ಬೆಳೆ ಹಾಗೂ ಬರ ಪರಿಸ್ಥಿತಿಯ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ರಾಜ್ಯಕ್ಕೆ ಮೂರು ಕೇಂದ್ರ ತಂಡಗಳು ಬಂದಿದ್ದು, ಬರ ಹೆಚ್ಚು ಮತ್ತು ಕಡಿಮೆ ಇರುವ ಜಿಲ್ಲೆಗಳ ಕುರಿತು ರಾಜ್ಯ ಸರ್ಕಾರವೇ ಅವರಿಗೆ ಮಾಹಿತಿ ನೀಡಿತ್ತು ಎಂದು ಅವರು ವಿವರಿಸಿದರು.

2023ರ ಬರವನ್ನು ನೆನಪಿಸಿದ ಅವರು, ಆ ಸಂದರ್ಭದಲ್ಲಿ ಸುಮಾರು ₹49,000 ಕೋಟಿ ನಷ್ಟವಾಗಿತ್ತು. ರಾಜ್ಯ ಸರ್ಕಾರ ಸುಮಾರು ₹18,000 ಕೋಟಿ ನೆರವು ಕೋರಿದ್ದರೂ ಆರಂಭದಲ್ಲಿ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿರಲಿಲ್ಲ. ಬಳಿಕ ರಾಜ್ಯ ಸರ್ಕಾರ ನ್ಯಾಯಾಲಯದ ಮೊರೆ ಹೋದ ನಂತರ ನ್ಯಾಯಾಲಯದ ನಿರ್ದೇಶನದ ಮೇರೆಗೆ ಸುಮಾರು ₹3,500 ಕೋಟಿ ಬಿಡುಗಡೆಯಾಯಿತು ಎಂದು ಹೇಳಿದರು.

ರೈತರ ಸಾಲ ವಸೂಲಿ ಮುಂದೂಡಿಕೆ; ನೋಟಿಸ್‌ಗೆ ಆತಂಕಪಡಬೇಕಿಲ್ಲ
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಸಾಲ ವಸೂಲಿ ವಿಚಾರದಲ್ಲಿಯೂ ಸರ್ಕಾರ ಕ್ರಮ ಕೈಗೊಂಡಿದೆ. ಸಾಲ ವಸೂಲಿಯನ್ನು ಮುಂದೂಡುವಂತೆ ಬ್ಯಾಂಕ್‌ಗಳಿಗೆ ಸೂಚನೆ ನೀಡಲಾಗಿದ್ದು, ಸಾಲಗಳನ್ನು ಮರುಹೊಂದಿಕೆ ಮತ್ತು ಮರುಹಣಕಾಸು ಮಾಡುವ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಬ್ಯಾಂಕ್‌ಗಳು ನೋಟಿಸ್ ನೀಡುತ್ತಿರುವ ಬಗ್ಗೆ ಕೇಳಿದಾಗ, ರೈತರು ಆತಂಕಪಡಬೇಕಿಲ್ಲ. ಸಾಲ ವಸೂಲಿಯನ್ನು ಮುಂದೂಡಲು ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಖಾಸಗಿ ಹಣಕಾಸು ಸಂಸ್ಥೆಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೂ ಈ ಸಂಬಂಧ ಸೂಚನೆ ನೀಡಲಾಗುತ್ತಿದೆ ಎಂದರು.

ರೈತರ ಸಾಲ ಮನ್ನಾ ಮತ್ತು ಬಡ್ಡಿ ಮನ್ನಾ ಬೇಡಿಕೆಯ ಕುರಿತು ಕೇಳಿದ ಪ್ರಶ್ನೆಗೆ, ಪ್ರಸ್ತುತ ರೈತರಿಗೆ ತಕ್ಷಣದ ಆರ್ಥಿಕ ನೆರವು ನೀಡುವುದು ಹಾಗೂ ಸಾಲ ವಸೂಲಿಯನ್ನು ಮುಂದೂಡುವುದು ಸೇರಿದಂತೆ ಹಲವು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿ ಇನ್ನಷ್ಟು ನೆರವು ನೀಡಲಾಗುವುದು ಎಂದರು.

ಬರ ಪರಿಹಾರದಿಂದ ಸರ್ಕಾರದ ಹಣಕಾಸಿನ ಮೇಲೆ ಒತ್ತಡ ಉಂಟಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ, ಯಾವುದೇ ದೊಡ್ಡ ಯೋಜನೆ ಅಥವಾ ಕಾರ್ಯಕ್ರಮ ಜಾರಿಗೆ ತಂದಾಗ ಹಣಕಾಸಿನ ಹೊರೆ ಸಹಜ. ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಪ್ರತಿವರ್ಷ ಸುಮಾರು ₹52,000 ಕೋಟಿ ವೆಚ್ಚ ಮಾಡುತ್ತಿದ್ದರೂ ಅವುಗಳನ್ನು ನಿಲ್ಲಿಸಿಲ್ಲ ಎಂದರು.

“ಹಣಕಾಸಿನ ಲಭ್ಯತೆಯನ್ನು ನೋಡಿಕೊಂಡು ಯಾವ ಕೆಲಸವನ್ನು ಮೊದಲು ಮಾಡಬೇಕು, ಯಾವುದನ್ನು ನಂತರ ಮಾಡಬೇಕು ಎಂಬುದನ್ನು ಆದ್ಯತೆ ಮೇರೆಗೆ ನಿರ್ಧರಿಸುತ್ತೇವೆ. ಈಗ ನಮಗೆ ರೈತನೇ ಮೊದಲ ಆದ್ಯತೆ. ರಸ್ತೆ ಕಾಮಗಾರಿ ಸೇರಿದಂತೆ ಉಳಿದ ಕೆಲಸಗಳು ನಂತರವಾದರೂ ಆಗಬಹುದು. ರೈತನನ್ನು ಉಳಿಸುವುದು ಮೊದಲ ಕೆಲಸ” ಎಂದು ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಅಥವಾ ಆಡಳಿತದ ಕಾರ್ಯನಿರ್ವಹಣೆಯ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, ಸರ್ಕಾರದ ಕೆಲಸ ಎಲ್ಲಿಯೂ ನಿಂತಿಲ್ಲ. ಜಿಲ್ಲಾಡಳಿತ ತನ್ನ ಕೆಲಸ ಮಾಡುತ್ತಿದೆ ಹಾಗೂ ಸರ್ಕಾರ ಕೇಂದ್ರ ಮಟ್ಟದಿಂದ ಪರಿಸ್ಥಿತಿಯನ್ನು ಮಾನಿಟರ್ ಮಾಡುತ್ತಿದೆ. ಜಿಲ್ಲಾ ಉಸ್ತುವಾರಿ ವ್ಯವಸ್ಥೆಯಲ್ಲಿ ಒಂದೆರಡು ತಿಂಗಳು ಅಥವಾ ಕೆಲವು ತಿಂಗಳು ಅಂತರ ಉಂಟಾದರೂ ಆಡಳಿತದ ಕೆಲಸ ನಿಲ್ಲುವುದಿಲ್ಲ. ಅಗತ್ಯ ಕ್ರಮಗಳನ್ನು ಶೀಘ್ರ ಕೈಗೊಳ್ಳಲಾಗುವುದು ಎಂದರು.

ಹಾಲಿನ ದರ ಏರಿಕೆಯ ಪ್ರಸ್ತಾಪ ಮತ್ತು ಜನರ ಮೇಲಿನ ಆರ್ಥಿಕ ಹೊರೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿ. ಪರಮೇಶ್ವರ ಅವರು, ಹಾಲು ಉತ್ಪಾದಿಸುವ ರೈತರಿಗೂ ಸೂಕ್ತ ಬೆಲೆ ಮತ್ತು ಪ್ರೋತ್ಸಾಹ ನೀಡಬೇಕಿದೆ ಎಂದರು. ಒಂದು ಕಡೆ ಗ್ರಾಹಕರ ಹಿತವಿದ್ದರೆ, ಇನ್ನೊಂದು ಕಡೆ ಹಾಲು ಉತ್ಪಾದಕ ರೈತರ ಬದುಕೂ ಇದೆ. ರೈತರಿಗೆ ಪ್ರೋತ್ಸಾಹ ನೀಡದೆ ಹೈನುಗಾರಿಕೆಯನ್ನು ಉಳಿಸಲು ಸಾಧ್ಯವಿಲ್ಲ. ಹೀಗಾಗಿ ರೈತರು ಮತ್ತು ಗ್ರಾಹಕರ ಹಿತವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದರು.

Tags: 152023amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ನೂತನ ಜವಳಿ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ; ಫಲಾನುಭವಿಗಳಿಗೆ ಪ್ರೋತ್ಸಾಹ ತಲುಪಿಸಿ: ಕಾರ್ಯದರ್ಶಿ ರೋಹಿಣಿ ಸಿಂಧೂರಿ

October 7, 2026

ಗ್ರಾಮಗಳಲ್ಲೇ ಉದ್ಯೋಗ ನೀಡುತ್ತೇವೆ; ವಲಸೆ ಹೋಗಬೇಡಿ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಭರವಸೆ

October 7, 2026

ಭೀಕರ ಬರ; ರೈತರಿಗೆ ಅಗತ್ಯ ನೆರವು ಕಲ್ಪಿಸುವುದೇ ಸರ್ಕಾರದ ಮೊದಲ ಆದ್ಯತೆ: ಡಿಸಿಎಂ ಜಿ. ಪರಮೇಶ್ವರ

October 7, 2026

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

October 7, 2026

Recent News

ಏಷ್ಯನ್‌ ಗೇಮ್ಸ್‌ ಪದಕ ವಿಜೇತರನ್ನು ಅಭಿನಂದಿಸಿ ಶುಭಹಾರೈಸಿದ ಸಿಎಂ, ಡಿಸಿಎಂ

October 6, 2026

ಸೌರವ್ ಗಂಗೂಲಿ ದೆಹಲಿ ಕ್ಯಾಪಿಟಲ್ಸ್‌ನ ಹೊಸ ಹೆಡ್ ಕೋಚ್

October 6, 2026

ಬರಗಾಲದಲ್ಲಿ ಜನರ ಮೇಲೆ ಬರೆ: ಕಂದಾಯ ಶುಲ್ಕ ಏರಿಕೆಗೆ ಆರ್. ಅಶೋಕ್‌ ಟೀಕೆ

October 5, 2026

ಬೆಂಗಳೂರು ‘ಮಾದಕ ನಗರ’ವಾಗುತ್ತಿದೆ: ಆರ್. ಅಶೋಕ್ ಆರೋಪ

October 5, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.