Sunday, November 1, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜ ಸ್ಥಾನಮಾನ: ಬೆಳಗಾವಿ ಅಧಿವೇಶನದಲ್ಲಿ ಚರ್ಚೆ:ಸಿಎಂ ಡಿಕೆ ಶಿವಕುಮಾರ್

Ranjitha by Ranjitha
3 hours ago
Reading Time: 1 min read
A A
100
VIEWS

ಸರ್ಕಾರಿ ಕಚೇರಿ-ಸಂಸ್ಥೆಗಳಲ್ಲಿ ಕನ್ನಡ ಧ್ವಜ ಹಾರಿಸುವುದನ್ನು ಕಡ್ಡಾಯಗೊಳಿಸುವ ಚಿಂತನೆ

ಬೆಂಗಳೂರು: ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜದ ಸ್ಥಾನಮಾನ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಸದಾಶಿವನಗರ ನಿವಾಸ ಮತ್ತು ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಬಳಿ ಮಾಧ್ಯಮಗಳಿಗೆ ಮಾತನಾಡಿದ ಸಿಎಂ, “ನಾನು ಈಗಷ್ಟೇ ರಾಷ್ಟ್ರಧ್ವಜದ ಪಕ್ಕ ಕನ್ನಡ ಧ್ವಜ ಹಾರಿಸಿದ್ದೇನೆ. ಈ ಕನ್ನಡ ಬಾವುಟಕ್ಕೆ ಅಧಿಕೃತ ಸ್ಥಾನಮಾನ ನೀಡಲು ಮುಂದಾಗಿದ್ದೇವೆ” ಎಂದರು.

“ಈ ಹಿಂದೆ ಸಂಪುಟದಲ್ಲಿ ತೀರ್ಮಾನ ಮಾಡಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆವು. ಆದರೆ ಇನ್ನೂ ಮಾನ್ಯತೆ ಸಿಕ್ಕಿಲ್ಲ. ಇತ್ತೀಚೆಗೆ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದು, ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಲಾಗುವುದು. ರಾಷ್ಟ್ರಧ್ವಜದ ಗೌರವ ಮತ್ತು ನಿಯಮಗಳಿಗೆ ಧಕ್ಕೆಯಾಗದಂತೆ ಕನ್ನಡ ಧ್ವಜದ ಬಳಕೆ, ಸ್ಥಾನಮಾನ ಹಾಗೂ ಸಂರಕ್ಷಣೆಗೆ ಸಂಬಂಧಿಸಿದ ಕಾನೂನು ಅಂಶಗಳನ್ನು ಪರಿಶೀಲಿಸಲಾಗುತ್ತಿದೆ” ಎಂದು ವಿವರಿಸಿದರು.

ಮತ್ತೊಮ್ಮೆ ಸಂಪುಟದಲ್ಲಿ ತೀರ್ಮಾನ ಮಾಡಿ ಕಾನೂನು ತಂದು ರಾಷ್ಟ್ರಧ್ವಜದ ಪಕ್ಕ ಕನ್ನಡ ಧ್ವಜ ಹಾರಿಸಲು ಸರ್ಕಾರ ಬದ್ಧವಾಗಿದೆ. ವಿಧಾನಸೌಧದಲ್ಲೂ ಈ ಧ್ವಜ ಹಾರಿಸಲು ಸಾರ್ವಜನಿಕ ಹಾಗೂ ಶಾಸಕರ ಚರ್ಚೆಗೆ ಅವಕಾಶ ಮಾಡಿಕೊಟ್ಟು ಚಳಿಗಾಲದ ಅಧಿವೇಶನದಲ್ಲಿ ಹೊಸ ರೂಪ ನೀಡಲು ಮುಂದಾಗುವುದಾಗಿ ಸಿಎಂ ಹೇಳಿದರು.

ಕನ್ನಡ ಧ್ವಜ ಹಾರಿಸುವುದನ್ನು ಕಡ್ಡಾಯಗೊಳಿಸುವ ಚಿಂತನೆ

“ಕನ್ನಡ ರಾಜ್ಯೋತ್ಸವದ 71ನೇ ವರ್ಷದಿಂದ ಮುಂದಿನ ಒಂದು ವರ್ಷದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಕನ್ನಡದ ಹಿರಿಮೆ ಸಾರಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಎಲ್ಲ ಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಧ್ವಜ ಹಾರಿಸುವುದರ ಜತೆಗೆ, ಸರ್ಕಾರದ ಬೆಂಬಲ ಹೊಂದಿರುವ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸುವ ಚಿಂತನೆ ಇದೆ. ಖಾಸಗಿ ಸಂಸ್ಥೆಗಳೂ ಕನ್ನಡ ಧ್ವಜ ಹಾರಿಸುವಂತೆ ಈ ತಿಂಗಳಲ್ಲೇ ಸರ್ಕಾರದ ಆದೇಶ ಹೊರಡಿಸಲು ಸಿದ್ಧತೆ ನಡೆಸಲಾಗುತ್ತಿದೆ” ಎಂದು ಸಿಎಂ ತಿಳಿಸಿದರು.

ಕನ್ನಡ ಹೃದಯದ ಭಾಷೆಯಾಗಬೇಕು

“ನಮ್ಮ ಉಸಿರು, ಹೆಸರು, ಕಸುಬು ಕನ್ನಡ. ತನು ಕನ್ನಡ, ಮನ ಕನ್ನಡ, ನುಡಿ ಕನ್ನಡ, ನಡೆ ಕನ್ನಡ. ಕನ್ನಡ ಕೇವಲ ಸರ್ಕಾರಿ ಭಾಷೆ ಮಾತ್ರವಲ್ಲ, ಹೃದಯದ ಭಾಷೆಯಾಗಬೇಕು. ಭಾಷೆ ಎಂಬುದು ಬದುಕು. ಭಾಷೆ ಇಲ್ಲದ ಬದುಕು ಮೂಕಿಚಿತ್ರದಂತಾಗುತ್ತದೆ” ಎಂದು ಸಿಎಂ ಕರೆ ನೀಡಿದರು.

ಮಾತೃಭಾಷೆಯಲ್ಲಿ ಕಲಿಯುವ ಜ್ಞಾನ ಗಟ್ಟಿಯಾಗಿರುತ್ತದೆ ಎಂದು ಹೇಳಿದ ಅವರು, ಕನ್ನಡಕ್ಕೆ ಕಿರುಬೆರಳು ಎತ್ತಿದರೂ ಅದು ಗೋವರ್ಧನಗಿರಿಯಾಗುತ್ತದೆ ಎಂಬ ಕುವೆಂಪು ಅವರ ಮಾತನ್ನು ಸ್ಮರಿಸಿದರು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಹಾಗೂ ಎಂಟು ಜ್ಞಾನಪೀಠ ಪ್ರಶಸ್ತಿಗಳು ಸಂದಿರುವುದನ್ನು ನೆನಪಿಸಿದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಮೀಸಲಾತಿ, ನಗರ ಮಕ್ಕಳಿಗೆ ಗ್ರಾಮಾನುಭವ

ಗ್ರಾಮೀಣ ಸರ್ಕಾರಿ ಶಾಲೆಗಳ 1ನೇ ತರಗತಿಯಿಂದ ಪಿಯು ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದಲ್ಲಿ ಶೇ.7ರಷ್ಟು ಮೀಸಲಾತಿ ನೀಡಲಾಗಿದೆ ಎಂದು ಸಿಎಂ ತಿಳಿಸಿದರು. ಇದರಿಂದ ಗ್ರಾಮೀಣ ಮಕ್ಕಳಿಗೆ ಇಂಜಿನಿಯರ್, ವೈದ್ಯ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಸಿಗುವುದು ಗುರಿ.

ನಗರದ ವಿದ್ಯಾರ್ಥಿಗಳಿಗೆ ಹಳ್ಳಿಗಳ ಬದುಕಿನ ಪರಿಚಯಕ್ಕಾಗಿ ‘ಗ್ರಾಮಾನುಭವ’ ಕಾರ್ಯಕ್ರಮ ರೂಪಿಸಲಾಗಿದೆ. ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಲಾ ಮಕ್ಕಳಿಗೆ 2-3 ದಿನಗಳ ಗ್ರಾಮವಾಸ್ತವ್ಯ ಮೂಲಕ ಕೃಷಿ, ತೋಟಗಾರಿಕೆ ಮತ್ತು ಗ್ರಾಮೀಣ ಸಂಸ್ಕೃತಿ ಪರಿಚಯಿಸಲಾಗುವುದು.

ಯುವಕರಿಗೆ ಪ್ರೋತ್ಸಾಹ, ರೈತರಿಗೆ ಹಾಲು ದರ ಏರಿಕೆ

ರಾಜ್ಯದಲ್ಲಿ 10 ಸಾವಿರ ‘ಭಾರತ ಜೋಡೋ’ ಯುವ ಸಂಘಗಳನ್ನು ಸ್ಥಾಪಿಸಿ 16-35 ವರ್ಷದೊಳಗಿನ ಯುವಕರನ್ನು ಸದಸ್ಯರನ್ನಾಗಿ ಮಾಡಲಾಗುವುದು. ಈ ಸಂಘಗಳಿಗೆ ವಾರ್ಷಿಕ 10 ಲಕ್ಷ ಅನುದಾನ ನೀಡಲಾಗುವುದು ಎಂದು ಸಿಎಂ ಹೇಳಿದರು.

ರೈತರಿಗೆ ಶಕ್ತಿ ತುಂಬಲು ಪ್ರತಿ ಲೀಟರ್ ಹಾಲಿನ ಬೆಲೆಯನ್ನು 8 ರೂ. ಹೆಚ್ಚಿಸಲಾಗಿದೆ. ಇದರಲ್ಲಿ 7 ರೂ. ರೈತರಿಗೆ ತಲುಪಲಿದ್ದು, 11 ಲಕ್ಷ ರೈತ ಕುಟುಂಬಗಳಿಗೆ ನೆರವಾಗಲಿದೆ.

ಮುಖ್ಯಮಂತ್ರಿ ರಸ್ತೆ ಸಂಪರ್ಕ ಯೋಜನೆಗೆ 10 ಸಾವಿರ ಕೋಟಿ ನೀಡಲಾಗಿದ್ದು, 20 ಸಾವಿರ ಕಿ.ಮೀ. ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ರಸ್ತೆಗಳ ಅಭಿವೃದ್ಧಿಗೆ ಪ್ರತಿ ಪಂಚಾಯ್ತಿಗೆ 6 ಸಾವಿರ ಕೋಟಿ ಹಣ ನೀಡಲು ಸಂಪುಟ ತೀರ್ಮಾನಿಸಿದೆ ಎಂದು ಸಿಎಂ ಮಾಹಿತಿ ನೀಡಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ

ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನೇತೃತ್ವದ ಪ್ರತಿಭಟನೆ ಕುರಿತು ಕೇಳಿದಾಗ, “ಮತದಾನದ ಹಕ್ಕು ಎಂದರೆ ಬದುಕುವ ಹಕ್ಕಿದ್ದಂತೆ. ಲಕ್ಷಾಂತರ ಜನರ ಮತಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕಲಾಗಿದೆ. ಪ್ರತಿಯೊಬ್ಬ ಮತದಾರರ ಹಕ್ಕನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಸಿಎಂ ಹೇಳಿದರು.

ಕರ್ನಾಟಕದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಮತಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿದ ಅವರು, ಈ ಅನ್ಯಾಯದ ವಿರುದ್ಧ ಹೋರಾಟ ಮುಂದುವರಿಯುವುದಾಗಿ ತಿಳಿಸಿದರು.

Tags: 16amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜ ಸ್ಥಾನಮಾನ: ಬೆಳಗಾವಿ ಅಧಿವೇಶನದಲ್ಲಿ ಚರ್ಚೆ:ಸಿಎಂ ಡಿಕೆ ಶಿವಕುಮಾರ್

November 1, 2026

71ನೇ ಕನ್ನಡ ರಾಜ್ಯೋತ್ಸವ: ಕಂಠೀರವದಲ್ಲಿ ಧ್ವಜಾರೋಹಣ ನೆರವೇರಿಸಿ ಸಮಾರಂಭ ಉದ್ಘಾಟಿಸಿದ ಸಿಎಂ ಡಿಕೆ ಶಿವಕುಮಾರ್

November 1, 2026

71ನೇ ಕನ್ನಡ ರಾಜ್ಯೋತ್ಸವ: ವಿಧಾನಸೌಧದಲ್ಲಿ ನಾಡದೇವಿ ಭುವನೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

November 1, 2026

ಹಾಲು ದರ ಏರಿಕೆಯಿಂದ 5 ಲಕ್ಷ ಉದ್ಯೋಗ ಸೃಷ್ಟಿ: ಗ್ರಾಮೀಣ ಆರ್ಥಿಕತೆ ಬಲಪಡಿಸಿ ವಲಸೆ ತಡೆಯುವ ಗುರಿ – ಸರ್ಕಾರ

October 31, 2026

Recent News

ಭಾರತ ಪುರುಷರ ತಂಡಕ್ಕೆ ಕಾಮನ್‌ವೆಲ್ತ್ ಕಬಡ್ಡಿ ಚಾಂಪಿಯನ್‌ಶಿಪ್ ಗೆಲುವು

November 1, 2026

ಭಾರತ ಮಹಿಳಾ ಕಬಡ್ಡಿ ತಂಡ ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ನಿರ್ಮಿಸಿತು

November 1, 2026

ಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ 2026ನೇ ಸಾಲಿನ 24ನೇ ಸಚಿವ ಸಂಪುಟ ಸಭೆ: ನಿರ್ಣಯಗಳ ಬಗ್ಗೆ ಸಚಿವ ಕೃಷ್ಣ ಬೈರೇಗೌಡರಿಂದ ಮಾಧ್ಯಮಗೋಷ್ಠಿ

October 29, 2026

ಕರ್ನಾಟಕದ ರಾಜ್ಯಪಾಲ ಡಾ. ಸುಧಾ ಯಾದವ್ ಅವರಿಂದ ಪ್ರಧಾನಿ ಮೋದಿ ಭೇಟಿ

October 29, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.