Tuesday, November 24, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home Special

ವಿಕಲಚೇತನರ ಸಬಲೀಕರಣದಲ್ಲಿ ಕರ್ನಾಟಕ ‘ಮಾಡೆಲ್’: ವಿಶ್ವಸಂಸ್ಥೆ ವಿಶೇಷ ವರದಿಗಾರರಿಂದ ಶ್ಲಾಘನೆ

Ranjitha by Ranjitha
3 days ago
Reading Time: 1 min read
A A
100
VIEWS

ಬೆಂಗಳೂರು: ವಿಕಲಚೇತನರ ಹಕ್ಕುಗಳ ರಕ್ಷಣೆ ಮತ್ತು ಸಮಗ್ರ ಸಬಲೀಕರಣಕ್ಕಾಗಿ ಕರ್ನಾಟಕ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ವಿನೂತನ ಯೋಜನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿವೆ. ವಿಶ್ವಸಂಸ್ಥೆಯ ವಿಕಲಚೇತನರ ಹಕ್ಕುಗಳ ವಿಶೇಷ ವರದಿಗಾರರಾದ ಶ್ರೀಮತಿ ಹೆಬಾ ಹಗ್ರಾಸ್ ಅವರು ರಾಜ್ಯ ಸರ್ಕಾರದ ಕಾರ್ಯವೈಖರಿ ಮತ್ತು ಇಲಾಖೆಗಳ ನಡುವಿನ ಸಮನ್ವಯವನ್ನು ಮುಕ್ತಕಂಠದಿಂದ ಮೆಚ್ಚಿದ್ದಾರೆ.

ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಮನ್ವಯದಲ್ಲಿ ಭಾರತ ಪ್ರವಾಸ ಕೈಗೊಂಡಿರುವ ಹೆಬಾ ಹಗ್ರಾಸ್ ಅವರು ನವೆಂಬರ್ 20 ಮತ್ತು 21ರಂದು ಬೆಂಗಳೂರಿಗೆ ಭೇಟಿ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತು ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ರಾಜ್ಯದ ಸಾಧನೆಗಳ ವಿಸ್ತೃತ ವರದಿಯನ್ನು ಅವರ ಮುಂದಿಟ್ಟರು.

ಉದ್ಯೋಗ ಮತ್ತು ವಸತಿ ಮೀಸಲಾತಿ
ಸರ್ಕಾರಿ ಉದ್ಯೋಗಗಳಲ್ಲಿ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಶೇ.4 ಹಾಗೂ ಸಿ ಮತ್ತು ಡಿ ಹುದ್ದೆಗಳಿಗೆ ಶೇ.5ರಷ್ಟು ಮೀಸಲಾತಿ ನೀಡಲಾಗಿದ್ದು, ಪ್ರಸ್ತುತ 11,120 ವಿಕಲಚೇತನರು ಸರ್ಕಾರಿ ಸೇವೆಯಲ್ಲಿದ್ದಾರೆ. ಬಿಡಿಎ ಮತ್ತು ಸರ್ಕಾರಿ ನಿವೇಶನ ಹಂಚಿಕೆಯಲ್ಲಿ ಶೇ.5ರಷ್ಟು ಮೀಸಲಾತಿಯೊಂದಿಗೆ ದರದಲ್ಲಿ ಶೇ.25ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

ದತ್ತು ಸ್ವೀಕಾರದಲ್ಲಿ ಹೊಸ ಮೈಲಿಗಲ್ಲು
ವಿಶೇಷ ಅಗತ್ಯವುಳ್ಳ 172 ಮಕ್ಕಳನ್ನು ದತ್ತು ನೀಡುವ ಮೂಲಕ ಕರ್ನಾಟಕ ಹೊಸ ದಾಖಲೆ ಸ್ಥಾಪಿಸಿದೆ. ಇದರಲ್ಲಿ 137 ಮಕ್ಕಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ದತ್ತು ಸ್ವೀಕಾರವಾಗಿರುವುದು ವಿಶೇಷ.

ತಂತ್ರಜ್ಞಾನ ಸ್ನೇಹಿ ಗ್ರಾಮೀಣ ಗ್ರಂಥಾಲಯಗಳು
ರಾಜ್ಯದ 5,888 ಗ್ರಾಮ ಪಂಚಾಯತ್ ಗ್ರಂಥಾಲಯಗಳನ್ನು ಡಿಜಿಟಲ್ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ದೃಷ್ಟಿಹೀನರಿಗಾಗಿ 350 ಕೇಂದ್ರಗಳಲ್ಲಿ ಅಲೆಕ್ಸಾ ಧ್ವನಿ ಸಹಾಯಕ ವ್ಯವಸ್ಥೆ ಮತ್ತು 800 ಕೇಂದ್ರಗಳಲ್ಲಿ ಬೀಕನ್ ವ್ಯವಸ್ಥೆ ಅಳವಡಿಸಲಾಗಿದೆ.

ಸಾಮಾಜಿಕ ಭದ್ರತೆ ಮತ್ತು ಆರೈಕೆ
9.77 ಲಕ್ಷಕ್ಕೂ ಹೆಚ್ಚು ಮಂದಿಗೆ ಯುಡಿಐಡಿ (UDID) ಕಾರ್ಡ್ ವಿತರಿಸಲಾಗಿದೆ. 5 ಲಕ್ಷಕ್ಕೂ ಹೆಚ್ಚು ವಿಕಲಚೇತನರಿಗೆ ಮಾಸಿಕ ₹1,400 ಪಿಂಚಣಿ, ತೀವ್ರ ಬೌದ್ಧಿಕ ವಿಕಲಚೇತನರಿಗೆ ₹2,000 ಪಿಂಚಣಿ, 10,835 ಆರೈಕೆದಾರರಿಗೆ ಮಾಸಿಕ ಭತ್ಯೆ ಹಾಗೂ 1,620 ಅಂಧ ತಾಯಂದಿರಿಗೆ ಶಿಶುಪಾಲನಾ ಭತ್ಯೆ ನೀಡಲಾಗುತ್ತಿದೆ. 11 ಲಕ್ಷಕ್ಕೂ ಹೆಚ್ಚು ಮಂದಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲಾಗಿದೆ.

ಆರೋಗ್ಯ ಮತ್ತು ಪುನರ್ವಸತಿ
18 ಜಿಲ್ಲಾ ಆರಂಭಿಕ ಹಸ್ತಕ್ಷೇಪ ಕೇಂದ್ರಗಳ (DEIC) ಮೂಲಕ 20,601 ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್ದು, 18 ಪುನರ್ವಸತಿ ಕೇಂದ್ರಗಳಿಂದ 2.77 ಲಕ್ಷಕ್ಕೂ ಹೆಚ್ಚು ಮಂದಿ ಪ್ರಯೋಜನ ಪಡೆದಿದ್ದಾರೆ. ಟೆಲಿ-ಮಾನಸ್ ಸಹಾಯವಾಣಿ (14416) ಮೂಲಕ 1.2 ಲಕ್ಷ ಕರೆಗಳಿಗೆ ಸ್ಪಂದಿಸಲಾಗಿದೆ. ನಿಮ್ಹಾನ್ಸ್ ಮತ್ತು ಮೈಸೂರಿನ AIISH ಸಂಸ್ಥೆಗಳ ಸೇವೆಗಳನ್ನೂ ಸಭೆಯಲ್ಲಿ ಪ್ರಸ್ತುತಪಡಿಸಲಾಯಿತು.

ಶಿಕ್ಷಣ ಮತ್ತು ವಿಪತ್ತು ನಿರ್ವಹಣೆ
ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿಕಲಚೇತನ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ. ಪ್ರವಾಹ ಮತ್ತು ಭೂಕುಸಿತ ಪೀಡಿತ ಗ್ರಾಮಗಳಲ್ಲಿ ವಿಕಲಚೇತನರ ಮ್ಯಾಪಿಂಗ್ ಮಾಡಿ, ಆಶ್ರಯ ಕೇಂದ್ರಗಳಲ್ಲಿ ಮುಂಚಿತವಾಗಿ ರಾಂಪ್ ಹಾಗೂ ವಿಶೇಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ.

ಮುಂದಿನ ಹೆಜ್ಜೆ: ಆರು ಅಂಶಗಳ ಕ್ರಿಯಾ ಯೋಜನೆ
ಸಭೆಯಲ್ಲಿ ಸಾಧನೆಗಳ ಜೊತೆಗೆ ಅನುಷ್ಠಾನದಲ್ಲಿರುವ ಸವಾಲುಗಳನ್ನೂ ಅಧಿಕಾರಿಗಳು ಪ್ರಾಮಾಣಿಕವಾಗಿ ತೆರೆದಿಟ್ಟರು. ಬಾಕಿ ಇರುವ 13 ಜಿಲ್ಲೆಗಳಲ್ಲಿ ಆರಂಭಿಕ ಹಸ್ತಕ್ಷೇಪ ಕೇಂದ್ರಗಳು (DEIC) ಮತ್ತು ಪುನರ್ವಸತಿ ಕೇಂದ್ರಗಳನ್ನು (DDRC) ಶೀಘ್ರ ಪ್ರಾರಂಭಿಸುವುದು, ವಿಶೇಷ ಶಾಲೆಗಳನ್ನು ಉಪಗ್ರಹ ಸಂಪನ್ಮೂಲ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸುವುದು ಸೇರಿದಂತೆ ‘ಆರು ಅಂಶಗಳ ಕ್ರಿಯಾ ಯೋಜನೆ’ಯನ್ನು ರೂಪಿಸಲಾಗಿದೆ.

ರಾಜ್ಯದ ಕಂದಾಯ, ಉನ್ನತ ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ವಿಕಲಚೇತನರ ಆರೋಗ್ಯ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ನಿಮ್ಹಾನ್ಸ್ ಮತ್ತು ಮೈಸೂರಿನ AIISH ನಿರ್ದೇಶಕರು ಸಹ ಉಪಸ್ಥಿತರಿದ್ದು, ತಮ್ಮ ಸಂಸ್ಥೆಗಳ ವಿಶೇಷ ಸೇವೆಗಳು ಮತ್ತು ಸಂಶೋಧನೆಗಳ ಕುರಿತು ಮಾಹಿತಿ ನೀಡಿದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ರಾಜ್ಯದಲ್ಲಿ ಉದ್ಯೋಗಾವಕಾಶಗಳ ಕೊರತೆಯಿಲ್ಲ, ನುರಿತ ಸಿಬ್ಬಂದಿಯ ಅಭಾವವಿದೆ: ದಿನೇಶ್ ಗುಂಡೂರಾವ್

November 22, 2026

ರೈತರ ಬರ ಪರಿಹಾರವನ್ನು ₹5 ಸಾವಿರದಿಂದ ₹10 ಸಾವಿರಕ್ಕೆ ಹೆಚ್ಚಿಸಿ: ಆರ್. ಅಶೋಕ್ ಆಗ್ರಹ

November 22, 2026

ಭಾರತ್‌ ಜೋಡೋ ಯೋಜನೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮಾತ್ರ; ಬೇರೆ ಪಕ್ಷಗಳ ಸದಸ್ಯರನ್ನು ಸೇರಿಸದಂತೆ ಸೂಚನೆ: ಪ್ರತಿಪಕ್ಷ ನಾಯಕ ಆರ್‌. ಅಶೋಕ

November 21, 2026

ವಿದ್ಯಾರ್ಥಿಗಳಲ್ಲಿ ಕನ್ನಡದ ಮನಸು ಕಟ್ಟಬೇಕು: ಮೋಹನ್ ಆಳ್ವ

November 21, 2026

Recent News

ಸರ್ಕಾರಿ ಯೋಜನೆಗಳಲ್ಲಿ ವಿಳಂಬ ಸಹಿಸುವುದಿಲ್ಲ: ಡಿಸಿಎಂ ಡಾ. ಜಿ.ಪರಮೇಶ್ವರ

November 20, 2026

ಗ್ರಾಮೀಣ ರಸ್ತೆಗಳಿಗೆ ₹16,000 ಕೋಟಿ ಬಂಪರ್‌: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ನಿಂದ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಚಾಲನೆ

November 20, 2026

ಇಂದಿರಾಗಾಂಧಿ ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ: ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಡಾ. ಜಿ. ಪರಮೇಶ್ವರ

November 19, 2026

ಕುಮಾರಕೃಪಾ ಬಂಗಲೆ ನವೀಕರಣಕ್ಕೆ ಆಸಕ್ತಿ, ಜನರಿಗೆ ಮಾತ್ರ ಕೊಳಚೆ ರಸ್ತೆಗಳು: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

November 19, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.