ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ, ಗ್ರಾಮ ನೂಲ್ವಿ ಚಬ್ಬಿ-ನೂಲ್ವಿ ರಸ್ತೆಯಲ್ಲಿ ರಾಜಾರೋಷವಾಗಿ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ದಾಳಿ ನಡೆಸಿ ಬರೊಬ್ಬರಿ 16 ಜನರನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಾಲ್ಕು ದಿನಗಳಲ್ಲಿ ವಿವಿಧ ಕಡೆ ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಇನ್ಸ್ಪೆಕ್ಟರ್ ಮುರಗೇಶ್ ಚೆನ್ನಣ್ಣವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಚಿನ ಅಲ್ಮೇಲಕರ, WPSI ಚಾಮುಂಡಿ ನೇತೃತ್ವದಲ್ಲಿ ತಂಡ ದಾಳಿ ನಡೆಸಿ ಬರೊಬ್ಬರಿ 16 ಜನರು ಹಾಗೂ 36,700 ನಗದು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ಕಾರ್ಡ್ಗಳನ್ನು ವಶಪಡಿಸಿಕೊಂಡು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಸಿಬ್ಬಂದಿಗಳ ಕಾರ್ಯಚರಣೆಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.