ಬೆಂಗಳೂರು: ರಾಜ್ಯ ಸರ್ಕಾರವು ಫೆಬ್ರುವರಿ 15 ರಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಮತ್ತು ಸಂಪುಟ ಸಚಿವರೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದ ವಿಷಯದಲ್ಲಿ ಯಾವುದೇ ಬದಲಾವಣೆಗಳು ಸಂಭವಿಸಿಲ್ಲ ಎಂದು ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ತಿಳಿಸಿದ್ದಾರೆ.
ಹಿಂದೆ ಕೆಲವೊಂದು ಮಾಧ್ಯಮಗಳಲ್ಲಿ ಜಿಲ್ಲಾ ಸ್ಥಳಾಂತರ ಕುರಿತು ಗೊಂದಲದ ಸುದ್ದಿ ಪ್ರಸಾರವಾದವು. ಅದರಲ್ಲಿ, ಸಚಿವ ಸಂಪುಟ ಸಭೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ ಸ್ಥಳಾಂತರಗೊಂಡಿರಬಹುದೆಂದು ಹೇಳಲಾಗಿತ್ತು. ಆದರೆ, ಆ ರೀತಿಯ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಸಭೆ ಮೊದಲು ಘೋಷಿತವಾದಂತೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲೇ ಜರುಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.