ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮುಖ್ಯಮಂತ್ರಿ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು.
ಈ ಸಂದರ್ಭ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅತೀಕ್ ಅಹ್ಮದ್, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ವರ್ಷವೂ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವಿವಿಧ ದೇಶಗಳ ಅನೇಕ ಮೌಲ್ಯಯುತ ಚಲನಚಿತ್ರಗಳ ಪ್ರದರ್ಶನಕ್ಕೆ ವೇದಿಕೆ ಒದಗಿಸಲಿದೆ. ಅದ್ದೂರಿ ಉದ್ಘಾಟನಾ ಸಮಾರಂಭದೊಂದಿಗೆ ಮಹತ್ವದ ಚಲನಚಿತ್ರೋತ್ಸವವು ಆರಂಭಗೊಳ್ಳಲಿದ್ದು, ಚಿತ್ರರಸಿಕರಿಗಾಗಿ ವಿಭಿನ್ನ ಶ್ರೇಣಿಯ ಚಿತ್ರ ಪ್ರದರ್ಶನಗಳು ನಡೆಯಲಿವೆ.












